ಉತ್ತರ ಭಾರತದಲ್ಲಿ ವರುಣನ ಆರ್ಭಟ ಇನ್ನು ನಿಂತಿಲ್ಲ. ದೆಹಲಿ, ಹಿಮಾಚಲ ಪ್ರದೇಶ, ಪ್ರಯಾಗ, ಜಾರ್ಖಂಡ್ ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿದೆ. ದೆಹಲಿಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಯಮುನಾ ನದಿ #YamunaRiver ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗಿದೆ, ಇದರ ಪರಿಣಾಮ ಸಿಎಂ ಅರವಿಂದ್ ಕೇಜ್ರಿವಾಲ್ #ArvindKejriwal ಅವರ ಮನೆಯವರೆಗೂ ನೀರು ಬಂದಿದೆ.
ಸಾಕಷ್ಟು ರಸ್ತೆಗಳು, ಮನೆಗಳು ಜಲಾವೃತವಾಗಿವೆ. ಹರಿಯಾಣದ ಹತ್ನಿಕುಂಡ್ ಬ್ಯಾರೇಜ್ ನದಿಗೆ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 7 ಗಂಟೆಗೆ ಯಮುನಾ ನದಿಯಲ್ಲಿ ನೀರಿನ ಮಟ್ಟ 208.46 ಮೀಟರ್ ಆಗಿತ್ತು. ಪ್ರಸ್ತುತ ನೀರಿನ ಮಟ್ಟ ಅಪಾಯದ ಮಟ್ಟಕ್ಕಿಂತ ಮೂರು ಮೀಟರ್‌ಗಳಷ್ಟು ಹೆಚ್ಚಿದೆ. ಅರವಿಂದ್ ಕೇಜ್ರಿವಾಲ್ ಸರ್ಕಾರ ಮಧ್ಯ ಪ್ರವೇಶಿಸಿ ಬ್ಯಾರೇಜ್‌ನಿಂದ ನೀರು ಬಿಡುವುದನ್ನು ನಿಲ್ಲಿಸುವಂತೆ ಕೇಂದ್ರವನ್ನು ಒತ್ತಾಯಿಸಿತ್ತು, ಆದರೆ ಕೇಂದ್ರವು ಬ್ಯಾರೇಜ್‌ನಿಂದ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಬೇಕಾಗಿದೆ ಎಂದು ಉತ್ತರಿಸಿದೆ. ಸಿವಿಲ್ ಲೈನ್ಸ್ ಪ್ರದೇಶದ ರಿಂಗ್ ರೋಡ್ ಜಲಾವೃತಗೊಂಡಿದೆ ಮತ್ತು ಮಜ್ನು ಕಾ ತಿಲಾವನ್ನು ಕಾಶ್ಮೀರಿ ಗೇಟ್ ಐಎಸ್‌ಬಿಟಿಗೆ ಸಂಪರ್ಕಿಸುವ ಮಾರ್ಗವನ್ನು ಮುಚ್ಚಲಾಗಿದೆ. ಈ ಸ್ಥಳವು ಮುಖ್ಯಮಂತ್ರಿ ಕೇಜ್ರಿವಾಲ್ ನಿವಾಸ 500 ಮೀಟರ್ನಷ್ಟು ದೂರದಲ್ಲಿದೆ.
ಸದ್ಯ ದೆಹಲಿಯಲ್ಲಿ ಪ್ರವಾಹ ಪರಿಸ್ಥಿತಿ ಇಲ್ಲ ಎಂದು ಹೇಳಿರುವ ಸಿಎಂ ಕೇಜ್ರಿವಾಲ್, ಒಂದು ವೇಳೆ ಅಂತಹ ಸ್ಥಿತಿ ಎದುರಾದರೆ ಸನ್ನದ್ಧರಾಗಿದ್ದೇವೆ. ನೀರಿನ ಮಟ್ಟ 206 ಮೀಟರ್‌ಗೆ ಏರಿಕೆಯಾದರೆ, ಜನರನ್ನು ಸ್ಥಳಾಂತರಿಸುವ ಕಾರ್ಯ ಶುರು ಮಾಡುತ್ತೇವೆ, ನದಿ ತೀರದಲ್ಲಿ ವಾಸಿಸುವ 41 ಸಾವಿರ ಜನರನ್ನು ಗುರುತಿಸಲಾಗಿದ್ದು, ಅವರಿಗಾಗಿ ಪರಿಹಾರ ಶಿಬಿರಗಳನ್ನು ತೆರೆಯಲಾಗಿದೆ. ಅಂತೆಯೇ ಸಿಡಬ್ಲ್ಯುಸಿ ಜೊತೆ ನಿರಂತರ ಸಂಪರ್ಕದಲ್ಲಿರುವುದಾಗಿ ಹೇಳಿದ್ದಾರೆ.
ಒಂದು ಹೋರಾಟದಿಂದ ರಾಜಕೀಯ ಪಕ್ಷವಾಗಿ ವೇಗವಾಗಿ ಬೆಳೆದಿರುವ ಆಮ್ ಆದ್ಮಿಪಕ್ಷ ಕೇವಲ 13…
ದುಬೈಯಿಂದ ಒಣಖರ್ಜೂರ ಹೆಸರಿನಲ್ಲಿ ಅಡಿಕೆ ಕಳ್ಳಸಾಗಾಣಿಕೆಯ ಮತ್ತೊಂದು ಪ್ರಕರಣವನ್ನು ಡಿಆರ್‌ಐ ಪತ್ತೆ ಮಾಡಿದೆ.26.32…
ಹಸಿರು ನ್ಯಾಯಾಧೀಕರಣ ಆದೇಶ ಹಾಗೂ ಜಿಲ್ಲಾಧಿಕಾರಿ ಸೂಚನೆಯಂತೆ ಮುಳಬಾಗಿಲು ತಾಲೂಕಿನ ಎಲ್ಲಾ ಕೆರೆಗಳ…
ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳನ್ನು…
ಭವಿಷ್ಯದಲ್ಲಿ ದೇಶದ 6 ಲಕ್ಷ ಗ್ರಾಮಗಳಿಗೆ ತಲಾ 10 ಡ್ರೋಣ್ ಗಳನ್ನು ವಿತರಿಸುವ…
ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ, 30…