09.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರಿನ ಪಾವಗಡ, ಚಿತ್ರದುರ್ಗ ಉತ್ತರ, ಬಳ್ಳಾರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ, ಗುಡುಗು ಸಹಿತ ಸಾಧ್ಯತೆ ಇದೆ.
ಉಳಿದ ತುಮಕೂರು ಹಾಗೂ ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ವಿಜಯಪುರ ಜಿಲ್ಲೆಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು ಈಗಾಗಲೇ ದುರ್ಬಲಗೊಂಡಿದ್ದು ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಕ್ಷೀಣಿಸಿದೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ.
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…
ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…
2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…
1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…