ಬಿಜೆಪಿ ಸರ್ಕಾರ ಇದ್ದಾಗ ಮಾಡಿದ್ದ ಶಾಲಾ ಪಠ್ಯಪುಸ್ತಕಗಳ ಪಠ್ಯವನ್ನು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ತಿದ್ದುಪಡಿ ಮಾಡುವುದಾಗಿ ಹೇಳಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈ ಬಗ್ಗೆ ಹಲವು ಬಾರಿ ಮಾತುಗಳು ಕೇಳಿಬಂದಿತ್ತು ಕೂಡ. ಶಿಕ್ಷಣ ಸಚಿವರಂತೂ ಪಠ್ಯ ಪುಸ್ತಕ ತಿದ್ದುಪಡಿ ಮಾಡಿಯೇ ಸಿದ್ದ ಎಂದು ಹೇಳಿದ್ದರು. ಅದರಂತೆ ಈಗ ರಾಜ್ಯ ಸರ್ಕಾರ ತಿದ್ದುಪಡಿ ಮಾಡಲು ಐದು ಸಮಿತಿಗಳನ್ನು ರಚಿಸಿದೆ.
ರಾಜ್ಯ ಸರ್ಕಾರ ಈ ಹಿಂದೆ ಹೇಳಿದಂತೆ ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಮುಂದಾಗಿದೆ. ಇದೀಗ ರಾಜ್ಯ ಪಠ್ಯಕ್ರಮದ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಐದು ಸಮಿತಿಗಳನ್ನು ರಚಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ. ಒಟ್ಟು ಐದು ಸಮಿತಿಗಳನ್ನು ರಚನೆ ಮಾಡಲಾಗಿದೆ. ಕನ್ನಡ ಪ್ರಥಮ ಭಾಷೆ, ಕನ್ನಡ ದ್ವಿತೀಯ ಭಾಷೆ, ಕನ್ನಡ ತೃತೀಯ ಭಾಷೆ, 6, 7ನೇ ತರಗತಿಯ ಸಮಾಜ ವಿಜ್ಞಾನ ಹಾಗೂ 8, 9, 10ನೇ ತರಗತಿಯ ಸಮಾಜ ವಿಜ್ಞಾನಕ್ಕೆ ಪ್ರತ್ಯೇಕವಾಗಿ ಸಮಿತಿಗಳನ್ನು ರಚಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ನಿವೃತ್ತ ಪ್ರಾಧ್ಯಾಪಕ ಮಂಜುನಾಥ ಜೆ. ಹೆಗಡೆ ಅವರನ್ನು ಐದೂ ಸಮಿತಿಗಳ ಸಂಯೋಜಕರನ್ನಾಗಿ ನೇಮಿಸಲಾಗಿದೆ.
ಬಿಜೆಪಿ ಆಡಳಿತ ಅವಧಿಯಲ್ಲಿ ರೋಹಿತ್ ಚಕ್ರತೀರ್ಥ ಸಮಿತಿ ಮಾಡಿದ ಪಠ್ಯಪುಸ್ತಕಗಳ ಎಲ್ಲ ತಿದ್ದುಪಡಿಯನ್ನೂ ರಾಜ್ಯ ಕಾಂಗ್ರೆಸ್ ಸರ್ಕಾರ ರದ್ದು ಮಾಡಲಾಗಿತ್ತು. ತಿದ್ದುಪಡಿಗೂ ಮೊದಲು ಇದ್ದ ಪಠ್ಯ ಕ್ರಮವನ್ನೇ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಅನುಸರಿಸಲು ಸೂಚಿಸಲಾಗಿತ್ತು. ಈಗ ಪಠ್ಯ ಪರಿಷ್ಕರಣೆಗೆ ಸಮಿತಿಗಳನ್ನು ರಚಿಸಲಾಗಿದ್ದು, ಮೂರು ತಿಂಗಳ ಅವಕಾಶ ನೀಡಲಾಗಿದೆ. ಸಮಿತಿಗಳು ಕೊಡುವ ಪರಿಷ್ಕರಣಾ ವರದಿಯ ಶಿಫಾರಸುಗಳನ್ನು 2024-25ನೇ ಸಾಲಿನಿಂದ ಜಾರಿಗೆ ತರಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಸಮಿತಿಗಳ ಅಧ್ಯಕ್ಷರುಗಳ ವಿವರ: ಪ್ರಥಮ ಭಾಷೆ ಕನ್ನಡ: ಅಂಜನಪ್ಪ, ಪ್ರಾಧ್ಯಾಪಕರು, ತುಂಗಾಕಾಲೇಜು, ತೀರ್ಥಹಳ್ಳಿ. ದ್ವಿತೀಯ ಭಾಷೆ ಕನ್ನಡ: ಎಚ್.ಎಸ್.ಸತ್ಯನಾರಾಯಣ್, ಉಪನ್ಯಾಸಕ, ಸರ್ಕಾರಿ ಬಾಲಕಿಯರ ಪಿಯು ಕಾಲೇಜು ಬಸವನಹಳ್ಳಿ, ಚಿಕ್ಕಮಗಳೂರು. ತೃತೀಯ ಭಾಷೆ ಕನ್ನಡ: ಮಂಜಣ್ಣ, ಪ್ರಾಧ್ಯಾಪಕ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ದಾವಣಗೆರೆ. 6,7ನೇ ತರಗತಿ ಸಮಾಜ ವಿಜ್ಞಾನ: ಎಂ.ಕಿರಣ್, ಸಹಾಯಕ ಪ್ರಾಧ್ಯಾಪಕರು, ಕೇಂದ್ರೀಯ ವಿವಿ ಕಲಬುರಗಿ. 8-10ನೇ ತರಗತಿ ಸಮಾಜ ವಿಜ್ಞಾನ: ಅಶ್ವತ್ಥನಾರಾಯಣ, ನಿವೃತ್ತ ಪ್ರಾಧ್ಯಾಪಕರು ಬೆಂಗಳೂರು.
– ಅಂತರ್ಜಾಲ ಮಾಹಿತಿ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು ಕಡಬ ಅರಣ್ಯ ಹಾಗೂ ಅರಣ್ಯದಂಚಿನ…
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…