Advertisement
ವೆದರ್ ಮಿರರ್

ಹವಾಮಾನ ವರದಿ | 20-07-2024 | ಕರಾವಳಿಯಲ್ಲಿ ಸಾಮಾನ್ಯ ಮಳೆ | ಮಳೆ ಕಡಿಮೆಯಾಗುವ ಲಕ್ಷಣ |

Share

21.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಹಾಗೂ ಕಡಬ ತಾಲೂಕುಗಳಲ್ಲಿ ಮತ್ತೂ ಸ್ವಲ್ಪ ಕಡಿಮೆ ಇರಬಹುದು. ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಕಲಬುರ್ಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ವಿಜಯಪುರ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಮೈಸೂರು, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ(ಚಿಕ್ಕೋಡಿ ಸಹಿತ) , ಬಾಗಲಕೋಟೆ, ಗದಗ, ಬಳ್ಳಾರಿ, ಕೊಪ್ಪಳ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಒಡಿಸ್ಸಾ ಕರಾವಳಿಯ ವಾಯುಭಾರ ಕುಸಿತದಂತಹ ತಿರುವಿಕೆಯೂ ಇಂದು ರಾತ್ರಿ ಒಡಿಸ್ಸಾ ಕರಾವಳಿ ಪ್ರವೇಶಿಸಿ ಶಿಥಿಲಗೊಳ್ಳಲಿದೆ. ಇದರ ಪ್ರಭಾವದಿಂದ ಮಹಾರಾಷ್ಟ್ರದಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಸಹ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಅರಬ್ಬಿ ಸಮುದ್ರದ ಮಾರುತಗಳು ಉತ್ತರಕ್ಕೆ ಸೆಳೆಯಲ್ಪಡುವುದರಿಂದ ಕೇರಳದಲ್ಲಿ ಜುಲೈ 22ರಿಂದ ಮುಂಗಾರು ಸ್ವಲ್ಪ ಮಟ್ಟಿಗೆ ದುರ್ಬಲಗೊಳ್ಳುವ ಸಾಧ್ಯತೆ ಇದ್ದು, ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಮುಂಗಾರು ಕ್ಷೀಣಿಸುವ ಲಕ್ಷಣಗಳಿವೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ

ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…

5 hours ago

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

18 hours ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

1 day ago

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…

2 days ago

ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!

ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…

3 days ago