ಬೆಳಗಾವಿ ಜಿಲ್ಲೆಯ ಗೋಕಾಕ, ಮೂಡಲಗಿ, ರಾಯಬಾಗ, ಚಿಕ್ಕೋಡಿ ಹುಕ್ಕೇರಿ ಹಾಗೂ ಬಾಗಲಕೋಟ ಜಿಲ್ಲೆಯ ಮುಧೋಳ ತಾಲೂಕಿನ ರೈತರ ಕೃಷಿ ಕಾರ್ಯಗಳ ಅನುಕೂಲಕ್ಕಾಗಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ, ಬಲದಂಡೆ ಹಾಗೂ ಎಸಿಬಿ ಕಾಲುವೆಗಳಿಗೆ ಮುಂದಿನ 15 ದಿನಗಳವರೆಗೆ ಒಟ್ಟು 7.5 ಟಿಎಂಸಿ ನೀರು ಬಿಡಲಾಗುವುದು ಎಂದು ಅರಭಾವಿ ಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಅವರು, ಹಿಡಕಲ್ ಜಲಾಶಯದಲ್ಲಿ ಇಂದಿನ ಮಾಹಿತಿ ಪ್ರಕಾರ, 48.79 ಟಿಎಂಸಿ ನೀರಿನ ಸಂಗ್ರಹವಿದೆ. ದಿನವೊಂದಕ್ಕೆ 0.5 ಟಿಎಂಸಿಯಂತೆ ಒಟ್ಟು 7.50 ಟಿಎಂಸಿ ನೀರು ಹದಿನೈದು ದಿನಗಳವರೆಗೆ ಹರಿಯಲಿದೆ. ಇದರಿಂದ ಈ ಭಾಗದ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement