#HeavyRain | ಏರಿದ ಯಮುನಾ ನದಿ ನೀರಿನ ಮಟ್ಟ | ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮನೆವರೆಗೂ ಬಂತು ನೆರೆ

July 13, 2023
11:23 AM
ಯಮುನಾ ನದಿ ನೀರಿನ ಗರಿಷ್ಠ ಮಟ್ಟ 207.49 ಮೀಟರ್ ಏರಿದ್ದು. ಅಪಾಯಕಾರಿ ಮಟ್ಟ ತಲುಪಿದೆ. ಹೀಗಾಗಿ ದೆಹಲಿಯಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ.

ಉತ್ತರ ಭಾರತದಲ್ಲಿ ವರುಣನ ಆರ್ಭಟ ಇನ್ನು ನಿಂತಿಲ್ಲ. ದೆಹಲಿ, ಹಿಮಾಚಲ ಪ್ರದೇಶ, ಪ್ರಯಾಗ, ಜಾರ್ಖಂಡ್ ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿದೆ. ದೆಹಲಿಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಯಮುನಾ ನದಿ #YamunaRiver ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗಿದೆ, ಇದರ ಪರಿಣಾಮ ಸಿಎಂ ಅರವಿಂದ್ ಕೇಜ್ರಿವಾಲ್ #ArvindKejriwal ಅವರ ಮನೆಯವರೆಗೂ ನೀರು ಬಂದಿದೆ.

ಸಾಕಷ್ಟು ರಸ್ತೆಗಳು, ಮನೆಗಳು ಜಲಾವೃತವಾಗಿವೆ. ಹರಿಯಾಣದ ಹತ್ನಿಕುಂಡ್ ಬ್ಯಾರೇಜ್ ನದಿಗೆ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 7 ಗಂಟೆಗೆ ಯಮುನಾ ನದಿಯಲ್ಲಿ ನೀರಿನ ಮಟ್ಟ 208.46 ಮೀಟರ್ ಆಗಿತ್ತು. ಪ್ರಸ್ತುತ ನೀರಿನ ಮಟ್ಟ ಅಪಾಯದ ಮಟ್ಟಕ್ಕಿಂತ ಮೂರು ಮೀಟರ್‌ಗಳಷ್ಟು ಹೆಚ್ಚಿದೆ. ಅರವಿಂದ್ ಕೇಜ್ರಿವಾಲ್ ಸರ್ಕಾರ ಮಧ್ಯ ಪ್ರವೇಶಿಸಿ ಬ್ಯಾರೇಜ್‌ನಿಂದ ನೀರು ಬಿಡುವುದನ್ನು ನಿಲ್ಲಿಸುವಂತೆ ಕೇಂದ್ರವನ್ನು ಒತ್ತಾಯಿಸಿತ್ತು, ಆದರೆ ಕೇಂದ್ರವು ಬ್ಯಾರೇಜ್‌ನಿಂದ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಬೇಕಾಗಿದೆ ಎಂದು ಉತ್ತರಿಸಿದೆ. ಸಿವಿಲ್ ಲೈನ್ಸ್ ಪ್ರದೇಶದ ರಿಂಗ್ ರೋಡ್ ಜಲಾವೃತಗೊಂಡಿದೆ ಮತ್ತು ಮಜ್ನು ಕಾ ತಿಲಾವನ್ನು ಕಾಶ್ಮೀರಿ ಗೇಟ್ ಐಎಸ್‌ಬಿಟಿಗೆ ಸಂಪರ್ಕಿಸುವ ಮಾರ್ಗವನ್ನು ಮುಚ್ಚಲಾಗಿದೆ. ಈ ಸ್ಥಳವು ಮುಖ್ಯಮಂತ್ರಿ ಕೇಜ್ರಿವಾಲ್ ನಿವಾಸ 500 ಮೀಟರ್​ನಷ್ಟು ದೂರದಲ್ಲಿದೆ.

ಸದ್ಯ ದೆಹಲಿಯಲ್ಲಿ ಪ್ರವಾಹ ಪರಿಸ್ಥಿತಿ ಇಲ್ಲ ಎಂದು ಹೇಳಿರುವ ಸಿಎಂ ಕೇಜ್ರಿವಾಲ್, ಒಂದು ವೇಳೆ ಅಂತಹ ಸ್ಥಿತಿ ಎದುರಾದರೆ ಸನ್ನದ್ಧರಾಗಿದ್ದೇವೆ. ನೀರಿನ ಮಟ್ಟ 206 ಮೀಟರ್‌ಗೆ ಏರಿಕೆಯಾದರೆ, ಜನರನ್ನು ಸ್ಥಳಾಂತರಿಸುವ ಕಾರ್ಯ ಶುರು ಮಾಡುತ್ತೇವೆ, ನದಿ ತೀರದಲ್ಲಿ ವಾಸಿಸುವ 41 ಸಾವಿರ ಜನರನ್ನು ಗುರುತಿಸಲಾಗಿದ್ದು, ಅವರಿಗಾಗಿ ಪರಿಹಾರ ಶಿಬಿರಗಳನ್ನು ತೆರೆಯಲಾಗಿದೆ. ಅಂತೆಯೇ ಸಿಡಬ್ಲ್ಯುಸಿ ಜೊತೆ ನಿರಂತರ ಸಂಪರ್ಕದಲ್ಲಿರುವುದಾಗಿ ಹೇಳಿದ್ದಾರೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸರ್ಕಾರಿ ವೈದ್ಯರು ಆಸ್ಪತ್ರೆಗಳಲ್ಲಿ ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಇರಬೇಕು- ಸಚಿವ ಶರಣಪ್ರಕಾಶ್ ಪಾಟೀಲ್
March 12, 2025
7:19 AM
by: The Rural Mirror ಸುದ್ದಿಜಾಲ
 ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧ
March 12, 2025
7:13 AM
by: The Rural Mirror ಸುದ್ದಿಜಾಲ
ಕೆಂಪು ಮೆಣಸಿನಕಾಯಿ ಬೆಳೆಗಾರರಿಗೆ ಸಂಕಷ್ಟ | ಬೆಂಬಲ ಬೆಲೆ ಯೋಜನೆ ರಾಜ್ಯಕ್ಕೂ ವಿಸ್ತರಿಸುವಂತೆ ಮುಖ್ಯಮಂತ್ರಿ ಪತ್ರ | ಕೇಂದ್ರದ ಗಮನ ಸೆಳೆದ ಸಚಿವರು |
March 12, 2025
7:10 AM
by: The Rural Mirror ಸುದ್ದಿಜಾಲ
ಅಕ್ರಮ ಮರಳು ಗಣಿಗಾರಿಕೆ | 5 ವರ್ಷಗಳಲ್ಲಿ 47 ಕೋಟಿ ರೂಪಾಯಿ ದಂಡ ಸಂಗ್ರಹ
March 12, 2025
6:58 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror