ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯಲ್ಲಿ ಕಳೆದ ನಾಲ್ಕು ವಾರಗಳಲ್ಲಿ 150 ಕ್ಕೂ ಹೆಚ್ಚು ಆಲಿವ್ ರಿಡ್ಲಿ ಆಮೆಗಳ ಮೃತದೇಹಗಳು ಪತ್ತೆಯಾಗಿರುವ ಘಟನೆ ನಡೆದಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಈ ಸಂಖ್ಯೆ ಐದು ಪಟ್ಟು ಹೆಚ್ಚಾಗಿದೆ, ಅಂದರೆ 2021 ರಲ್ಲಿ ಜನವರಿ 4ರಿಂದ 26 ರವರೆಗೆ 30 ಸಾವುಗಳು ದಾಖಲಾಗಿದೆ.
ಆಮೆಗಳು ಪೆರಿಯಕುತಗೈ, ಪುಷ್ಪವನಂ ಅರುಕತುರೈ, ಮಣಿಯಂತೀವು ಮತ್ತು ಕೊಡಿಯಾಕರೈ ಮುಂತಾದ ಗ್ರಾಮಗಳ ಸಮುದ್ರ ತೀರದಲ್ಲಿ ನೀರಿನ ಬಳಿ ಕಂಡುಬಂದಿದೆ. ಆಮೆಗಳ ಸಾವಿಗೆ ಪ್ರಮುಖ ಕಾರಣವೆಂದರೆ ಉಸಿರುಕಟ್ಟುವಿಕೆಯಾಗಿದೆ ಎಂದು ತಜ್ಞರು ಹೇಳಿದ್ದಾರೆ.
ಆಲಿವ್ ರಿಡ್ಲಿ ಆಮೆಗಳನ್ನು ಸಂರಕ್ಷಿಸುವ ಅಗತ್ಯವನ್ನು ಒತ್ತಿ ಹೇಳಿದ ನೌಕಾ ಸಂರಕ್ಷಣಾಧಿಕಾರಿ ಮತ್ತು ಟ್ರೀ ಪೌಂಡೇಶನ್ ಅಧ್ಯಕ್ಷೆ ಡಾ. ಸುಪ್ರಜಾ ಧಾರಿಣಿ, ಸಾಗರದಲ್ಲಿ ಪರಿಸರ ಸಮತೋಲನ ಮತ್ತು ಜೀವವೈವಿಧ್ಯತೆಯನ್ನು ಕಾಪಾಡುವಲ್ಲಿ ಆಲಿವ್ ರಿಡ್ಲಿ ಆಮೆಗಳು ಪ್ರಮುಖ ಪಾತ್ರವಹಿಸುತ್ತದೆ ಎಂದು ಹೇಳಿದ್ದಾರೆ.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.