ವಿಜಯಪುರ ಜಿಲ್ಲೆಯ ಮಮದಾಪುರ ಅರಣ್ಯ ಪ್ರದೇಶಕ್ಕೆ ಶ್ರೀಸಿದ್ದೇಶ್ವರ ಸ್ವಾಮಿ ಪಾರಂಪರಿಕ ಜೀವವೈವಿಧ್ಯತಾಣ ಎಂದು ಮರು ನಾಮಕರಣ ಮಾಡಲು ಸರ್ಕಾರ ನಿರ್ಧಾರಿಸಿರುವುದಾಗಿ ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವ ಬಿ. ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಆಧ್ಯಾತ್ಮಿಕ ಬೋಧನೆಗಳಿಂದ ಜನಮನ ಗೆದ್ದಿದ್ದ ಸಿದ್ದೇಶ್ವರ ಸ್ವಾಮೀಜಿ, ಪರಿಸರ ಸಂರಕ್ಷಣೆ ಮತ್ತು ಸಮುದಾಯದ ಯೋಗಕ್ಷೇಮಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಶ್ರೀಗಳ ಎರಡನೇ ಪುಣ್ಯಸ್ಮರಣೆಯ ದಿನವಾದ ಜನವರಿ 2ರಂದು ವಿಧ್ಯುಕ್ತವಾಗಿ ಮಮದಾಪುರ ಅರಣ್ಯ ಪ್ರದೇಶಕ್ಕೆ ಮರು ನಾಮಕರಣ ಮಾಡಲಾಗುವುದು ಎಂದು ಅವರು ಹೇಳಿದರು. ಪಾರಂಪರಿಕ ತಾಣ ಘೋಷಣೆಯಿಂದ ಸ್ಥಳೀಯ ಜನರ ಅಥವಾ ಕಾಡನ್ನು ಅವಲಂಬಿಸಿರುವ ಆದಿವಾಸಿಗಳ ದೈನಂದಿನ ಬದುಕಿನ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಪಾರಂಪರಿಕ ತಾಣದ ನಿರ್ವಹಣೆಯಲ್ಲಿ ಸ್ಥಳೀಯ ಜನರ ಸಹಕಾರ ಅಗತ್ಯ ಎಂದು ಅವರು ತಿಳಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel