ರಾಜ್ಯದ 15 ತಿಂಗಳ ಮೌರ್ಯ ಎಂಬ ಪುಟ್ಟ ಕಂದ ‘ಸ್ಪೈನಲ್ ಮಸ್ಕ್ಯುಲರ್ ಅಟ್ರೋಪಿ’ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದು, ಈ ಕಾಯಿಲೆ ಗುಣಪಡಿಸಲು 17.5 ಕೋಟಿ ರೂಪಾಯಿ ಬೆಲೆಯ ಔಷಧಿಯೊಂದು ವಿದೇಶದಿಂದ ಆಮದಾಗಬೇಕಿದೆ. ಇದಕ್ಕಾಗಿ ಕೇಂದ್ರ ಸರ್ಕಾರವು ಇದನ್ನು ಮಾನವೀಯ ನೆಲೆಗಟ್ಟಿನಲ್ಲಿ ವಿಶೇಷ ಪ್ರಕರಣವೆಂದು ಪರಿಗಣಿಸಿ ಆಮದು ಸುಂಕದಿಂದ ವಿನಾಯಿತಿ ನೀಡುವ ಮೂಲಕ ಪುಟ್ಟ ಕಂದನ ಪ್ರಾಣ ಉಳಿಸಲು ನೆರವಾಗಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪ್ರಧಾನಿ ನರೇಂದ್ರ ಅವರಿಗೆ ಮನವಿ ಮಾಡಿದ್ದಾರೆ.
ಸ್ಪೈನಲ್ ಮಸ್ಕ್ಯುಲರ್ ಅಟ್ರೋಪಿ’(Spinal Muscular Atrophy) ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಈ ಮಗುವಿನ ಖಾಯಿಲೆಯನ್ನು ಗುಣಪಡಿಸಬಹುದಾದ ಝೋಲ್ಗೆನ್‌ಸ್ಮ ಎಂಬ ಚುಚ್ಚುಮದ್ದನ್ನು ವಿದೇಶದಿಂದ ಆಮದು ಮಾಡಿಕೊಳ್ಳಬೇಕಾಗಿದೆ. ಸ್ಪೈನಲ್ ಮಸ್ಕ್ಯುಲರ್ ಅಟ್ರೋಫಿ (ಎಸ್‌ಎಂಎ) ಎಂಬ ಈ ರೋಗವು ಮಾರಣಾಂತಿಕವಾಗಿದೆ.ಅದರ ಏಕೈಕ ಲಸಿಕೆಯನ್ನು ಅಮೆರಿಕದಲ್ಲಿ ಮಾತ್ರ ತಯಾರಿಸಲಾಗುತ್ತದೆ. ಅದರ ಬೆಲೆ ರೂ. 17.5 ಕೋಟಿ ಇದೆ. ಈ ಚುಚ್ಚು ಮದ್ದನ್ನು 2 ವರ್ಷಗಳವರೆಗೆ ಮಾತ್ರ ನೀಡಬಹುದು. ಅಂದರೆ, ಎರಡು ವರ್ಷಕ್ಕಿಂತ ಮೊದಲು ಈ ಚುಚ್ಚು ಮದ್ದನ್ನು ನೀಡಿದರೆ ಮಾತ್ರ ಪ್ರಯೋಜನವಿದೆ. ಈ ರೋಗವು ವಿಶ್ವದ 10 ಸಾವಿರ ಮಕ್ಕಳಲ್ಲಿ ಒಬ್ಬರಲ್ಲಿ ಮಾತ್ರ ಕಂಡು ಬರುತ್ತದೆ ಎಂದು ವೈದ್ಯರು ಹೇಳುತ್ತಾರೆ.
ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ…
ಇಂದು ಯಾವುದೇ ಪ್ರಮುಖ ಕ್ಷೇತ್ರಗಳನ್ನು ಗಮನಿಸಿ, ಅಲ್ಲೊಂದು ವಿವಾದ ಇಲ್ಲದೇ ಇರುವುದೇ ಇಲ್ಲ.…
ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು…
ಗುಜ್ಜೆ ಕಡಲೆ ಗಸಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 1…
ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …
ಭಾರತೀಯ ರಿಸರ್ವ್ ಬ್ಯಾಂಕ್ ನ ಹಣಕಾಸು ನೀತಿ ಸಮಿತಿ ಹಲವು ಮಹತ್ವದ ನಿರ್ಧಾರಗಳನ್ನು…