ಸಿನಿಮಾ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಪ್ರದಾನ ಕಾರ್ಯಕ್ರಮವಾಗಿರುವ ದಾದಾ ಸಾಹೇಬ್ ಫಾಲ್ಕೆ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್‌ನಲ್ಲಿ ಕನ್ನಡ ಚಿತ್ರರಂಗದ ಡಿವೈನ್ ಸ್ಟಾರ್ ಎನಿಸಿಕೊಂಡಿರುವ ರಿಷಬ್ ಶೆಟ್ಟಿ ಅವರು ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ದಾದಾ ಸಾಹೇಬ್ ಫಾಲ್ಕೆ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅಕಾಡೆಮಿ ಭಾರತ ಚಿತ್ರರಂಗದ ಒಳ್ಳೊಳ್ಳೆ ಚಿತ್ರಗಳು, ಒಳ್ಳೆಯ ನಟರನ್ನು, ಚಿತ್ರ ತಂತ್ರಜ್ಞರನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸಿ ಅವರ ಕೆಲಸಕ್ಕೆ ಶ್ಲಾಘನೆ ನೀಡಲು ನಡೆಸುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಇದಾಗಿದೆ.
ಈ ಬಾರಿಯ ದಾದಾ ಸಾಹೇಬ್ ಫಾಲ್ಕೆ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್ ಕಾರ್ಯಕ್ರಮ ಇದೇ ತಿಂಗಳ 20ರಂದು ಮುಂಬೈನ ತಾಜ್ ಲ್ಯಾಂಡ್ಸ್ ಎಂಡ್ ಹೊಟೇಲ್‌ನಲ್ಲಿ ನಡೆಯಲಿದೆ. ಇದರಲ್ಲಿ ರಿಷಬ್ ಶೆಟ್ಟಿ ಅವರಿಗೆ ‘ಮೋಸ್ಟ್ ಪ್ರಾಮಿಸಿಂಗ್ ಆಕ್ಟರ್’ ಎಂಬ ಪ್ರಶಸ್ತಿ ಲಭಿಸಿದೆ. ಈ ಮೂಲಕ ರಿಷಬ್ ಶೆಟ್ಟಿ ಅತಿಹೆಚ್ಚು ಭರವಸೆ ಮೂಡಿಸಿದ ನಟ ಎಂಬ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.
ಕಾಂತಾರ ಚಿತ್ರದಲ್ಲಿ ರಿಷಬ್ ಶೆಟ್ಟಿ ಅದ್ಭುತ ನಟನೆಗೆ ಈ ಪ್ರಶಸ್ತಿ ಲಭಿಸಿದ್ದು, ರಿಷಬ್ ಶೆಟ್ಟಿ ಶ್ರಮಕ್ಕೆ ಮತ್ತೊಂದು ಮಹಾ ಮನ್ನಣೆ ಸಿಕ್ಕಂತಾಗಿದೆ.ಮೋಸ್ಟ್ ಪ್ರಾಮಿಸಿಂಗ್ ಆಕ್ಟರ್ ಪ್ರಶಸ್ತಿ ರಿಷಬ್ ಶೆಟ್ಟಿ ಪಾಲಾಗಿದ್ದು, ಅತ್ಯುತ್ತಮ ಚಿತ್ರ, ಅತ್ಯುತ್ತಮ ನಟ, ನಟಿ, ಅತ್ಯುತ್ತಮ ಚಿತ್ರಗಳ ಕೆಟಗರಿ ಅಡಿಯಲ್ಲಿ ಯಾರು ಪ್ರಶಸ್ತಿಗಳನ್ನು ಪಡೆದುಕೊಳ್ಳಲಿದ್ದಾರೆ ಎಂಬ ಕುತೂಹಲ ಹೆಚ್ಚಾಗಿದೆ.
ಬಾಂಗ್ಲಾದೇಶ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಬಾಂಗ್ಲಾದೇಶ ಕರಾವಳಿಯಲ್ಲಿ ಪ್ರವೇಶಿಸಿದ್ದು ಇನ್ನು ಒಂದೆರಡು…
ವೈಷ್ಣವಿ ಕೆ ಆರ್ , 5 ನೇ ತರಗತಿ, ಸರಕಾರಿ ಕಿರಿಯ ಪ್ರಾಥಮಿಕ…
Jaanavi.R , 4th Standard, Udaya English school, Rajeshwari Nagara, Bangalore…
ಜಾನುವಾರುಗಳ ಮಾಲೀಕರು ತಮ್ಮ ಜಾನುವಾರುಗಳನ್ನು ಬಿಡಾಡಿಯಾಗಿ ರಸ್ತೆಗಳಲ್ಲಿ ಬಿಡುತ್ತಿರುವುದರಿಂದ ರಸ್ತೆ ಸಂಚಾರಕ್ಕೆ ತೊಂದರೆಯಾಗುತ್ತಿದೆ…
ರಾಜ್ಯದಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜಕ್ಕೆ ಯಾವುದೇ ಕೊರತೆ ಇಲ್ಲ. ರೈತರು ಆತಂಕ…
ಮಳೆಗಾಲದ ಹಿನ್ನೆಲೆಯಲ್ಲಿ ನಗರದಲ್ಲಿ ಕೊಳಚೆ ನೀರು ಸಂಗ್ರಹವಾದರೆ ಡೆಂಗ್ಯು ಜ್ವರ ಹರಡುವ ಸಾಧ್ಯತೆ…