Advertisement
ಸುದ್ದಿಗಳು

#DKShivakumar | ಡಿಸಿಎಂ ಡಿಕೆ ಶಿವಕುಮಾರ್​​ಗೆ ನಿರಾಳ | ಸುಪ್ರೀಂಕೋರ್ಟ್‌ ನಿಂದ​ ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ |

Share

ಆದಾಯಕ್ಕೂ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ಗೆ ಸುಪ್ರೀಂ ಕೋರ್ಟ್​ನಲ್ಲೂ ಬಿಗ್​ ರಿಲೀಫ್​ ಸಿಕ್ಕಿದೆ. ಡಿಕೆ ಶಿವಕುಮಾರ್​ ವಿರುದ್ಧದ ತನಿಖೆಗೆ ತಡೆಯಾಜ್ಞೆ ತೆರವು ಕೋರಿ‌ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಡಿಕೆ ಶಿವಕುಮಾರ್​ ವಿರುದ್ಧದ ಆದಾಯಕ್ಕೂ ಮೀರಿ ಆಸ್ತಿಗಳಿಕೆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿತ್ತು. ಆದ್ರೆ, ಸುಪ್ರೀಂಕೋರ್ಟ್ ಇಂದು(ಜುಲೈ 31) ಸಿಬಿಐ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಇದರಿಂದ ಡಿಕೆ ಶಿವಕುಮಾರ್​​ ನಿರಾಳರಾಗಿದ್ದಾರ

ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶ ಸಾಧ್ಯವಿಲ್ಲ ಎಂದು ಹೇಳಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. 2013ರಿಂದ 2018ರ ವರೆಗಿನ ಆದಾಯಗಳಿಕೆ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದ್ದು, ಇದಕ್ಕೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಸಿಬಿಐ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು.

ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಕಲಂ 13(2), 13(1)ಇ ಅಡಿಯಲ್ಲಿ ಸಿಬಿಐ 2020ರ ಅಕ್ಟೋಬರ್ 3ರಂದು ಕ್ರಿಮಿನಲ್ ಪ್ರಕರಣ ದಾಖಲಿಸಿತ್ತು. ಅಲ್ಲದೇ 2013ರಿಂದ 2018ರ ವರೆಗಿನ ಆದಾಯಗಳಿಕೆ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದ್ದು ಇದನ್ನು ಪ್ರಶ್ನಿಸಿ ಡಿಕೆ ಶಿವಕುಮಾರ್ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ತನಿಖೆಗೆ ಮಧ್ಯಂತರ ತಡೆ ತಡೆಯಾಜ್ಞೆ ನೀಡಿತ್ತು. ಇದೇ ಅದೇ ತಡೆಯಾಜ್ಞೆ ವಿಸ್ತರಣೆಯಾಗುತ್ತಾ ಬಂದಿದ್ದು, ಇದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

4 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

1 day ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

1 day ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago