ಭತ್ತ ಬೆಳೆಯಯುವ ರೈತರು ವಿಮೆಗೆ ನೋಂದಾಯಿಸಲು ಸೂಚನೆ

June 10, 2024
8:45 PM
ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಭತ್ತ ಬೆಳೆಯುವ ರೈತರು ತಮ್ಮ ಹೆಸರನ್ನು ಈಗ ನೊಂದಾಯಿಸಿಕೊಳ್ಳಬಹುದಾಗಿದೆ.

2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ. ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಈ ಯೋಜನೆಯನ್ನು ಅನುಷ್ಠಾನ ಮಾಡಲು ಅಗ್ರಿಕಲ್ಚರ್ ಇನ್ಸೂರೆನ್ಸ್ ಕಂಪೆನಿಯನ್ನು ನಿಗದಿಪಡಿಸಲಾಗಿದೆ.

ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಕೃಷಿ ಬೆಳೆಗೆ ಸಂಬಂಧಿಸಿದಂತೆ, ಭತ್ತವು ನೊಂದಾಯಿತ ಬೆಳೆಯಾಗಿದ್ದು ಭತ್ತ ಬೆಳೆಯುವ ರೈತರು ಈ ಯೋಜನೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು, ಈ ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ ಅಧಿಸೂಚಿತ ಘಟಕದಲ್ಲಿ ಯಾವುದೇ ಪ್ರಕೃತಿ ವಿಕೋಪಗಳಿಂದ/ ಹವಾಮಾನ ವೈಪರೀತ್ಯದಿಂದಾಗಿ ಶೇ.75ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲಗೊಂಡಲ್ಲಿ ವಿಮಾಮೊತ್ತದ ಗರಿಷ್ಠ ಶೇ.25ರ ಭಾಗವನ್ನು, ಬಿತ್ತನೆಯಿಂದ ಕಟಾವು ಹಂತದವರೆಗಿನ ಮಧ್ಯದ ಅವಧಿಯಲ್ಲಿ ಶೇ.50ಕ್ಕಿಂತ ಹೆಚ್ಚು ಬೆಳೆ ನಷ್ಟ ಸಂಭವಿಸಿದರೆ ಮುಂಚಿತವಾಗಿ ಅಂದಾಜು ಮಾಡಲಾದ ಬೆಳೆವಿಮಾ ನಷ್ಟ ಪರಿಹಾರದಲ್ಲಿ ಶೇ.25ರಷ್ಟು ಹಣವನ್ನು ಪರಿಹಾರವಾಗಿ ನೀಡಲಾಗುತ್ತದೆ.

ಕಟಾವಿನ ನಂತರದ ಸಮಯದಲ್ಲಿ ಬೆಳೆಯನ್ನು ಒಣಗಿಸಲು ಬಿಟ್ಟಂತ ಸಂದರ್ಭದಲ್ಲಿ 2 ವಾರದೊಳಗೆ ಅಕಾಲಿಕ ಮಳೆ/ಚಂಡಮಾರುತ ಸಹಿತ ಮಳೆಯಿಂದಾಗಿ ಕಟಾವು ಮಾಡಲಾದ ಬೆಳೆಯು ನಾಶವಾದರೆ ವಿಮಾ ಸಂಸ್ಥೆಯು ವೈಯಕ್ತಿಕವಾಗಿ ಬೆಳೆ ನಷ್ಟ ನಿರ್ಧಾರ ಮಾಡಿ ಬೆಳೆ ನಷ್ಟ ಪರಿಹಾರವನ್ನು ಇತ್ಯರ್ಥ ಪಡಿಸುತ್ತದೆ.

ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪಗಳಾದ ಭೂಕುಸಿತ, ಬೆಳೆ ಮುಳುಗಡೆ, ಆಲಿಕಲ್ಲು ಮಳೆಯಿಂದುಂಟಾಗುವ ನಷ್ಟವನ್ನು ವೈಯಕ್ತಿಕ ಕ್ಷೇತ್ರವಾರು ನಿರ್ಧರಿಸಿ ರೈತರಿಗೆ ಬೆಳೆವಿಮಾ ನಷ್ಟ ಪರಿಹಾರವನ್ನು ನೀಡಲಾಗುವುದು. ರೈತರು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಭತ್ತದ ಬೆಳೆಗೆ ನೊಂದಾಯಿಸಲು ಆಗಸ್ಟ್ 16 ಕೊನೆಯ ದಿನಾಂಕವಾಗಿದೆ.

ವಿಮಾ ಕಂತು ಒಂದು ಎಕರೆಗೆ ರೂ. 516/- ಇರುತ್ತದೆ ಹಾಗೂ ಒಟ್ಟು ವಿಮಾ ಮೊತ್ತ ಎಕರೆಗೆ ರೂ.25,800/-ವಾಗಿರುತ್ತದೆ. ಅರ್ಹ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಹತ್ತಿರದ ಬ್ಯಾಂಕುಗಳಲ್ಲಿ ನಿಗದಿತ ದಿನಾಂಕದೊಳಗೆ ವಿಮಾಕಂತಿನ ಮೊತ್ತವನ್ನು ಪಾವತಿಸಬೇಕಾಗಿ ಮತ್ತು ವಿಮೆ ಮಾಡಿಸಿದ ರೈತರು ಬೆಳೆ ನಷ್ಟದ ಬಗ್ಗೆ ಸಂಬಂಧಿಸಿದ ಹಣಕಾಸು ಸಂಸ್ಥೆ ಅಥವಾ ವಿಮಾಸಂಸ್ಥೆ ಕಛೇರಿಗಳಿಗೆ ನಷ್ಟ ಸಂಭವಿಸಿದ 72 ಗಂಟೆಯೊಳಗೆ ವಿಮೆ ಮಾಡಿಸಲಾದ ಬೆಳೆ ವಿವರ, ಹಾನಿಯ ವ್ಯಾಪ್ತಿ ಹಾಗೂ ಹಾನಿಯ ಕಾರಣವನ್ನು ತಿಳಿಸಬೇಕಾಗುತ್ತದೆ.

ಬೆಳೆ ಸಾಲ ಪಡೆದ/ಪಡೆಯದ ರೈತರಿಗೆ ಬೆಳೆ ವಿಮೆ ಐಚ್ಛಿಕ. ರೈತರು ನೋಂದಣಿಗಾಗಿ ಕಡ್ಡಾಯವಾಗಿ ಫ್ರೂಟ್ಸ್ ಐ.ಡಿ.(FID) ಹೊಂದಿರಬೇಕು. ಬೆಳೆ ಸಾಲ ಪಡೆದ ರೈತರು ಬೆಳೆ ವಿಮೆಯಲ್ಲಿ ಭಾಗವಹಿಸಲು ಇಚ್ಚಿಸದಿದ್ದಲ್ಲಿ ಬ್ಯಾಂಕಿನ ವ್ಯವಸ್ಥಾಪಕರಿಗೆ ಕೊನೆಯ ದಿನಾಂಕದ ಒಂದು ವಾರದ ಮೊದಲು ಈ ಕುರಿತು ಮುಚ್ಚಳಿಕೆ ಪತ್ರ ನೀಡಿ ಬೆಳೆ ವಿಮೆಯಿಂದ ಕೈಬಿಡಲು ಕೋರಬಹುದು, ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸುವಂತೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Attention to all paddy farmers: Registration for insurance is now open. Please ensure to register at your earliest convenience.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ
October 15, 2026
10:10 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror