ಕಳೆದ ಬಾರಿ ಮುಂಗಾರು(Mansoon) ಕೈಕೊಟ್ಟ ಹಿನ್ನೆಲೆ ಈ ಬಾರಿ ಬರಗಾಲ(Drought) ಆವರಿಸಿದೆ. ಅದರಲ್ಲೂ ಕಾವೇರಿ ಜಲಾನಯನ(Cauvery belt) ಪ್ರದೇಶದಲ್ಲಿ ಮಳೆ(Rain) ಕಡಿಮೆಯಾದ ಹಿನ್ನೆಲೆ ಕೆಆರ್‌ಎಸ್ ಡ್ಯಾಂನಲ್ಲಿ(KRS Dam) ನೀರಿನ ಪ್ರಮಾಣ ಬಹಳ ಕಡಿಮೆಯಾಗಿತ್ತು. ಕುಡಿಯಲು ಹಾಗೂ ಕೃಷಿಗೆ ನೀರು ಇಲ್ಲದಂತಾಗಿದೆ. ಈ ಮಧ್ಯೆ ತಮಿಳುನಾಡಿನಿಂದ ನೀರು ಬಿಡಿ ಅನ್ನುವ ಖ್ಯಾತೆ. ಇದೀಗ ಮತ್ತೆ ಕಾವೇರಿ ನೀರನ್ನು (Cauvery Water) ತಮಿಳುನಾಡಿಗೆ (Tamil Nadu Farmers) ಬಿಡುವಂತೆ ಆಗ್ರಹಿಸಿ ರೈತರು ತಿರುಚಿರಾಪಳ್ಳಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಕೇಂದ್ರ ಮತ್ತು ಕರ್ನಾಟಕ ಸರ್ಕಾರಗಳಿಗೆ ಒತ್ತಾಯಿಸಿ ರೈತ ಅಯ್ಯಕಣ್ಣು ನೇತೃತ್ವದಲ್ಲಿ ರೈತರ ಗುಂಪು ಮುಕ್ಕೊಂಬು ಅಣೆಕಟ್ಟೆಯಲ್ಲಿ ಪ್ರತಿಭಟನೆ ನಡೆಸಿತು. ರೈತರ ಆದಾಯವನ್ನು ದ್ವಿಗುಣಗೊಳಿಸುವುದು ಮತ್ತು ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿಪಡಿಸುವುದು ಮುಂತಾದ ಭರವಸೆಗಳನ್ನು ಈಡೇರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇದೇ ವೇಳೆ ಒತ್ತಾಯಿಸಿದರು.
ತಮಿಳುನಾಡಿಗೆ 2.5 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ವಾರದ ಹಿಂದೆಯಷ್ಟೇ ಸೂಚನೆ ನೀಡಿತ್ತು. ಮೇ ತಿಂಗಳ ಭಾಗವಾಗಿ 2.5 ಟಿಎಂಸಿ ನೀರು ಹರಿಸಲು ಪ್ರಾಧಿಕಾರ ನಿರ್ದೇಶನ ನೀಡಿತ್ತು. ಈ ಹಿಂದೆ ಕಾವೇರಿ ನೀರು ನಿರ್ವಹಣಾ ಸಮಿತಿಯೂ 2.5 ಟಿಎಂಸಿ ನೀರು ಬಿಡಲು ಶಿಫಾರಸು ಮಾಡಿತ್ತು.
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…