ದೇಶದಲ್ಲಿ ಕಬ್ಬು ಕೃಷಿಗೆ ಸಂಬಂಧಿಸಿದ ಸವಾಲುಗಳಿಗೆ ಪರಿಹಾರಗಳನ್ನು ಕಂಡುಹಿಡಿಯಲು ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ಅಡಿಯಲ್ಲಿ ವಿಶೇಷ ತಂಡವನ್ನು ರಚಿಸಲಾಗುವುದು ಎಂದು ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ದೆಹಲಿಯಲ್ಲಿ ನಡೆದ ಸುಸ್ಥಿರ ಕಬ್ಬು ಆರ್ಥಿಕತೆಯ ಕುರಿತಾದ ರಾಷ್ಟ್ರೀಯ ಸಮಾಲೋಚನೆಯನ್ನು ವರ್ಚುವಲ್ ಆಗಿ ಉದ್ದೇಶಿಸಿ ಮಾತನಾಡಿದ ಸಚಿವರು, ರೈತರು, ವಿಜ್ಞಾನಿಗಳು ಮತ್ತು ಕೈಗಾರಿಕೆಗಳಿಂದ ಸಲಹೆಗಳನ್ನು ಪಡೆಯುವ ಮೂಲಕ ಕಬ್ಬಿನ ನೀತಿ ಮತ್ತು ಸಂಶೋಧನೆಯ ದಿಕ್ಕನ್ನು ಈ ತಂಡ ನಿರ್ಧರಿಸುತ್ತದೆ. ಈ ತಂಡವು ಕಬ್ಬು ನೀತಿಯನ್ನು ರೂಪಿಸಲು ಮತ್ತು ಕೃಷಿಗೆ ಸಂಬಂಧಿಸಿದ ಪ್ರಾಯೋಗಿಕ ಸಮಸ್ಯೆಗಳನ್ನು ಪರಿಹರಿಸಲು ಕೆಲಸ ಮಾಡುತ್ತದೆ ಎಂದರು. ರೈತರು, ಕೈಗಾರಿಕೆ ಮತ್ತು ವಿಜ್ಞಾನಿಗಳೊಂದಿಗೆ ಚರ್ಚಿಸಿದ ನಂತರವೇ ರಾಜ್ಯ ಮತ್ತು ರಾಷ್ಟ್ರೀಯ ಕೃಷಿ ನೀತಿಗಳಲ್ಲಿ ಬದಲಾವಣೆಗಳನ್ನು ಮಾಡಲಾಗುವುದು. ಕಬ್ಬಿನ ಉತ್ಪಾದನೆಯನ್ನು ಹೆಚ್ಚಿಸುವುದು, ವೆಚ್ಚವನ್ನು ಕಡಿಮೆ ಮಾಡುವುದು, ಯಾಂತ್ರೀಕರಣ, ನೀರಿನ ಸಂರಕ್ಷಣೆ, ಸಕ್ಕರೆ ಚೇತರಿಕೆ, ಎಥೆನಾಲ್ ಮತ್ತು ಮೊಲಾಸಸ್‌ನಂತಹ ಜೈವಿಕ ಉತ್ಪನ್ನಗಳ ಉತ್ತಮ ಬಳಕೆಯನ್ನು ಪರಿಹರಿಸಬೇಕು ಎಂದು ಸಚಿವರು ಹೇಳಿದರು. ಅಂತರ ಬೆಳೆ, ಮೌಲ್ಯ ಸರಪಳಿಗಳು ಮತ್ತು ಸಕಾಲಿಕ ಪಾವತಿಯಂತಹ ಸವಾಲುಗಳನ್ನು ಸಹ ಗಂಭೀರವಾಗಿ ಪರಿಗಣಿಸಬೇಕಿದೆ ಎಂದ ಸಚಿವರು, ರೈತರಿಗೆ ಪ್ರಯೋಜನವಾಗದಿದ್ದರೆ ಸಂಶೋಧನೆಗಳು ಅರ್ಥಹೀನ. ಆದ್ದರಿಂದ, ಪ್ರಾಯೋಗಿಕ ಪರಿಹಾರಗಳನ್ನು ಕಂಡುಹಿಡಿಯಲು ಮೀಸಲಾದ ಕಬ್ಬಿನ ತಂಡವನ್ನು ರಚಿಸಬೇಕಿದೆ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…