Advertisement
MIRROR FOCUS

ಏಕಬಳಕೆ ಪ್ಲಾಸ್ಟಿಕ್ ತ್ಯಜಿಸಲು ಸಂಕಲ್ಪ ಮಾಡಿ | ಸಚಿವ ಈಶ್ವರ ಖಂಡ್ರೆ

Share

ನೀರಲ್ಲಿ ಕರಗದ, ಮಣ್ಣಲ್ಲಿ ಮಣ್ಣಾಗದ, ಸುಟ್ಟರೆ ವಿಷಕಾರಿ ಅಂಶವನ್ನು ಗಾಳಿಗೆ ಸೇರಿಸುವ ಪ್ಲಾಸ್ಟಿಕ್ ಸಮುದಾಯ ಆರೋಗ್ಯಕ್ಕೆ ಮಾರಕವಾಗಿದ್ದು, ಭೂಗ್ರಹ ರಕ್ಷಣೆಗೆ ಎಲ್ಲ ಪ್ರಜ್ಞಾವಂತ ನಾಗರಿಕರು ಏಕ ಬಳಕೆ ಪ್ಲಾಸ್ಟಿಕ್ ಬಳಕೆ ತ್ಯಜಿಸಲು ಸಂಕಲ್ಪ ಮಾಡಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮನವಿ ಮಾಡಿದ್ದಾರೆ.

Advertisement
Advertisement

ಅವರು  ಧರ್ಮಸ್ಥಳದಲ್ಲಿ, ಧರ್ಮಸ್ಥಳ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಕ್ಷೇತ್ರ ಫಲಕ ಅನಾವರಣ ಮಾಡಿ ಮಾತನಾಡಿದರು. ಮರುಬಳಕೆ ಪ್ರವೃತ್ತಿ ಜನರಲ್ಲಿ ಕಡಿಮೆ ಆಗಿದ್ದು, ತ್ಯಾಜ್ಯ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ತ್ಯಾಜ್ಯ ವಿಲೇವಾರಿ ಸ್ಥಳೀಯ ಸಂಸ್ಥೆಗಳಿಗೆ ಸವಾಲಾಗಿದೆ. ಅದರಲ್ಲೂ ಪ್ಲಾಸ್ಟಿಕ್ ತ್ಯಾಜ್ಯ ದೊಡ್ಡ ಸವಾಲಾಗಿದ್ದು, ಜನರಲ್ಲಿ ಜಾಗೃತಿ ಮೂಡದ ಹೊರತು ಇದಕ್ಕೆ ಪರಿಹಾರ ದೊರಕುವುದು ದುರ್ಲಭ ಎಂದು ಸಚಿವರು ಹೇಳಿದರು.

ಅರಣ್ಯ ನಾಶ, ಪ್ರಕೃತಿಯ ಮೇಲಿನ ದಬ್ಬಾಳಿಕೆಯಿಂದ ಇಂದು ಜಾಗತಿಕ ತಾಪಮಾನ ಏರಿಕೆ ಆಗುತ್ತಿದೆ, ಹವಾಮಾನ ವೈಪರೀತ್ಯದಿಂದ ಜಾಗತಿಕ ಸಮಸ್ಯೆಗಳು ತಲೆದೋರುತ್ತಿವೆ, ಅಭಿವೃದ್ಧಿಯೂ ಆಗಬೇಕು, ಪ್ರಕೃತಿಯೂ ಉಳಿಯಬೇಕು ಹೀಗಾಗಿ ಸುಸ್ಥಿರ ಅಭಿವೃದ್ಧಿ ಇಂದಿನ ಅತ್ಯಗತ್ಯವಾಗಿದೆ ಎಂದು ಹೇಳಿದರು.ಆಹಾರದಲ್ಲಿ ಮಾಲಿನ್ಯ ಇದೆ, ಗಾಳಿಯಲ್ಲಿ ಮಾಲಿನ್ಯ ಇದೆ, ನೀರಿನಲ್ಲಿ ಮಾಲಿನ್ಯ ಇದೆ. ಇದರಿಂದ ಅನೇಕ ರೋಗ ರುಜಿನಗಳು ಜನರನ್ನು ಕಾಡುತ್ತಿದ್ದು, ಸಮುದಾಯ ಆರೋಗ್ಯ ರಕ್ಷಣೆಗೆ ನಾವೆಲ್ಲರೂ ಕಟಿಬದ್ಧರಾಗಬೇಕು ಎಂದು ಈಶ್ವರ ಖಂಡ್ರೆ ಹೇಳಿದರು.

ಪಾದಯಾತ್ರೆ ವೇಳೆ ಪ್ಲಾಸ್ಟಿಕ್ ನಿಷೇಧ : ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಶಿವರಾತ್ರಿಯ ಸಂದರ್ಭದಲ್ಲಿ ಸಾವಿರಾರು ಜನರು ಪಾದಯಾತ್ರೆಯ ಮೂಲಕ ಬರುತ್ತಾರೆ. ಅರಣ್ಯ ಮಾರ್ಗದಲ್ಲಿ ಬರುವಾಗ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ತಟ್ಟೆ, ಲೋಟ, ಬಾಟಲಿಗಳನ್ನು ಎಲ್ಲೆಂದರಲ್ಲಿ ಎಸೆಯುತ್ತಾರೆ. ಇದನ್ನು ವನ್ಯಜೀವಿಗಳು ತಿಂದು ಸಾವಿಗೀಡಾಗುತ್ತವೆ. ಹೀಗಾಗಿ ಈ ಬಾರಿ ಪಾದಯಾತ್ರೆಯಲ್ಲಿ ಬರುವ ಭಕ್ತರು ಅರಣ್ಯ ಪ್ರವೇಶಿಸುವ ಮುನ್ನ ತಪಾಸಣೆ ಮಾಡಿ ಅರಣ್ಯ ಪ್ರದೇಶದಲ್ಲಿ ಪ್ಲಾಸ್ಟಿಕ್ ಸಮಸ್ಯೆ ಎದುರಾಗದಂತೆ ಎಚ್ಚರ ವಹಿಸಲಾಗುವುದು ಎಂದು ಸಚಿವರು ತಿಳಿಸಿದರು.

ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮಶ್ರೀ ಡಾ. ವೀರೇಂದ್ರ ಹೆಗ್ಗಡೆ ಅವರು ಮಾತನಾಡಿ, ಧರ್ಮಸ್ಥಳ ಸ್ವಚ್ಛ ನಗರಿಯಾಗಿದ್ದು, ಇಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಮಾಡಲು ಶ್ರಮಿಸುತ್ತಿದ್ದೇವೆ. ಆದರೆ ಜನರಲ್ಲಿ ಸ್ವಯಂ ಪರಿಸರ ಜಾಗೃತಿ ಮೂಡಿದರೆ ಮಾತ್ರ ಇದನ್ನು ನಿಗ್ರಹಿಸಲು ಸಾಧ್ಯ ಎಂದರು.

ಆಧುನಿಕ ಯಂತ್ರಗಳ ನೆರವಿನಿಂದ ತ್ಯಾಜ್ಯವನ್ನು ಸಂಸ್ಕರಿಸಿ ಪುನರ್ ಬಳಕೆ ಮಾಡಲು ಆ ಮೂಲಕ ಸುಸ್ಥಿರ ಅಭಿವೃದ್ಧಿಗೆ ಕ್ಷೇತ್ರ ಒತ್ತು ನೀಡಿದೆ ಎಂದು ತಿಳಿಸಿದರು. ಜನರು ಏಕ ಬಳಕೆ ಪ್ಲಾಸ್ಟಿಕ್ ಬಳಕೆ ನಿಲ್ಲಿಸುವಂತೆ ಕರೆ ನೀಡಿದರು.

Forest and Environment Minister Ishwara B Khandre has requested that plastic which does not dissolve in water, does not dissolve in soil, and adds toxic elements to the air if burned, is harmful to community health, and all conscious citizens should resolve to abandon the use of single-use plastic to protect the planet.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

19 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

20 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

20 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

20 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

20 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

20 hours ago