ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

February 24, 2025
10:54 PM
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ ಪರಿಣಾಮ ಬೀರಲಿದೆ. ತಾಪಮಾನ ಹೆಚ್ಚಳವು ಕೃಷಿ ಉತ್ಪಾದನೆ ಮತ್ತು ಆದಾಯದ ಮೇಲೆ ಪರಿಣಾಮ ಬೀರುತ್ತದೆ, ಇದರಿಂದ ಬ್ಯಾಂಕುಗಳಿಗೆ ಅಪಾಯಗಳನ್ನು ಉಂಟುಮಾಡುತ್ತದೆ ಎಂದು ಬಿಸಿಜಿ ವರದಿ ಹೇಳಿದೆ. (PTI)

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಕ್ಷೇತ್ರದ ಮೇಲೆ ಗಂಭೀರವಾದ ಪರಿಣಾಮವನ್ನು ಬೀರಲಿದೆ. ಇದು ಆರ್ಥಿಕತೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದ್ದು ಕೃಷಿ ಸಾಲದ ಮೇಲೆ 2030 ರ ವೇಳೆ ಶೇ.30 ರಷ್ಟು ಪರಿಣಾಮ ಬೀರಬಹುದು ಎಂದು ಬಿಸಿಜಿ  ವರದಿ ಹೇಳಿದೆ.ಸಾಲ ಮರುಪಾವತಿಯಲ್ಲಿ ವ್ಯತ್ಯಾಸ ಸಾಧ್ಯತೆಯ ಬಗ್ಗೆ ಉಲ್ಲೇಖಿಸಿದೆ.………ಮುಂದೆ ಓದಿ……..

2030 ರ ವೇಳೆಗೆ, ಈಗಿನ ಅಂದಾಜಿನ ಪ್ರಕಾರ, ಭಾರತದ 42 ಶೇಕಡಾ ಜಿಲ್ಲೆಗಳು 2 ಡಿಗ್ರಿ ಸೆಲ್ಸಿಯಸ್‌ವರೆಗೆ ತಾಪಮಾನ ಏರಿಕೆಯನ್ನು ಅನುಭವಿಸುವ ನಿರೀಕ್ಷೆಯಿದೆ. ಹಾಗಾಗಿ, ಮುಂದಿನ ಐದು ವರ್ಷಗಳಲ್ಲಿ 321 ಜಿಲ್ಲೆಗಳು ತಾಪಮಾನ ಏರಿಕೆಯಿಂದ ಸಂಕಷ್ಟ ಒಳಗಾಗಬಹುದು.ಇದು ನೇರವಾಗಿ ಕೃಷಿಯ ಮೇಲೆ ಪರಿಣಾಮ ಬೀರುತ್ತದೆ. ಕೃಷಿಯ ಮೇಲೆ ಪರಿಣಾಮ ಬೀರುವುದರಿಂದ ಆರ್ಥಕತೆಯ ಮೇಲೂ ಹೊಡೆತ ಬೀಳಬಹುದು. ವಾಣಿಜ್ಯ ಬ್ಯಾಂಕುಗಳ ಅರ್ಧದಷ್ಟು ಸಾಲವು  ಪ್ರಕೃತಿ ಮತ್ತು ಪರಿಸರ ವ್ಯವಸ್ಥೆಯ ಮೇಲೆ ಅವಲಂಬಿತವಾಗಿದೆ. ಆದ್ದರಿಂದ ಯಾವುದೇ ನೈಸರ್ಗಿಕ ವಿಕೋಪವು ಪರಿಣಾಮ ಬೀರುತ್ತದೆ.  ಹೀಗಾಗಿ ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ 30% ಕೃಷಿ ಮತ್ತು ವಸತಿ ಸಾಲಗಳಲ್ಲಿ ಮರುಪಾವತಿಯ ಮೇಲೆ ಒತ್ತಡವನ್ನು ಹೆಚ್ಚಿಸಬಹುದು ಎಂದು ಬಿಸಿಜಿ ವರದಿ ಹೇಳಿದೆ.

ವರದಿಯ ಪ್ರಕಾರ, ಸರಾಸರಿ ಜಾಗತಿಕ ತಾಪಮಾನವು ಈಗಾಗಲೇ ಸರಿಸುಮಾರು 1.2 ಡಿಗ್ರಿ ಸೆಲ್ಸಿಯಸ್  ಏರಿಕೆಯಾಗಿದೆ. ಹಿಂದಿನ ಹವಾಮಾನಗಳಿಗೆ ಹೋಲಿಸಿದರೆ ಕರಾವಳಿ ಪ್ರದೇಶಗಳಲ್ಲಿ ಈಗ ಪ್ರವಾಹ ಹೆಚ್ಚಾಗಿದ್ದು , ಕೃಷಿ ಉತ್ಪಾದನೆಯಲ್ಲಿ ಇಳಿಕೆಗೆ ಕಾರಣವಾಗುತ್ತಿದೆ. ಇದರ ಪರಿಣಾಮವಾಗಿ, ಏರುತ್ತಿರುವ ಹವಾಮಾನ ಕಾರಣದಿಂದ ಜನರ ತಲಾ ಆದಾಯದಲ್ಲಿ ಕುಸಿತ ಕಂಡುಬಂದಿದೆ ಎಂದು ಬಿಸಿಜಿ ವರದಿ ಹೇಳಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ
September 20, 2026
3:13 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ
September 20, 2026
10:43 AM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ
September 19, 2026
12:06 PM
by: ದ ರೂರಲ್ ಮಿರರ್.ಕಾಂ
ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು
September 19, 2026
11:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror