#madraseye| ಹೆಚ್ಚುತ್ತಿದೆ ʻಮದ್ರಾಸ್ ಐʼ ಪ್ರಕರಣಗಳು | ಮುನ್ನೆಚ್ಚರಿಕೆಗಾಗಿ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ

July 30, 2023
2:56 PM
ಕಂಜಕ್ಟಿವೈಟಿಸ್#Conjunctivitis ಎಂದು ಕರೆಯಲಾಗುವ ಮದ್ರಾಸ್ ಐ ಅಥವಾ `ಕಣ್ಣು’ ವೈರಾಣುಗಳಿಂದ ಹರಡುವ ಕಣ್ಣಿನ ಸಮಸ್ಯೆ. ವಾತಾವರಣದಲ್ಲಿ ತೇವಾಂಶ ಹೆಚ್ಚಾದಾಗ ಅಥವಾ ಚಳಿ ವಾತಾವರಣದಲ್ಲಿ ಹುಟ್ಟಿಕೊಳ್ಳುವ ವೈರಾಣುಗಳು ನೇರವಾಗಿ ಕಣ್ಣಿನ ಮೇಲೆ ಪರಿಣಾಮ ಉಂಟುಮಾಡುತ್ತದೆ.

 ಮಳೆಗಾಲ ಆರಂಭವಾಗುತ್ತಿದ್ದಂತೆ ಸಾಂಕ್ರಮಿಕ ರೋಗಗಳು ಆರಂಭವಾಗುತ್ತವೆ. ಇದೀಗ ರಾಜ್ಯದಲ್ಲಿ ಆತಂಕ ಸೃಷ್ಟಿಸಿರುವ ʻಮದ್ರಾಸ್‌ ಐʼ#Madras Eye ವೈರಾಣುವಿನಿಂದ ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ#Health Department ಮಾರ್ಗಸೂಚಿ ಹೊರಡಿಸಿದೆ.

Advertisement
Advertisement
ಕಂಜಕ್ಟಿವೈಟಿಸ್#Conjunctivitis ಎಂದು ಕರೆಯಲಾಗುವ ಮದ್ರಾಸ್ ಐ ಅಥವಾ `ಕಣ್ಣು’ ವೈರಾಣುಗಳಿಂದ ಹರಡುವ ಕಣ್ಣಿನ ಸಮಸ್ಯೆ. ವಾತಾವರಣದಲ್ಲಿ ತೇವಾಂಶ ಹೆಚ್ಚಾದಾಗ ಅಥವಾ ಚಳಿ ವಾತಾವರಣದಲ್ಲಿ ಹುಟ್ಟಿಕೊಳ್ಳುವ ವೈರಾಣುಗಳು ನೇರವಾಗಿ ಕಣ್ಣಿನ ಮೇಲೆ ಪರಿಣಾಮ ಉಂಟುಮಾಡುತ್ತದೆ. ಈ ಬಾರಿ ರಾಜ್ಯದಲ್ಲಿ ಮಳೆಗಾಲಕ್ಕೂ ಮುನ್ನವೇ ʻಮದ್ರಾಸ್‌ ಐʼ ಪ್ರಕರಣ ಕಾಲಿಟ್ಟಿತ್ತು. ಈ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಂತೆ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ.

ಮದ್ರಾಸ್‌ ಐ ರೋಗ ಲಕ್ಷಣಗಳು:

Advertisement

* ಕಣ್ಣು ಕೆಂಪಾಗುವುದು, ನೀರು ಸೋರುವಿಕೆ
* ಅತಿಯಾದ ಕಣ್ಣೀರು
* ಕಣ್ಣಿನಲ್ಲಿ ತುರಿಕೆ
* ಸತತ ಕಣ್ಣು ನೋವು ಮತ್ತು ಚುಚ್ಚುವಿಕೆ
* ಬೆಳಕನ್ನು ನೋಡಲು ಸಾಧ್ಯವಾಗದೇ ಇರುವುದು
* ದೃಷ್ಟಿ ಮಂಜಾಗುವುದು
* ಕಣ್ಣಿನ ಎರಡು ರೆಪ್ಪೆಗಳು ಕೀವು ಮಿಶ್ರಿತದಿಂದ ಕೂಡಿರುವುದು

ಮದ್ರಾಸ್‌ ಐ ಬಗ್ಗೆ ಮುಂಜಾಗ್ರತಾ ಕ್ರಮ ಏನು ?

Advertisement

* ವೈಯಕ್ತಿಕವಾಗಿ ಸ್ವಚ್ಛತೆಗೆ ಆದ್ಯತೆ ಕೊಡಿ
* ಆರೋಗ್ಯವಂತ ವ್ಯಕ್ತಿಯು ಸೊಂಕು ಇರುವ ವ್ಯಕ್ತಿಯ ಕಣ್ಣಿನ ನೇರ ಸಂಪರ್ಕದಿಂದ ದೂರ ಇರುವುದು
* ಸೋಂಕಿತ ವ್ಯಕ್ತಿ ಬಳಸಿದ ಕರವಸ್ತ್ರ ಮತ್ತು ಇತರ ವಸ್ತುಗಳನ್ನ‌ ಬಳಸಬಾರದು
* ಆಗಾಗ್ಗೆ ಸೋಪು ನೀರಿನಿಂದ ಕೈಗಳನ್ನ ತೊಳೆಯಬೇಕು
* ಸೋಂಕಿತ ವ್ಯಕ್ತಿಗಳಿಗೆ ಶೀತ, ಜ್ವರ, ಕೆಮ್ಮು ಇದ್ದಲ್ಲಿ ಕೂಡಲೇ ಚಿಕಿತ್ಸೆ ಪಡೆಯಬೇಕು
* ತೀವ್ರ ಸೋಂಕು ಉಂಟಾದರೆ ತಕ್ಷಣವೇ ನೇತ್ರ ತಜ್ಞರನ್ನ ಭೇಟಿ ಮಾಡಬೇಕು

ಏನು ಮಾಡಬೇಕು ?

Advertisement

*ಸ್ಪಚ್ಫವಾದ ನೀರಿನಿಂದ ಕಣ್ಣುಗಳನ್ನ ಶುಚಿಗೊಳಿಸಿ

 *ಸೋಂಕು ಕಂಡು ಬಂದ ತಕ್ಷಣವೇ ವೈದ್ಯರಿಂದ ಚಿಕಿತ್ಸೆ ಪಡೆಯಿರಿ

Advertisement

*ಸೋಂಕಿತ ವ್ಯಕ್ತಿಗಳಿಗೆ ಪೌಷ್ಟಿಕ ಆಹಾರ ಕೊಡಬೇಕು

*ಸೋಂಕಿತ ವ್ಯಕ್ತಿಗಳು ಬಳಸಿದ ಕರವಸ್ತ್ರ, ಇತರ ವಸ್ತುಗಳನ್ನ ಸಂಸ್ಕರಿಸಿ ಬಳಸಿರಿ

Advertisement

ಏನು ಮಾಡಬಾರದು ?

* ಕೈಗಳಿಂದ ಪದೇ ಪದೇ ಕಣ್ಣುಗಳನ್ನ ಮುಟ್ಟಬೇಡಿ
* ಸ್ವಯಂ ಚಿಕಿತ್ಸಾ ವಿಧಾನಗಳನ್ನ ಮಾಡಬಾರದು
* ಸೋಂಕಿತ ವ್ಯಕ್ತಿಯ ಸನಿಹದಿಂದ ದೂರವಿರಿ
* ಸೋಂಕಿತ ವ್ಯಕ್ತಿಗಳು ಬಳಸಿದ ವಸ್ತುಗಳನ್ನ ಮುಟ್ಟಬೇಡಿ

Advertisement

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

 ಕಸ್ತೂರಿ ರಂಗನ್ ವರದಿ ಬಗ್ಗೆ ಕೋರ್ಟ್‌ಗೆ ಮನವರಿಕೆ | ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ |
October 8, 2024
11:03 PM
by: ದ ರೂರಲ್ ಮಿರರ್.ಕಾಂ
ತಂಬಾಕು ನಿಯಂತ್ರಿಸಲು ಕ್ರಮ | ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 6 ತಿಂಗಳಲ್ಲಿ 265 ಮಂದಿ ತಂಬಾಕಿನಿಂದ ದೂರ |
October 8, 2024
8:25 PM
by: ದ ರೂರಲ್ ಮಿರರ್.ಕಾಂ
 ರಾಸುಗಳಿಗೆ ತಪ್ಪದೇ ಜೀವ ವಿಮೆ ಮಾಡಿಸಿ
October 8, 2024
8:16 PM
by: ದ ರೂರಲ್ ಮಿರರ್.ಕಾಂ
153 ಎಕರೆ ವಿಸ್ತೀರ್ಣದಲ್ಲಿ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ | 70ನೇ  ವನ್ಯಜೀವಿ ಸಪ್ತಾಹ ಸಮಾರೋಪದಲ್ಲಿ ಅರಣ್ಯ ಸಚಿವ  ಈಶ್ವರ್ ಖಂಡ್ರೆ
October 7, 2024
10:22 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror