ತಮಿಳುನಾಡಿಗೆ ಕಾವೇರಿ ನೀರು ಬಿಡಲು ಒತ್ತಾಯ | ಮುಕ್ಕೊಂಬು ಅಣೆಕಟ್ಟೆಯಲ್ಲಿ ರೈತರ ಪ್ರತಿಭಟನೆ | ಕೇಂದ್ರ, ಕರ್ನಾಟಕ ಸರ್ಕಾರಕ್ಕೆ ತಮಿಳುನಾಡು ರೈತರ ಆಗ್ರಹ |

May 30, 2024
12:39 PM

ಕಳೆದ ಬಾರಿ ಮುಂಗಾರು(Mansoon) ಕೈಕೊಟ್ಟ ಹಿನ್ನೆಲೆ ಈ ಬಾರಿ ಬರಗಾಲ(Drought) ಆವರಿಸಿದೆ. ಅದರಲ್ಲೂ ಕಾವೇರಿ ಜಲಾನಯನ(Cauvery belt) ಪ್ರದೇಶದಲ್ಲಿ ಮಳೆ(Rain) ಕಡಿಮೆಯಾದ ಹಿನ್ನೆಲೆ ಕೆಆರ್‌ಎಸ್‌ ಡ್ಯಾಂನಲ್ಲಿ(KRS Dam) ನೀರಿನ ಪ್ರಮಾಣ ಬಹಳ ಕಡಿಮೆಯಾಗಿತ್ತು. ಕುಡಿಯಲು ಹಾಗೂ ಕೃಷಿಗೆ ನೀರು ಇಲ್ಲದಂತಾಗಿದೆ. ಈ ಮಧ್ಯೆ ತಮಿಳುನಾಡಿನಿಂದ ನೀರು ಬಿಡಿ ಅನ್ನುವ ಖ್ಯಾತೆ. ಇದೀಗ ಮತ್ತೆ  ಕಾವೇರಿ ನೀರನ್ನು (Cauvery Water) ತಮಿಳುನಾಡಿಗೆ (Tamil Nadu Farmers) ಬಿಡುವಂತೆ ಆಗ್ರಹಿಸಿ ರೈತರು ತಿರುಚಿರಾಪಳ್ಳಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.   

Advertisement

ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಕೇಂದ್ರ ಮತ್ತು ಕರ್ನಾಟಕ ಸರ್ಕಾರಗಳಿಗೆ ಒತ್ತಾಯಿಸಿ ರೈತ ಅಯ್ಯಕಣ್ಣು ನೇತೃತ್ವದಲ್ಲಿ ರೈತರ ಗುಂಪು ಮುಕ್ಕೊಂಬು ಅಣೆಕಟ್ಟೆಯಲ್ಲಿ ಪ್ರತಿಭಟನೆ ನಡೆಸಿತು. ರೈತರ ಆದಾಯವನ್ನು ದ್ವಿಗುಣಗೊಳಿಸುವುದು ಮತ್ತು ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿಪಡಿಸುವುದು ಮುಂತಾದ ಭರವಸೆಗಳನ್ನು ಈಡೇರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇದೇ ವೇಳೆ ಒತ್ತಾಯಿಸಿದರು.

ತಮಿಳುನಾಡಿಗೆ 2.5 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ವಾರದ ಹಿಂದೆಯಷ್ಟೇ ಸೂಚನೆ ನೀಡಿತ್ತು. ಮೇ ತಿಂಗಳ ಭಾಗವಾಗಿ 2.5 ಟಿಎಂಸಿ ನೀರು ಹರಿಸಲು ಪ್ರಾಧಿಕಾರ ನಿರ್ದೇಶನ ನೀಡಿತ್ತು. ಈ ಹಿಂದೆ ಕಾವೇರಿ ನೀರು ನಿರ್ವಹಣಾ ಸಮಿತಿಯೂ 2.5 ಟಿಎಂಸಿ ನೀರು ಬಿಡಲು ಶಿಫಾರಸು ಮಾಡಿತ್ತು.

  • ಅಂತರ್ಜಾಲ ಮಾಹಿತಿ

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಯುಗಾದಿ ಹಾಗೂ ಮಲೆನಾಡಿನ ಅಡಿಕೆ ಭವಿಷ್ಯ ಏನು…? | ಮಲೆನಾಡಿನ ಅಡಿಕೆ ಬೆಳೆಗಾರರು ಎಚ್ಚರಿಕೆ ವಹಿಸಬೇಕಾದ್ದೇನು…?
April 2, 2025
7:17 AM
by: ಪ್ರಬಂಧ ಅಂಬುತೀರ್ಥ
ಏಪ್ರಿಲ್ 2 ಕೆಲವು ವಿಶೇಷ ರಾಶಿಚಕ್ರ ಚಿಹ್ನೆಗಳಿಗೆ ಶುಭವಾಗಲಿ
April 2, 2025
6:18 AM
by: ದ ರೂರಲ್ ಮಿರರ್.ಕಾಂ
ಭದ್ರ ಜಲಾಶಯದಿಂದ ತುಂಗಭದ್ರಾ ನದಿಗೆ 8 ಸಾವಿರ ಕ್ಯೂಸೆಕ್ ನೀರು | ನದಿಪಾತ್ರದ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ
April 1, 2025
9:38 PM
by: The Rural Mirror ಸುದ್ದಿಜಾಲ
ಮನ್ರೇಗಾ ಕೂಲಿ ದರ ದಿನಕ್ಕೆ 370 ರೂಪಾಯಿಗೆ ಏರಿಕೆ
April 1, 2025
9:28 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group