ಮಳೆಗಾಲ ಆರಂಭವಾಗುತ್ತಿದ್ದಂತೆ ಸಾಂಕ್ರಮಿಕ ರೋಗಗಳು ಆರಂಭವಾಗುತ್ತವೆ. ಇದೀಗ ರಾಜ್ಯದಲ್ಲಿ ಆತಂಕ ಸೃಷ್ಟಿಸಿರುವ ʻಮದ್ರಾಸ್ ಐʼ#Madras Eye ವೈರಾಣುವಿನಿಂದ ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ#Health Department ಮಾರ್ಗಸೂಚಿ ಹೊರಡಿಸಿದೆ.
ಮದ್ರಾಸ್ ಐ ರೋಗ ಲಕ್ಷಣಗಳು:
* ಕಣ್ಣು ಕೆಂಪಾಗುವುದು, ನೀರು ಸೋರುವಿಕೆ
* ಅತಿಯಾದ ಕಣ್ಣೀರು
* ಕಣ್ಣಿನಲ್ಲಿ ತುರಿಕೆ
* ಸತತ ಕಣ್ಣು ನೋವು ಮತ್ತು ಚುಚ್ಚುವಿಕೆ
* ಬೆಳಕನ್ನು ನೋಡಲು ಸಾಧ್ಯವಾಗದೇ ಇರುವುದು
* ದೃಷ್ಟಿ ಮಂಜಾಗುವುದು
* ಕಣ್ಣಿನ ಎರಡು ರೆಪ್ಪೆಗಳು ಕೀವು ಮಿಶ್ರಿತದಿಂದ ಕೂಡಿರುವುದು
ಮದ್ರಾಸ್ ಐ ಬಗ್ಗೆ ಮುಂಜಾಗ್ರತಾ ಕ್ರಮ ಏನು ?
* ವೈಯಕ್ತಿಕವಾಗಿ ಸ್ವಚ್ಛತೆಗೆ ಆದ್ಯತೆ ಕೊಡಿ
* ಆರೋಗ್ಯವಂತ ವ್ಯಕ್ತಿಯು ಸೊಂಕು ಇರುವ ವ್ಯಕ್ತಿಯ ಕಣ್ಣಿನ ನೇರ ಸಂಪರ್ಕದಿಂದ ದೂರ ಇರುವುದು
* ಸೋಂಕಿತ ವ್ಯಕ್ತಿ ಬಳಸಿದ ಕರವಸ್ತ್ರ ಮತ್ತು ಇತರ ವಸ್ತುಗಳನ್ನ ಬಳಸಬಾರದು
* ಆಗಾಗ್ಗೆ ಸೋಪು ನೀರಿನಿಂದ ಕೈಗಳನ್ನ ತೊಳೆಯಬೇಕು
* ಸೋಂಕಿತ ವ್ಯಕ್ತಿಗಳಿಗೆ ಶೀತ, ಜ್ವರ, ಕೆಮ್ಮು ಇದ್ದಲ್ಲಿ ಕೂಡಲೇ ಚಿಕಿತ್ಸೆ ಪಡೆಯಬೇಕು
* ತೀವ್ರ ಸೋಂಕು ಉಂಟಾದರೆ ತಕ್ಷಣವೇ ನೇತ್ರ ತಜ್ಞರನ್ನ ಭೇಟಿ ಮಾಡಬೇಕು
ಏನು ಮಾಡಬೇಕು ?
*ಸ್ಪಚ್ಫವಾದ ನೀರಿನಿಂದ ಕಣ್ಣುಗಳನ್ನ ಶುಚಿಗೊಳಿಸಿ
*ಸೋಂಕು ಕಂಡು ಬಂದ ತಕ್ಷಣವೇ ವೈದ್ಯರಿಂದ ಚಿಕಿತ್ಸೆ ಪಡೆಯಿರಿ
*ಸೋಂಕಿತ ವ್ಯಕ್ತಿಗಳಿಗೆ ಪೌಷ್ಟಿಕ ಆಹಾರ ಕೊಡಬೇಕು
*ಸೋಂಕಿತ ವ್ಯಕ್ತಿಗಳು ಬಳಸಿದ ಕರವಸ್ತ್ರ, ಇತರ ವಸ್ತುಗಳನ್ನ ಸಂಸ್ಕರಿಸಿ ಬಳಸಿರಿ
ಏನು ಮಾಡಬಾರದು ?
* ಕೈಗಳಿಂದ ಪದೇ ಪದೇ ಕಣ್ಣುಗಳನ್ನ ಮುಟ್ಟಬೇಡಿ
* ಸ್ವಯಂ ಚಿಕಿತ್ಸಾ ವಿಧಾನಗಳನ್ನ ಮಾಡಬಾರದು
* ಸೋಂಕಿತ ವ್ಯಕ್ತಿಯ ಸನಿಹದಿಂದ ದೂರವಿರಿ
* ಸೋಂಕಿತ ವ್ಯಕ್ತಿಗಳು ಬಳಸಿದ ವಸ್ತುಗಳನ್ನ ಮುಟ್ಟಬೇಡಿ
– ಅಂತರ್ಜಾಲ ಮಾಹಿತಿ