15 ತಿಂಗಳ ಮಗುವಿಗೆ ಅಪರೂಪದ ಕಾಯಿಲೆ | 17.5 ಕೋಟಿ ರೂಪಾಯಿ ಬೆಲೆಯ ಔಷಧಿ | ಆಮದು ಸುಂಕದಿಂದ ವಿನಾಯಿತಿಗೆ ಮುಖ್ಯಮಂತ್ರಿಗಳಿಂದ ಪ್ರಧಾನಿಗಳಿಗೆ ಮನವಿ |

November 1, 2023
6:19 PM

ರಾಜ್ಯದ 15 ತಿಂಗಳ ಮೌರ್ಯ ಎಂಬ ಪುಟ್ಟ ಕಂದ ‘ಸ್ಪೈನಲ್ ಮಸ್ಕ್ಯುಲರ್ ಅಟ್ರೋಪಿ’ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದು, ಈ ಕಾಯಿಲೆ ಗುಣಪಡಿಸಲು 17.5 ಕೋಟಿ ರೂಪಾಯಿ ಬೆಲೆಯ ಔಷಧಿಯೊಂದು ವಿದೇಶದಿಂದ ಆಮದಾಗಬೇಕಿದೆ. ಇದಕ್ಕಾಗಿ ಕೇಂದ್ರ ಸರ್ಕಾರವು ಇದನ್ನು ಮಾನವೀಯ ನೆಲೆಗಟ್ಟಿನಲ್ಲಿ ವಿಶೇಷ ಪ್ರಕರಣವೆಂದು ಪರಿಗಣಿಸಿ ಆಮದು ಸುಂಕದಿಂದ ವಿನಾಯಿತಿ ನೀಡುವ ಮೂಲಕ  ಪುಟ್ಟ ಕಂದನ ಪ್ರಾಣ ಉಳಿಸಲು ನೆರವಾಗಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪ್ರಧಾನಿ ನರೇಂದ್ರ ಅವರಿಗೆ ಮನವಿ ಮಾಡಿದ್ದಾರೆ.

Advertisement

ಸ್ಪೈನಲ್ ಮಸ್ಕ್ಯುಲರ್ ಅಟ್ರೋಪಿ’(Spinal Muscular Atrophy) ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಈ ಮಗುವಿನ ಖಾಯಿಲೆಯನ್ನು ಗುಣಪಡಿಸಬಹುದಾದ ಝೋಲ್ಗೆನ್‌ಸ್ಮ ಎಂಬ ಚುಚ್ಚುಮದ್ದನ್ನು ವಿದೇಶದಿಂದ ಆಮದು ಮಾಡಿಕೊಳ್ಳಬೇಕಾಗಿದೆ. ಸ್ಪೈನಲ್ ಮಸ್ಕ್ಯುಲರ್ ಅಟ್ರೋಫಿ (ಎಸ್‌ಎಂಎ) ಎಂಬ ಈ ರೋಗವು  ಮಾರಣಾಂತಿಕವಾಗಿದೆ.ಅದರ ಏಕೈಕ ಲಸಿಕೆಯನ್ನು ಅಮೆರಿಕದಲ್ಲಿ ಮಾತ್ರ ತಯಾರಿಸಲಾಗುತ್ತದೆ. ಅದರ ಬೆಲೆ ರೂ. 17.5 ಕೋಟಿ ಇದೆ. ಈ ಚುಚ್ಚು ಮದ್ದನ್ನು 2 ವರ್ಷಗಳವರೆಗೆ ಮಾತ್ರ ನೀಡಬಹುದು. ಅಂದರೆ, ಎರಡು ವರ್ಷಕ್ಕಿಂತ ಮೊದಲು ಈ ಚುಚ್ಚು ಮದ್ದನ್ನು ನೀಡಿದರೆ ಮಾತ್ರ ಪ್ರಯೋಜನವಿದೆ. ಈ ರೋಗವು ವಿಶ್ವದ 10 ಸಾವಿರ ಮಕ್ಕಳಲ್ಲಿ ಒಬ್ಬರಲ್ಲಿ ಮಾತ್ರ ಕಂಡು ಬರುತ್ತದೆ ಎಂದು ವೈದ್ಯರು ಹೇಳುತ್ತಾರೆ.

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಸ್ತೆ ಸರಕು ಸಾಗಾಣೆಯಲ್ಲೂ ತೀವ್ರ ಏರಿಕೆ  |  ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್‌ ಗಡ್ಕರಿ
April 4, 2025
2:24 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 04-04-2025 | ಇಂದು ಕೆಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಎ.7 ರಿಂದ ಮಳೆ ಕಡಿಮೆಯಾಗುವ ಲಕ್ಷಣ |
April 4, 2025
1:10 PM
by: ಸಾಯಿಶೇಖರ್ ಕರಿಕಳ
ಅಡಿಕೆಯ ನಾಡಿನಲ್ಲಿ ಉಪಬೆಳೆಯಾಗಿ ತರಕಾರಿ ಕೃಷಿ ಮಾಡಿದ ಯುವಕ
April 4, 2025
8:00 AM
by: ಮಹೇಶ್ ಪುಚ್ಚಪ್ಪಾಡಿ
ಅಭಯಾರಣ್ಯದಲ್ಲಿ ರಾತ್ರಿ ವೇಳೆ ವಾಹನಗಳ ಸಂಚಾರ ನಿಷೇಧಕ್ಕೆ ಮನವಿ
April 4, 2025
7:22 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group