ರಿಷಬ್ ಶೆಟ್ಟಿಯವರಿಗೆ ದಾದಾ ಸಾಹೇಬ್ ಫಾಲ್ಕೆ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್‌

February 15, 2023
2:28 PM

ಸಿನಿಮಾ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಪ್ರದಾನ ಕಾರ್ಯಕ್ರಮವಾಗಿರುವ ದಾದಾ ಸಾಹೇಬ್ ಫಾಲ್ಕೆ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್‌ನಲ್ಲಿ ಕನ್ನಡ ಚಿತ್ರರಂಗದ ಡಿವೈನ್ ಸ್ಟಾರ್ ಎನಿಸಿಕೊಂಡಿರುವ ರಿಷಬ್ ಶೆಟ್ಟಿ ಅವರು ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ದಾದಾ ಸಾಹೇಬ್ ಫಾಲ್ಕೆ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅಕಾಡೆಮಿ ಭಾರತ ಚಿತ್ರರಂಗದ ಒಳ್ಳೊಳ್ಳೆ ಚಿತ್ರಗಳು, ಒಳ್ಳೆಯ ನಟರನ್ನು, ಚಿತ್ರ ತಂತ್ರಜ್ಞರನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸಿ ಅವರ ಕೆಲಸಕ್ಕೆ ಶ್ಲಾಘನೆ ನೀಡಲು ನಡೆಸುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಇದಾಗಿದೆ.

ಈ ಬಾರಿಯ ದಾದಾ ಸಾಹೇಬ್ ಫಾಲ್ಕೆ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್ ಕಾರ್ಯಕ್ರಮ ಇದೇ ತಿಂಗಳ 20ರಂದು ಮುಂಬೈನ ತಾಜ್ ಲ್ಯಾಂಡ್ಸ್ ಎಂಡ್ ಹೊಟೇಲ್‌ನಲ್ಲಿ ನಡೆಯಲಿದೆ. ಇದರಲ್ಲಿ ರಿಷಬ್ ಶೆಟ್ಟಿ ಅವರಿಗೆ ‘ಮೋಸ್ಟ್ ಪ್ರಾಮಿಸಿಂಗ್ ಆಕ್ಟರ್’ ಎಂಬ ಪ್ರಶಸ್ತಿ ಲಭಿಸಿದೆ. ಈ ಮೂಲಕ ರಿಷಬ್ ಶೆಟ್ಟಿ ಅತಿಹೆಚ್ಚು ಭರವಸೆ ಮೂಡಿಸಿದ ನಟ ಎಂಬ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.

ಕಾಂತಾರ ಚಿತ್ರದಲ್ಲಿ ರಿಷಬ್ ಶೆಟ್ಟಿ ಅದ್ಭುತ ನಟನೆಗೆ ಈ ಪ್ರಶಸ್ತಿ ಲಭಿಸಿದ್ದು, ರಿಷಬ್ ಶೆಟ್ಟಿ ಶ್ರಮಕ್ಕೆ ಮತ್ತೊಂದು ಮಹಾ ಮನ್ನಣೆ ಸಿಕ್ಕಂತಾಗಿದೆ.ಮೋಸ್ಟ್ ಪ್ರಾಮಿಸಿಂಗ್ ಆಕ್ಟರ್ ಪ್ರಶಸ್ತಿ ರಿಷಬ್ ಶೆಟ್ಟಿ ಪಾಲಾಗಿದ್ದು, ಅತ್ಯುತ್ತಮ ಚಿತ್ರ, ಅತ್ಯುತ್ತಮ ನಟ, ನಟಿ, ಅತ್ಯುತ್ತಮ ಚಿತ್ರಗಳ ಕೆಟಗರಿ ಅಡಿಯಲ್ಲಿ ಯಾರು ಪ್ರಶಸ್ತಿಗಳನ್ನು ಪಡೆದುಕೊಳ್ಳಲಿದ್ದಾರೆ ಎಂಬ ಕುತೂಹಲ ಹೆಚ್ಚಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ
October 15, 2026
10:10 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror