ರೈಟ್ ಟು ಲಿವ್, ಕೋಟೆ ಫೌಂಡೇಶನ್ ವತಿಯಿಂದ ಸರ್ಕಾರಿ ಪ್ರೌಢಶಾಲೆ ಎಲಿಮಲೆಗೆ ಕೊಡುಗೆಯಾಗಿ ನೀಡಿದ ಸ್ಮಾರ್ಟ್ ಟಿ. ವಿ. ಯ ಉದ್ಘಾಟನಾ ಕಾರ್ಯಕ್ರಮ ಈಚೆಗೆ ನಡೆಯಿತು. ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಜಯಂತ ಹರ್ಲಡ್ಕ ಅಧ್ಯಕ್ಷತೆ ವಹಿಸಿದ್ದರು.
ಕೋಟೆ ಫೌಂಡೇಶನ್ ಕೋಆರ್ಡಿನೇಟರ್ ಪ್ರದೀಪ್ ಉಬರಡ್ಕ ಸ್ಮಾರ್ಟ್ ಟಿ. ವಿ ಗೆ ಚಾಲನೆ ನೀಡಿ, ವಿದ್ಯಾರ್ಥಿಗಳು ಸ್ಮಾರ್ಟ್ ಟಿ. ವಿ .ಯ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.ಎಸ್. ಡಿ. ಎಂ. ಸಿ ಸದಸ್ಯ ಧನಂಜಯ ಬಾಳೆತೋಟ ಹಾಜರಿದ್ದರು. ಶಾಲಾ ಮುಖ್ಯ ಗುರುಗಳಾದ ಸಂಧ್ಯಾಕುಮಾರ್ ವಂದಿಸಿದರು.ಸಮಾಜ ವಿಜ್ಞಾನ ಶಿಕ್ಷಕರಾದ ವಸಂತ ನಾಯಕ್. ಡಿ ಕಾರ್ಯಕ್ರಮ ನಿರೂಪಿಸಿದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel