ಸುಸ್ಥಿರ ಮೀನುಗಾರಿಕೆ ಅಭಿವೃದ್ಧಿಗಾಗಿ ನೀಲಿಕ್ರಾಂತಿ | ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ |

September 25, 2024
9:40 PM

ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿ ಸಹಯೋಗದಲ್ಲಿ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಲ್ಲಿ ಇಂದಿನಿಂದ  ಮೂರು ದಿನಗಳ ‘ಸುಸ್ಥಿರ ಮೀನುಗಾರಿಕೆ ಅಭಿವೃದ್ಧಿಗಾಗಿ ನೀಲಿಕ್ರಾಂತಿ’ ರಾಷ್ಟ್ರೀಯ ಸಮ್ಮೇಳನಕ್ಕೆ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಬೆಂಗಳೂರಿನಲ್ಲಿಂದು ಚಾಲನೆ ನೀಡಿದರು.

ಬಳಿಕ ಮಾತನಾಡಿದ ಎನ್.ಎಸ್. ಭೋಸರಾಜು, ಜೀವನೋಪಾಯ ಹಾಗೂ ಆರ್ಥಿಕ ಬೆಳವಣಿಗೆಯಲ್ಲಿ ಮೀನುಗಾರಿಕೆ ಕ್ಷೇತ್ರ ಪ್ರಮುಖವಾಗಿದೆ. ಆಹಾರ, ಆರೋಗ್ಯದಲ್ಲಿ ಅತ್ಯುನ್ನತ ಕೊಡುಗೆ ನೀಡುವ ಈ ಕ್ಷೇತ್ರ, ಸ್ಥಳೀಯ ಮಟ್ಟದಲ್ಲಿ ಉದ್ಯೋಗ ಒದಗಿಸುವಲ್ಲಿ ನೆರವಾಗಿದೆ. ಮೀನು ಉತ್ಪಾದನೆಯಲ್ಲಿ ಚೈನಾ ಬಿಟ್ಟರೆ ಭಾರತ ಎರಡನೇ ಸ್ಥಾನದಲ್ಲಿದೆ.ಮೀನುಗಾರಿಕೆ ಅಭಿವೃದ್ಧಿಗೆ ಸೂಕ್ತ ಮಾರುಕಟ್ಟೆಯ ಅಗತ್ಯವಿದೆ ಎಂದರು. ಆರೋಗ್ಯದ ದೃಷ್ಟಿಯಿಂದ ಮೀನುಗಾರಿಕೆಯನ್ನು ಹೆಚ್ಚಾಗಿ ಪ್ರೋತ್ಸಾಹಿಸಬೇಕು, ಕೆರೆಗಳಲ್ಲಿ ಸೌರಶಕ್ತಿಯೊಂದಿಗೆ ಮೀನುಗಾರಿಕೆ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಪ್ರಸ್ತುತ ಇರುವ ಪರಿಸ್ಥಿತಿಗನುಗುಣವಾಗಿ ಮೀನುಗಾರಿಕೆ ಕ್ಷೇತ್ರದಲ್ಲಿ ಹೊಸ ಹೊಸ ಸಂಶೋಧನೆಯಾಗಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಈ ವೇಳೆ, ಸಂಶೋಧನಾ ಪ್ರಬಂಧ ಒಳಗೊಂಡ ಕಿರುಹೊತ್ತಿಗೆ ಬಿಡುಗಡೆ ಮಾಡಲಾಯಿತು.ಮೀನುಗಾರಿಕೆ ಸಚಿವ ಮಂಕಾಳ ಎಸ್ ವೈದ್ಯ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror