MIRROR FOCUS

ಬೇಡಿಕೆ ಈಡೇರಿಸುವಂತೆ ಮುಖ್ಯಮಂತ್ರಿಗೆ ಕೊಟ್ಟ ಮನವಿ ಪತ್ರಗಳು ಕಸದ ರಾಶಿಯಲ್ಲಿ….! | ರೈತ ಸಂಘ ನೀಡಿದ್ದ ಮನವಿಯೂ ಕಸಕ್ಕೆ ಸೇರಿತು…! | ರೈತರ ಬಗ್ಗೆಯೂ ಯಾಕಿಷ್ಟು ನಿರ್ಲಕ್ಷ್ಯ- ಆಕ್ರೋಶ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಳೆ ಬಿಸಿಲು ಲೆಕ್ಕಿಸದೆ ದಿನವಿಡೀ ಸಾಲು ನಿಂತು ತಮ್ಮ ಕಷ್ಟಗಳನ್ನು ಪರಿಹರಿಸಲು ಮನವಿ ಪತ್ರಗಳನ್ನು ಜನರು ಕೊಡುತ್ತಾರೆ. ತಮ್ಮ ಕಷ್ಟ ನಮ್ಮ ನಾಡಿನ ದೊರೆಯ ಕೈ ಸೇರಿದೆ ಎಂದು ಜನರೂ ಸಂತಸ ಪಡುತ್ತಾರೆ. ಹಾಗಾಗಿ ಇಂದಲ್ಲ ನಾಳೆ ಕಷ್ಟಕ್ಕೆ ಪರಿಹಾರ ಸಿಗಬಹುದು ಎಂದು ಆಸೆಯಿಂದ ಕಾಯುತ್ತಿರುತ್ತಾರೆ. ಆದರೆ ಜನಸೇವಕ ಅನ್ನಿಸಿಕೊಂಡ ನಮ್ಮ ಮುಖ್ಯಮಂತ್ರಿಗಳು ಸಾರ್ವಜನಿಕರ ಮನವಿ ಪತ್ರಗಳನ್ನು ಏನು ಮಾಡಿದ್ದಾರೆ ಅನ್ನೋದನ್ನ ನೀವೇ ನೋಡಿ..

Advertisement
ಜು.10 ರಂದು ಕಾಂಗ್ರೆಸ್ ಪಕ್ಷದ ಕೃತಜ್ಞತಾ ಸಮಾವೇಶಕ್ಕೆ ಸಿಎಂ ಸಿದ್ದರಾಮಯ್ಯ ಚಾಮರಾಜನಗರಕ್ಕೆ ಭೇಟಿ ಕೊಟ್ಟಿದ್ದರು. ಆ ವೇಳೆ ರೈತ ಸಂಘದ ನಾಯಕರು ಸಿಎಂ ಸಿದ್ದರಾಮಯ್ಯಗೆ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಮನವಿ ಪತ್ರಗಳನ್ನು ಕೊಟ್ಟಿದ್ದರು. ಆದರೆ ಈ ಮನವಿ ಪತ್ರಗಳು  ಕಸದ ಬುಟ್ಟಿ ಸೇರಿವೆ. ಮುಖ್ಯಮಂತ್ರಿಗಳನ್ನೇ ಭೇಟಿ ಮಾಡಿ ಮನವಿ ಸಲ್ಲಿಸಿದರೆ ಸಮಸ್ಯೆಗೆ ಪರಿಹಾರ ಆಗುತ್ತದೆ ಎನ್ನುವುದು ಜನರ ಭರವಸೆ. ಆದರೆ ಮುಖ್ಯಮಂತ್ರಿಗಳು ಸ್ವೀಕರಿಸಿದ್ದ ಮನವಿ ಪತ್ರಗಳು ನಗರದ ಡಾ. ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕಸದ ರಾಶಿಯಲ್ಲಿ ಬಿದ್ದಿವೆ. ಬಿಸಿಲನ್ನು ಲೆಕ್ಕಿಸದೆ ಗಂಟೆಗಟ್ಟಲೆ ಕಾದು ಮನವಿ ಸಲ್ಲಿಸಿದ್ದ ಸಾರ್ವಜನಿಕರು ಹಾಗೂ ರೈತ ಸಂಘಟನೆಗಳು, ಇದು ನಿರ್ಲಕ್ಷ್ಯದ ಪರಮಾವಧಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮ್ಮ ಮನವಿಗಳನ್ನು ಸ್ವೀಕರಿಸಿದ್ದಾದರೂ ಯಾಕೆ? ರೈತರ ಬಗ್ಗೆ ಯಾಕಿಷ್ಟೊಂದು ನಿರ್ಲಕ್ಷ್ಯ? ಸ್ವತಃ ಮುಖ್ಯಮಂತ್ರಿಯನ್ನೇ ಭೇಟಿ ಮಾಡಿ ಸಲ್ಲಿಸಿದ್ದ ಮನವಿ ಪತ್ರಗಳಿಗೆ ಈ ಗತಿಯಾದರೆ ಅಧಿಕಾರಿಗಳಿಗೆ ಸಲ್ಲಿಸುವ ಮನವಿಗಳ ಕಥೆ ಏನು ಎಂದು ಕಿಡಿಕಾರಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜನರ ಕ್ಷಮೆ ಕೋರಬೇಕು. ಇಲ್ಲದಿದ್ದಲ್ಲಿ ಚಾಮರಾಜನಗರ ಜಿಲ್ಲೆಗೆ ಭೇಟಿ ಮಾಡಿದಾಗ ಕಪ್ಪು ಬಾವುಟ ಪ್ರದರ್ಶನ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕಸದ ರಾಶಿ ಸೇರಿದ ಮನವಿ ಪತ್ರಗಳ ವೀಡಿಯೋ ವೈರಲ್ ಆಗಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 17-04-2025 | ಎ.20 ರಿಂದ ರಾಜ್ಯದ ವಿವಿದೆಡೆ ಮತ್ತೆ ಮಳೆ

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ…

1 hour ago

ಪುತ್ತೂರು ಜಾತ್ರೆ ಎಂದರೆ “ನಮ್ಮ ಮನೆ ಉತ್ಸವ”

ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲಿ ಪುತ್ತೂರು ಶ್ರೀ ಮಹತೋಭಾರ ಶ್ರೀ…

7 hours ago

ಕೆಲವು ವಿಶೇಷ ಯೋಗಗಳು ಮತ್ತು ಗ್ರಹಗಳ ಸಂಯೋಜನೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

13 hours ago

ಮೀಸಲಾತಿಗಾಗಿ ಜಾತಿಯಾಗುವ ಮತಧರ್ಮ

ಜಾತಿಗಣತಿ ಮಾಡಿ ಏನನ್ನು ಸಾಧಿಸಲು ಸಾಧ್ಯ? ಸದ್ಯ ಬಹಿರಂಗ ಆಗಿರುವ ವರದಿಯು ಇನ್ನಷ್ಟು…

20 hours ago

ಸರಕಾರಿ ಶಾಲೆಯಲ್ಲಿ ಬೆಳೆಸಿದ ತರಕಾರಿ ಜಿಲ್ಲಾಧಿಕಾರಿಗೆ ಕೊಡುಗೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು…

21 hours ago

ಅನ್ನದ ಪರಿಮಳ ಮನವರಳಿಸ ಬಹುದಲ್ಲವೇ..!

ಅನ್ನದ ಪರಿಮಳ ಎಷ್ಟು ಸೊಗಸು. ಅಡುಗೆ ಮನೆಯ ಭಾಷೆಯೇ ಅಂತಹದ್ದು.

1 day ago