ನಮ್ಮ ರಾಜ್ಯದ ಕಾವೇರಿ ನೀರಿಗೂ(Cauvery Water), ಹಿರಿಯ ವಕೀಲ ಫಾಲಿ ಎಸ್ ನಾರಿಮನೆ(Fali S Nariman)ಗೂ ಅವಿನಾಭಾವ ಸಂಬಂಧ. ಕರುನಾಡಿನ(Karnataka) ಜನರ ನಾಡಿಮಿಡಿತ ಅರಿತು ದಶಕಗಳ ಕಾಲ ಕಾವೇರಿ ನೀರಿಗಾಗಿ ಸುಪ್ರೀಂ ಕೋರ್ಟ್‌ನಲ್ಲಿ(Supreme Court) ವಾದ ಮಾಂಡಿಸಿದವರು ನಾರಿಮನ್ ಅವರು. ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಫಾಲಿ ಎಸ್ ನಾರಿಮನ್ ಅವರು ಇಂದು ನವದೆಹಲಿಯಲ್ಲಿ (Delhi) ನಿಧನರಾಗಿದ್ದಾರೆ. 95 ವರ್ಷದ ನಾರಿಮನ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಭಾರತ ಮಾತ್ರವಲ್ಲದೇ ಜಾಗತಿಕ ಕಾನೂನು ಕ್ಷೇತ್ರದಲ್ಲೂ ಅಪಾರ ಖ್ಯಾತಿಯನ್ನು ಗಳಿಸಿದ್ದರು. 1929ರ ಜನವರಿ 10 ರಂದು ಜನಿಸಿದ್ದ ನಾರಿಮನ್ ಅವರು 1971ರಿಂದ ಸುಪ್ರೀಂ ಕೋರ್ಟ್ ಹಿರಿಯ ವಕೀಲರಾಗಿದ್ದರು. 1972ರ ಮೇ ತಿಂಗಳಿನಲ್ಲಿ ಅವರನ್ನು ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ನೇಮಿಸಲಾಗಿತ್ತು. ಆದರೆ ಆಗಿನ ಪ್ರಧಾನಿ ಇಂದಿರಾಗಾಂಧಿ ಅವರು ಘೋಷಿಸಿದ ತುರ್ತು ಪರಿಸ್ಥಿತಿಯನ್ನು ವಿರೋಧಿಸಿ ಅವರು ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಹುದ್ದೆಗೆ ರಾಜೀನಾಮೆ ನೀಡಿದ್ದರು. ನಾರಿಮನ್ ಅವರಿಗೆ 1991 ರಲ್ಲಿ ಪದ್ಮಭೂಷಣ ಮತ್ತು 2007 ರಲ್ಲಿ ಪದ್ಮ ವಿಭೂಷಣ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಗೌರವಿಸಲಾಗಿದೆ.
ಎಚ್ಡಿಡಿ, ಮೋದಿ ಸೇರಿದಂತೆ ಗಣ್ಯರ ಸಂತಾಪ :ಫಾಲಿ ನಾರಿಮನ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವರು ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ. ನಾರಿಮನ್ ಅವರ ಮಹೋನ್ನತ ಕಾನೂನು ಬುದ್ಧಿಜೀವಿಗಳಲ್ಲಿ ಒಬ್ಬರು. ಸಾಮಾನ್ಯ ನಾಗರಿಕರಿಗೆ ನ್ಯಾಯ ಸಿಗುವಂತೆ ಮಾಡಲು ಅವರು ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಅವರ ಅಗಲಿಕೆಯಿಂದ ನನ್ನ ಮನಸ್ಸಿಗೆ ನೋವಾಗಿದೆ. ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಅವರ ಆತ್ಮಕೆ ಶಾಂತಿ ಸಿಗಲಿ ಎಂದು ಪ್ರಧಾನಿ ಮೋದಿ ಬರೆದುಕೊಂಡಿದ್ದಾರೆ.
Senior Supreme Court Advocate Fali S Nariman passed away today in New Delhi. Information is available that 95-year-old Nariman was suffering from age-related disease.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.