ಕಾಂತರ 2 ಗಾಗಿ ಇಡೀ ವಿಶ್ವವೇ ಕಾದು ಕೂತಿದೆ. ಕಾಂತರ ಮೊದಲ ಮೇನಿಯಾದಿಂದ ಜನತೆ ಇನ್ನೂ ಹೊರ ಬಂದಿಲ್ಲ. ಇದೀಗ ಕಾತರದಿಂದ ಕಾದಿದ್ದ ಅಭಿಮಾನಿಗಳಿಗೆ ರಿಷಬ್ ಶೆಟ್ಟಿ ಅವರು ‘ಕಾಂತಾರ 2’ ಸಿನಿಮಾ ಬಗ್ಗೆ ಅಪ್ಡೇಟ್ ನೀಡಿದ್ದಾರೆ. ಅದರ ಜೊತೆಗೆ ಅವರು ಯುಗಾದಿ ಹಬ್ಬದ ಶುಭಾಶಯ ತಿಳಿಸಿದ್ದಾರೆ.
ನಟ ರಿಷಬ್ ಶೆಟ್ಟಿ ಅವರು ‘ಕಾಂತಾರ 2’ ಚಿತ್ರದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಬಹುನಿರೀಕ್ಷಿತ ಸಿನಿಮಾ ಬಗ್ಗೆ ಅವರು ಯಾವಾಗ ಅಪ್ಡೇಟ್ ನೀಡಲಿದ್ದಾರೆ ಎಂದು ಪ್ರೇಕ್ಷಕರು ಕಾದಿದ್ದರು. ಯುಗಾದಿ ಹಬ್ಬದ ಪ್ರಯುಕ್ತ ರಿಷಬ್ ಶೆಟ್ಟಿ ಹೊಸ ಸುದ್ದಿ ನೀಡಿದ್ದಾರೆ. ಈ ಶುಭ ದಿನದಂದು ‘ಕಾಂತಾರ 2’ ಸ್ಕ್ರಿಪ್ಟ್ ಕೆಲಸ ಆರಂಭ ಆಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಸಿಹಿ ಸುದ್ದಿ ನೀಡುವ ಮೂಲಕ ಅವರು ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯ ಕೋರಿದ್ದಾರೆ. ‘ಬರವಣಿಗೆಯ ಆದಿ’ ಎಂಬ ಕ್ಯಾಪ್ಷನ್ನೊಂದಿಗೆ ಅವರು ಪೋಸ್ಟರ್ ಹಂಚಿಕೊಂಡಿದ್ದಾರೆ. ಅದನ್ನು ಹೊರತುಪಡಿಸಿ ಅವರು ಹೆಚ್ಚೇನೂ ಮಾಹಿತಿ ಬಿಟ್ಟುಕೊಟ್ಟಿಲ್ಲ. ಆದಷ್ಟ ಬೇಗ ರಿಷಬ್ ಶೆಟ್ಟಿ ಶೂಟಿಂಗ್ ಆರಂಭಿಸಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.
ತುಳುನಾಡಿನ ಕಥೆಯುಳ್ಳ ‘ಕಾಂತಾರ’ ಸಿನಿಮಾ ಮಾಡಿದ ಮೋಡಿ ಅಷ್ಟಿಷ್ಟಲ್ಲ. ಬಾಕ್ಸ್ ಆಫೀಸ್ನಲ್ಲಿ 400 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ ರಿಷಬ್ ಶೆಟ್ಟಿ ಅವರಿಗೆ ದೊಡ್ಡ ಮಟ್ಟದ ಖ್ಯಾತಿ ತಂದುಕೊಟ್ಟ ಸಿನಿಮಾ ಅದು. ಅದರ ಸಕ್ಸಸ್ ಮೀಟ್ನಲ್ಲಿ ‘ಕಾಂತಾರ 2’ ಬಗ್ಗೆ ಅಧಿಕೃತವಾಗಿ ಘೋಷಿಸಲಾಗಿತ್ತು. ‘ಹೊಂಬಾಳೆ ಫಿಲ್ಮ್ಸ್’ ಬ್ಯಾನರ್ ಮೂಲಕ ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಿಸಲು ಪ್ಲ್ಯಾನ್ ಮಾಡಲಾಗಿದೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.