ಸಂಬಾರ ಮಂಡಳಿಯ ದರ ಪಟ್ಟಿಯಲ್ಲಿ ಶಿರಸಿಯ ಕಾಳುಮೆಣಸು ನಮೂದಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ

March 13, 2025
11:10 PM

ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ ಪಿಯುಷ್ ಗೋಯಲ್ ಅವರಲ್ಲಿ ಉತ್ತರಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ ಮಾಡಿದ್ದಾರೆ.

ದೆಹಲಿಯಲ್ಲಿ ವಾಣಿಜ್ಯ ಸಚಿವರನ್ನು ಭೇಟಿ ಮಾಡಿದ ಕಾಗೇರಿ, ಸಂಬಾರ ಮಂಡಳಿ ದರ ಪಟ್ಟಿಯಲ್ಲಿ ಕೇವಲ ಕೊಚ್ಚಿಯ ಕಪ್ಪುಮೆಣಸು ಎಂದು ಮಾತ್ರ ನಮೂದಿಸಲಾಗುತ್ತಿದೆ ಎಂದು ತಿಳಿಸಿದರು.  ಉತ್ತರ ಕನ್ನಡ ಜಿಲ್ಲೆ ದೇಶದಲ್ಲೇ ಕಾಳುಮೆಣಸು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದೆ. ಈ ಬೆಳೆಯ ಮಾರುಕಟ್ಟೆ ಕೇಂದ್ರ ಸ್ಥಳವಾದ ಶಿರಸಿ ಕಾಳುಮೆಣಸು ಬೆಲೆಯನ್ನು ಕೂಡ ಪ್ರತ್ಯೇಕವಾಗಿ ಸಂಬಾರ ಮಂಡಳಿಯ ಅಧಿಕೃತ ದರಪಟ್ಟಿಯಲ್ಲಿ ನಿತ್ಯ ದಾಖಲಿಸಬೇಕು ಎಂದು ಮನವಿ ಮಾಡಿದ್ದಾರೆ. ಈ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವರು ರೈತರಿಗೆ ಗುಣಮಟ್ಟದ ಬೆಳೆಗೆ ಯೋಗ್ಯ ದರ ಸಿಗುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿರುವುದಾಗಿ ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ
October 7, 2026
11:35 PM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ
October 7, 2026
11:22 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror