ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಈ ವೇಳೆ ನಬಾರ್ಡ್‌ನಿಂದ ರಾಜ್ಯದ ರೈತರಿಗೆ ಆಗಿರುವ ಸಾಲದ ಕೊರತೆಯನ್ನು ಸರಿಪಡಿಸಿ, ಅನ್ಯಾಯವನ್ನು ಸರಿದೂಗಿಸುವಂತೆ ಮನವಿ ಮಾಡಿದರು. ನಬಾರ್ಡ್ ಕೃಷಿ ಸಾಲವನ್ನು ಶೇಕಡ 58 ರಷ್ಟು ಕಡಿತ ಮಾಡಿರುವುದರಿಂದ ರಾಜ್ಯದ ರೈತರಿಗೆ ಸಂಕಷ್ಟ ಎದುರಾಗಿದೆ. ಹೀಗಾಗಿ ಸಾಲದ ಮಿತಿಯನ್ನು ಹೆಚ್ಚಿಸಿ, ರೈತರ ಹಿತ ಕಾಪಾಡುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಬೈರತಿ ಸುರೇಶ್, ಚಲುವರಾಯಸ್ವಾಮಿ, ಮತ್ತಿತರರು ಉಪಸ್ಥಿತರಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel