ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣಾ ಮಂಡಳಿ ವತಿಯಿಂದ ಬೆಂಗಳೂರಿನ ದೇವರಾಜ ಅರಸು ಟ್ರಕ್ ಟರ್ಮಿನಲ್ ನಲ್ಲಿ ವಿಶ್ವ ಏಡ್ಸ್ ದಿನಾಚರಣೆ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್, ರಾಜ್ಯದಲ್ಲಿ ಏಡ್ಸ್ ಸೋಂಕಿತರ ಪ್ರಮಾಣ ವರ್ಷದಿಂದ ವರ್ಷಕ್ಕೆ ಗಣನೀಯವಾಗಿ ತಗ್ಗುತ್ತಿದೆ. ಸಾವಿನ ಪ್ರಮಾಣವೂ ಗಣನೀಯ ಪ್ರಮಾಣದಲ್ಲಿ ಕಡಿತವಾಗಿದೆ ಎಂದು ತಿಳಿಸಿದರು. ಆರೋಗ್ಯ ಇಲಾಖೆ ಎಆರ್ ಟಿ ಸೇರಿದಂತೆ ಹಲವು ರೀತಿಯ ಅಗತ್ಯ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದು, ರೋಗ ಪ್ರಮಾಣವನ್ನು ಶೂನ್ಯಕ್ಕೆ ತರುವುದು ಇಲಾಖೆಯ ಉದ್ದೇಶವಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಏಡ್ಸ್ ತಡೆಗಾಗಿ ಗಣನೀಯ ಕೊಡುಗೆ ನೀಡಿದ ಕಾರ್ಯಕರ್ತರನ್ನು ಸನ್ಮಾನಿಸಲಾಯಿತು.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…