Advertisement
ಸುದ್ದಿಗಳು

ಡಾ.ನಾ.ಮೊಗಸಾಲೆ ಅವರ ‘ವಿಶ್ವಂಭರ’ ಕಾದಂಬರಿ | ರಾಜ್ಯಪಾಲರಿಂದ ಬಿಡುಗಡೆ |

Share

ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ.ನಾ.ಮೊಗಸಾಲೆ ಅವರ ‘ವಿಶ್ವಂಭರ’ ಚೈತನ್ಯ ಮಹಾಪ್ರಭುಗಳ ಜೀವಾನಾಧರಿತ ಕಾದಂಬರಿಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು.

ಬಳಿಕ ರಾಜ್ಯಪಾಲರು, ಚೈತನ್ಯ ಮಹಾಪ್ರಭುಗಳು ಭಕ್ತಿ ಚಳುವಳಿಯ ಮಹಾನ್ ಸಂತ , ಸಮಾಜ ಸುಧಾರಕ ಮತ್ತು ಕೃಷ್ಣ ಭಕ್ತ , ಈ ಯುಗದಲ್ಲಿ ಪ್ರೀತಿ ಮತ್ತು ಭಕ್ತಿಯ ಮೂಲಕ ಸಮಾಜಕ್ಕೆ ಧೈವಿಕ , ಆದ್ಯಾತ್ಮಿಕತೆಯ ಮಾರ್ಗವನ್ನು ತೋರಿಸಿದವರು. ಚೈತನ್ಯ ಮಹಾಪ್ರಭು ಅವರ ಬೋಧನೆಗಳು ಆಧ್ಯಾತ್ಮಿಕ ಸಮಾನತೆ , ಸಹೋದರತ್ವ ಮತ್ತು ಸ್ವಾತಂತ್ರದ ತತ್ವಗಳನ್ನು ಆಧರಿಸಿವೆ ಎಂದು ಅವರು ಹೇಳಿದರು. ಚೈತನ್ಯ ಮಹಾಪ್ರಭು ಅವರ ಮುಖ್ಯ ಸಂದೇಶವೆಂದರೆ ಹರಿನಾಮ ಸಂಕೀರ್ತನೆ ಇದರ ಅರ್ಥ ಸಾಮೂಹಿಕ ಪಠಣ ಮತ್ತು  ದೇವರ ಹೆಸರಿನ ಕೀರ್ತನೆ. ಪ್ರತಿ ನಗರ ಮತ್ತು ಹಳ್ಳಿಗಳಲ್ಲಿ ಶ್ರೀ ಕೃಷ್ಣನ ಪವಿತ್ರ ನಾಮವನ್ನು ಜಪಿಸಬೇಕು ಎಂದು ಬಯಸಿದ್ದರು. 12 ವರ್ಷಗಳ ಅವಧಿಯಲ್ಲಿ 6 ಖಂಡಗಳಲ್ಲಿ 100ಕ್ಕೂ ಹೆಚ್ಚು  ಇಸ್ಕಾನ್ ದೇವಾಲಯಗಳನ್ನು ಸ್ಧಾಪಿಸುವ ಮೂಲಕ ಭಾರತೀಯ ಸಂಸ್ಕೃತಿಯನ್ನು ಪಾಶ್ಟಿಮಾತ್ಯ ದೇಶಗಳಲ್ಲೂ ಹರಡುವ ಕೆಲಸ ಮಾಡಿದ್ದಾರೆ. ಆಧುನಿಕ ಯುಗದಲ್ಲಿ ಭಾರತದ ಸಂಸ್ಕೃತಿ ಮತ್ತು ಪರಂಪರೆಯ ಶ್ರೇಷ್ಠ ರಾಯಾಭಾರಿಯಾಗಿದ್ದಾರೆ ಎಂದು ತಿಳಿಸಿದರು. ಚೈತನ್ಯ ಪ್ರಭುಗಳ ಜೀವನ ಕುರಿತು ಕನ್ನಡದಲ್ಲಿ ಬರೆದ ಬರಹಕ್ಕಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುರಸ್ಕೃತ ಡಾ. ಮೊಗಸಾಲೆ ಅವರನ್ನು ಅಭಿನಂದಿಸುವುದಾಗಿ ಹೇಳಿದ ಅವರು .ಈ ಕೃತಿ ಭಾರತೀಯ, ಕನ್ನಡ ಸಾಹಿತ್ಯದ ಪ್ರಮುಖ ಪುಸ್ತಕವಾಗಲಿದೆ .ಜತೆಗೆ ಸ್ಪೂರ್ತಿಯ ಮೂಲ ಹಾಗೂ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಸಹಕಾರಿಯಾಗಲಿದೆ ಎಂದು ಹೇಳಿದರು.

ಈ ವೇಳೆ ವ್ಯಾಸರಾಜ ಮಠದ ಪೀಠಾಧಿಪತಿ  ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ, ನಟ ಪ್ರಕಾಶ್ ಬೆಳವಾಡಿ, ಮೈಸೂರು ಇಸ್ಕಾನ್ ಅಧ್ಯಕ್ಷ ಸ್ತೋಕ ಕೃಷ್ಣ ಸ್ವಾಮಿ, ಬೆಂಗಳೂರು ಇಸ್ಕಾನ್ ಅಧ್ಯಕ್ಷ ಚಂಚಲ ಪತಿದಾಸ್, ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ನಿವೃತ್ತ ಕುಲಪತಿ ಡಾ.ಮಲ್ಲೇಪುರಂ ಜಿ.ವೆಂಕಟೇಶ್ ಸೇರಿದಂತೆ ಮತ್ತಿರರು ಉಪಸ್ಧಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

7 minutes ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

23 hours ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

24 hours ago

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ

ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…

24 hours ago

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

1 day ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

2 days ago