Advertisement
ಸುದ್ದಿಗಳು

ಮತ್ತೆ ಮುನ್ನೆಲೆಗೆ ಬಂದ ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆ | ತಿದ್ದುಪಡಿಗೆ ಐದು ಸಮಿತಿಗಳ ರಚನೆ

Share

ಬಿಜೆಪಿ ಸರ್ಕಾರ ಇದ್ದಾಗ ಮಾಡಿದ್ದ ಶಾಲಾ ಪಠ್ಯಪುಸ್ತಕಗಳ ಪಠ್ಯವನ್ನು ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ತಿದ್ದುಪಡಿ ಮಾಡುವುದಾಗಿ ಹೇಳಿತ್ತು. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈ ಬಗ್ಗೆ ಹಲವು ಬಾರಿ ಮಾತುಗಳು ಕೇಳಿಬಂದಿತ್ತು ಕೂಡ. ಶಿಕ್ಷಣ ಸಚಿವರಂತೂ ಪಠ್ಯ ಪುಸ್ತಕ ತಿದ್ದುಪಡಿ ಮಾಡಿಯೇ ಸಿದ್ದ ಎಂದು ಹೇಳಿದ್ದರು. ಅದರಂತೆ ಈಗ ರಾಜ್ಯ ಸರ್ಕಾರ ತಿದ್ದುಪಡಿ ಮಾಡಲು ಐದು ಸಮಿತಿಗಳನ್ನು ರಚಿಸಿದೆ.

ರಾಜ್ಯ ಸರ್ಕಾರ ಈ ಹಿಂದೆ ಹೇಳಿದಂತೆ ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಮುಂದಾಗಿದೆ. ಇದೀಗ ರಾಜ್ಯ ಪಠ್ಯಕ್ರಮದ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಐದು ಸಮಿತಿಗಳನ್ನು ರಚಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ. ಒಟ್ಟು ಐದು ಸಮಿತಿಗಳನ್ನು ರಚನೆ ಮಾಡಲಾಗಿದೆ. ಕನ್ನಡ ಪ್ರಥಮ ಭಾಷೆ, ಕನ್ನಡ ದ್ವಿತೀಯ ಭಾಷೆ, ಕನ್ನಡ ತೃತೀಯ ಭಾಷೆ, 6, 7ನೇ ತರಗತಿಯ ಸಮಾಜ ವಿಜ್ಞಾನ ಹಾಗೂ 8, 9, 10ನೇ ತರಗತಿಯ ಸಮಾಜ ವಿಜ್ಞಾನಕ್ಕೆ ಪ್ರತ್ಯೇಕವಾಗಿ ಸಮಿತಿಗಳನ್ನು ರಚಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ನಿವೃತ್ತ ಪ್ರಾಧ್ಯಾಪಕ ಮಂಜುನಾಥ ಜೆ. ಹೆಗಡೆ ಅವರನ್ನು ಐದೂ ಸಮಿತಿಗಳ ಸಂಯೋಜಕರನ್ನಾಗಿ ನೇಮಿಸಲಾಗಿದೆ.

ಬಿಜೆಪಿ ಆಡಳಿತ ಅವಧಿಯಲ್ಲಿ ರೋಹಿತ್‌ ಚಕ್ರತೀರ್ಥ ಸಮಿತಿ ಮಾಡಿದ ಪಠ್ಯಪುಸ್ತಕಗಳ ಎಲ್ಲ ತಿದ್ದುಪಡಿಯನ್ನೂ ರಾಜ್ಯ ಕಾಂಗ್ರೆಸ್ ಸರ್ಕಾರ ರದ್ದು ಮಾಡಲಾಗಿತ್ತು. ತಿದ್ದುಪಡಿಗೂ ಮೊದಲು ಇದ್ದ ಪಠ್ಯ ಕ್ರಮವನ್ನೇ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಅನುಸರಿಸಲು ಸೂಚಿಸಲಾಗಿತ್ತು. ಈಗ ಪಠ್ಯ ಪರಿಷ್ಕರಣೆಗೆ ಸಮಿತಿಗಳನ್ನು ರಚಿಸಲಾಗಿದ್ದು, ಮೂರು ತಿಂಗಳ ಅವಕಾಶ ನೀಡಲಾಗಿದೆ. ಸಮಿತಿಗಳು ಕೊಡುವ ಪರಿಷ್ಕರಣಾ ವರದಿಯ ಶಿಫಾರಸುಗಳನ್ನು 2024-25ನೇ ಸಾಲಿನಿಂದ ಜಾರಿಗೆ ತರಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಸಮಿತಿಗಳ ಅಧ್ಯಕ್ಷರುಗಳ ವಿವರ: ಪ್ರಥಮ ಭಾಷೆ ಕನ್ನಡ: ಅಂಜನಪ್ಪ, ಪ್ರಾಧ್ಯಾಪಕರು, ತುಂಗಾಕಾಲೇಜು, ತೀರ್ಥಹಳ್ಳಿ. ದ್ವಿತೀಯ ಭಾಷೆ ಕನ್ನಡ: ಎಚ್.ಎಸ್.ಸತ್ಯನಾರಾಯಣ್‌, ಉಪನ್ಯಾಸಕ, ಸರ್ಕಾರಿ ಬಾಲಕಿಯರ ಪಿಯು ಕಾಲೇಜು ಬಸವನಹಳ್ಳಿ, ಚಿಕ್ಕಮಗಳೂರು. ತೃತೀಯ ಭಾಷೆ ಕನ್ನಡ: ಮಂಜಣ್ಣ, ಪ್ರಾಧ್ಯಾಪಕ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ದಾವಣಗೆರೆ. 6,7ನೇ ತರಗತಿ ಸಮಾಜ ವಿಜ್ಞಾನ: ಎಂ.ಕಿರಣ್‌, ಸಹಾಯಕ ಪ್ರಾಧ್ಯಾಪಕರು, ಕೇಂದ್ರೀಯ ವಿವಿ ಕಲಬುರಗಿ. 8-10ನೇ ತರಗತಿ ಸಮಾಜ ವಿಜ್ಞಾನ: ಅಶ್ವತ್ಥನಾರಾಯಣ, ನಿವೃತ್ತ ಪ್ರಾಧ್ಯಾಪಕರು ಬೆಂಗಳೂರು.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

22 hours ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

2 days ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

2 days ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

3 days ago