ಬಳ್ಳಾರಿ ಜಿಲ್ಲೆಯ ಕಂಪ್ಲಿ ಮತ್ತು ಸಿರುಗುಪ್ಪ ತಾಲ್ಲೂಕುಗಳಲ್ಲಿ ಖಾಸಗಿ ಭತ್ತ ಕಟಾವು ಯಂತ್ರಗಳ ಮಾಲೀಕರು ರೈತರಿಂದ ಪ್ರತಿ ಗಂಟೆಗೆ 2500 ರೂಪಾಯಿಯಿಂದ 3000 ರೂಪಾಯಿಗಳವರೆಗೆ ಬಾಡಿಗೆ ಹಣ ವಸೂಲಿ ಮಾಡುತ್ತಿರುವ ಬಗ್ಗೆ ದೂರು ಬಂದಿದೆ. ಭತ್ತ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ಗರಿಷ್ಠ 2300 ರೂಪಾಯಿ ಮೀರದಂತೆ ಬಾಡಿಗೆಯನ್ನು ನಿಗದಿಪಡಿಸಲಾಗಿದ್ದು, ಹೆಚ್ಚಿನ ದರ ಪಡೆಯಲು ಮುಂದಾದರೆ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಎಚ್ಚರಿಕೆ ನೀಡಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಬೆಳೆದ ಭತ್ತಕ್ಕೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಇಲ್ಲದ ಕಾರಣ ಹಾಗೂ ಅಕಾಲಿಕ ಮಳೆಯಿಂದ ರೈತರು ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ಭತ್ತ ಬೆಳೆದ ರೈತರಿಗೆ ಹೆಚ್ಚಿನ ಆರ್ಥಿಕ ಹೊರೆಯಾಗಲಿದೆ ಎಂದು ಹೇಳಿದ್ದಾರೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…