ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ ಪಿಯುಷ್ ಗೋಯಲ್ ಅವರಲ್ಲಿ ಉತ್ತರಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ ಮಾಡಿದ್ದಾರೆ.
ದೆಹಲಿಯಲ್ಲಿ ವಾಣಿಜ್ಯ ಸಚಿವರನ್ನು ಭೇಟಿ ಮಾಡಿದ ಕಾಗೇರಿ, ಸಂಬಾರ ಮಂಡಳಿ ದರ ಪಟ್ಟಿಯಲ್ಲಿ ಕೇವಲ ಕೊಚ್ಚಿಯ ಕಪ್ಪುಮೆಣಸು ಎಂದು ಮಾತ್ರ ನಮೂದಿಸಲಾಗುತ್ತಿದೆ ಎಂದು ತಿಳಿಸಿದರು. ಉತ್ತರ ಕನ್ನಡ ಜಿಲ್ಲೆ ದೇಶದಲ್ಲೇ ಕಾಳುಮೆಣಸು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದೆ. ಈ ಬೆಳೆಯ ಮಾರುಕಟ್ಟೆ ಕೇಂದ್ರ ಸ್ಥಳವಾದ ಶಿರಸಿ ಕಾಳುಮೆಣಸು ಬೆಲೆಯನ್ನು ಕೂಡ ಪ್ರತ್ಯೇಕವಾಗಿ ಸಂಬಾರ ಮಂಡಳಿಯ ಅಧಿಕೃತ ದರಪಟ್ಟಿಯಲ್ಲಿ ನಿತ್ಯ ದಾಖಲಿಸಬೇಕು ಎಂದು ಮನವಿ ಮಾಡಿದ್ದಾರೆ. ಈ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವರು ರೈತರಿಗೆ ಗುಣಮಟ್ಟದ ಬೆಳೆಗೆ ಯೋಗ್ಯ ದರ ಸಿಗುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿರುವುದಾಗಿ ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel