ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿ ಸಹಯೋಗದಲ್ಲಿ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಲ್ಲಿ ಇಂದಿನಿಂದ ಮೂರು ದಿನಗಳ ‘ಸುಸ್ಥಿರ ಮೀನುಗಾರಿಕೆ ಅಭಿವೃದ್ಧಿಗಾಗಿ ನೀಲಿಕ್ರಾಂತಿ’ ರಾಷ್ಟ್ರೀಯ ಸಮ್ಮೇಳನಕ್ಕೆ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಬೆಂಗಳೂರಿನಲ್ಲಿಂದು ಚಾಲನೆ ನೀಡಿದರು.
ಬಳಿಕ ಮಾತನಾಡಿದ ಎನ್.ಎಸ್. ಭೋಸರಾಜು, ಜೀವನೋಪಾಯ ಹಾಗೂ ಆರ್ಥಿಕ ಬೆಳವಣಿಗೆಯಲ್ಲಿ ಮೀನುಗಾರಿಕೆ ಕ್ಷೇತ್ರ ಪ್ರಮುಖವಾಗಿದೆ. ಆಹಾರ, ಆರೋಗ್ಯದಲ್ಲಿ ಅತ್ಯುನ್ನತ ಕೊಡುಗೆ ನೀಡುವ ಈ ಕ್ಷೇತ್ರ, ಸ್ಥಳೀಯ ಮಟ್ಟದಲ್ಲಿ ಉದ್ಯೋಗ ಒದಗಿಸುವಲ್ಲಿ ನೆರವಾಗಿದೆ. ಮೀನು ಉತ್ಪಾದನೆಯಲ್ಲಿ ಚೈನಾ ಬಿಟ್ಟರೆ ಭಾರತ ಎರಡನೇ ಸ್ಥಾನದಲ್ಲಿದೆ.ಮೀನುಗಾರಿಕೆ ಅಭಿವೃದ್ಧಿಗೆ ಸೂಕ್ತ ಮಾರುಕಟ್ಟೆಯ ಅಗತ್ಯವಿದೆ ಎಂದರು. ಆರೋಗ್ಯದ ದೃಷ್ಟಿಯಿಂದ ಮೀನುಗಾರಿಕೆಯನ್ನು ಹೆಚ್ಚಾಗಿ ಪ್ರೋತ್ಸಾಹಿಸಬೇಕು, ಕೆರೆಗಳಲ್ಲಿ ಸೌರಶಕ್ತಿಯೊಂದಿಗೆ ಮೀನುಗಾರಿಕೆ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಪ್ರಸ್ತುತ ಇರುವ ಪರಿಸ್ಥಿತಿಗನುಗುಣವಾಗಿ ಮೀನುಗಾರಿಕೆ ಕ್ಷೇತ್ರದಲ್ಲಿ ಹೊಸ ಹೊಸ ಸಂಶೋಧನೆಯಾಗಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಈ ವೇಳೆ, ಸಂಶೋಧನಾ ಪ್ರಬಂಧ ಒಳಗೊಂಡ ಕಿರುಹೊತ್ತಿಗೆ ಬಿಡುಗಡೆ ಮಾಡಲಾಯಿತು.ಮೀನುಗಾರಿಕೆ ಸಚಿವ ಮಂಕಾಳ ಎಸ್ ವೈದ್ಯ ಮತ್ತಿತರರು ಉಪಸ್ಥಿತರಿದ್ದರು.
ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…
ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…
ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್…
ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…
ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…
ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…