ಕೋಲಾರದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸಲು ಅಕ್ಟೋಬರ್ 1 ರಿಂದ ನೋಂದಣಿ ಪ್ರಕ್ರಿಯೆ ಶುರುವಾಗಲಿದೆ. ನೋಂದಣಿ ಪ್ರಕ್ರಿಯೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಸೂಚಿಸಿದ್ದಾರೆ. ರೈತರಿಂದ ರಾಗಿ ಖರೀದಿಸಲು ಪೂರ್ವ ಸಿದ್ಧತಾ ಕ್ರಮಗಳ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿ ಕ್ವಿಂಟಾಲ್ ರಾಗಿಗೆ 4886 ರೂಪಾಯಿ ಬೆಂಬಲ ಬೆಲೆಯನ್ನು ಸರ್ಕಾರ ನಿಗದಿ ಪಡಿಸಿದೆ. ತೂಕ ಮತ್ತು ಗುಣಮಟ್ಟದಲ್ಲಿ ಲೋಪ ಆಗದಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ. ಮುಳಬಾಗಿಲು ತಾಲೂಕಿನಲ್ಲಿ ಹೆಚ್ಚಾಗಿ ಭತ್ತ ಬೆಳೆಯುವುದರಿಂದ ಭತ್ತ ಖರೀದಿ ಕೇಂದ್ರ ಪ್ರಾರಂಭಿಸಲು ನಿರ್ಧರಿಸಿದ್ದು ಜಿಲ್ಲೆಯ ಯಾವುದೇ ಭಾಗದ ರೈತರು ತಾವು ಬೆಳೆದಂತಹ ಭತ್ತವನ್ನು ತಂದು ಮಾರಾಟ ಮಾಡಬಹುದು ಎಂದು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಅಡಿಕೆ ತೋಟಗಳಲ್ಲಿ ಹೂಗೊಂಚಲುಗಳು ಅರಳಿದರೂ ಕಾಯಿ ಕಟ್ಟದಿರುವುದಕ್ಕೆ ರೈತರು ಬಳಸುವ ಬೇವಿನ ಎಣ್ಣೆಯೇ…
ಕಳಪೆ ಗುಣಮಟ್ಟದ ಅಡಿಕೆ ಸಾಗಣೆ ಪ್ರಕರಣ ಪತ್ತೆಯಾಗಿದ್ದು, ಆಹಾರ ಸುರಕ್ಷತೆ ಮತ್ತು ಮಾನದಂಡಗಳ…
ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್ Z ಗಾಗಿ…
ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…
ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು…