ಬೆಳಗಾವಿ ಭಾಗದ ರೈತರಿಗೆ 15 ದಿನಗಳ ವರೆಗೆ ಒಟ್ಟು 7.5 ಟಿಎಂಸಿ ನೀರು ಬಿಡುಗಡೆ

November 28, 2024
6:54 AM

ಬೆಳಗಾವಿ ಜಿಲ್ಲೆಯ ಗೋಕಾಕ, ಮೂಡಲಗಿ, ರಾಯಬಾಗ, ಚಿಕ್ಕೋಡಿ ಹುಕ್ಕೇರಿ ಹಾಗೂ ಬಾಗಲಕೋಟ ಜಿಲ್ಲೆಯ ಮುಧೋಳ ತಾಲೂಕಿನ ರೈತರ ಕೃಷಿ ಕಾರ್ಯಗಳ ಅನುಕೂಲಕ್ಕಾಗಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ, ಬಲದಂಡೆ ಹಾಗೂ ಎಸಿಬಿ ಕಾಲುವೆಗಳಿಗೆ ಮುಂದಿನ 15 ದಿನಗಳವರೆಗೆ ಒಟ್ಟು 7.5 ಟಿಎಂಸಿ ನೀರು ಬಿಡಲಾಗುವುದು ಎಂದು ಅರಭಾವಿ ಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.  ಪತ್ರಿಕಾ ಪ್ರಕಟಣೆಯಲ್ಲಿ ಈ ಬಗ್ಗೆ  ಮಾಹಿತಿ ನೀಡಿರುವ ಅವರು, ಹಿಡಕಲ್ ಜಲಾಶಯದಲ್ಲಿ ಇಂದಿನ ಮಾಹಿತಿ ಪ್ರಕಾರ, 48.79  ಟಿಎಂಸಿ ನೀರಿನ ಸಂಗ್ರಹವಿದೆ. ದಿನವೊಂದಕ್ಕೆ 0.5 ಟಿಎಂಸಿಯಂತೆ ಒಟ್ಟು 7.50 ಟಿಎಂಸಿ ನೀರು ಹದಿನೈದು ದಿನಗಳವರೆಗೆ ಹರಿಯಲಿದೆ. ಇದರಿಂದ ಈ ಭಾಗದ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ
October 7, 2026
6:55 AM
by: ದ ರೂರಲ್ ಮಿರರ್.ಕಾಂ
ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು
October 7, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror