ಕಂದಾಯ ಅಧಿಕಾರಿಗಳು ಸಂವೇದನಾಶೀಲತೆಯಿಂದ ಕಾರ್ಯ ನಿರ್ವಹಿಸಿದರೆ ಸಾರ್ವಜನಿಕರಿಗೆ ಅತ್ಯುತ್ತಮ ಸೇವೆ ನೀಡಬಹುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.
ಕೋಲಾರ ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ತಕರಾರು ಅರ್ಜಿ, ಪಹಣಿ ಹಾಗೂ ನಮೂನೆ 53, 57 ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಅಧಿಕವಾಗುತ್ತಿದ್ದು, ಈ ಎಲ್ಲಾ ಪ್ರಕರಣಗಳಿಗೆ ಕಾಲಮಿತಿಯೊಳಗೆ ಪರಿಹಾರ ನೀಡಬೇಕು. ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ನ್ಯಾಯಾಲಯಗಳು ತತ್ವರಿತಗತಿಯಲ್ಲಿ ಪ್ರಕರಣಗಳನ್ನು ಇತ್ಯರ್ಥಗೊಳಿಸಬೇಕು ಎಂದು ಅಧಿಕಾರಿಗಳಿಗೆ ಕಂದಾಯ ಸಚಿವರು ಸೂಚಿಸಿದರು. ಪೈಕಿ ಪಹಣಿ ಪ್ರಕರಣಗಳ ಸಂಖ್ಯೆ ಜಿಲ್ಲೆಯಲ್ಲಿ ಅಧಿಕವಾಗಿದ್ದು,. ಹಲವು ಪ್ರಕರಣಗಳಲ್ಲಿ ಒಂದು ಸರ್ವೇ ನಂಬರ್ ನಲ್ಲಿ 50-100 ಜನರ ಹೆಸರುಗಳು ಇದ್ದು, ಕನಿಷ್ಟ ಕಲಂ 3 ಮತ್ತು 9 ರ ನಡುವೆ ತಾಳೆ ಇರುವ ಪ್ರಕರಣಗಳಲ್ಲಿ ಸರ್ಕಾರವೇ ಕ್ಯಾಂಪೇನ್ ಮೂಲಕ ಪೋಡಿ ಮಾಡಿಕೊಡಲು ಸಿದ್ದವಿದೆ” ಈ ಪ್ರಕರಣಗಳ ಜೊತೆಗೆ ನಮೂನೆ 53, 57 ಪ್ರಕರಣಗಳನ್ನೂ ಕಾಲಮಿತಿಯೊಳಗೆ ಅಧಿಕಾರಿಗಳು ಪರಿಹರಿಸಬೇಕು” ಎಂದು ಅವರು ತಿಳಿಸಿದರು.
ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
ಗ್ರಾಮೀಣ ಮಹಿಳೆಯರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಅರಣ್ಯ, ಪರಿಸರ ಸಚಿವ ಈಶ್ವರ ಬಿ.ಖಂಡ್ರೆ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2024025 ನೇ ಸಾಲಿನಲ್ಲಿ ಎಫ್‌ಎಕ್ಯೂ ಗುಣಮಟ್ಟದ…
ದೀಪಾವಳಿ ಅಂಗವಾಗಿ ಚಿಕ್ಕಮಗಳೂರು ಜಿಲ್ಲೆಯ ಬಿಂಡಿಗ ದೇವಿರಮ್ಮ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸಿ,…
ಈಗಿನಂತೆ ಈ ಮಳೆಯು ನವೆಂಬರ್ 4ರ ವರೆಗೆ ಮುಂದುವರಿಯುವ ಲಕ್ಷಣಗಳಿವೆ.
ಕತ್ತಲಿನಿಂದ ಬೆಳಕಿನೆಡೆಗೆ ಸಾಗುವ ದೀಪಾವಳಿಗೆ ದೀಪವೇ ವಿಶೇಷ. ವಿವಿಧ ವಿನ್ಯಾಸದ ಬಣ್ಣದ ದೀಪಗಳನ್ನು…