ಬೇಬಿ ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆಯಿಂದ ಕೆಆರ್‌ಎಸ್ ಡ್ಯಾಂಗೆ ಅಪಾಯ | ಟ್ರಯಲ್ ಬ್ಲಾಸ್ಟ್‌ಗೆ ಸಿದ್ಧತೆ | ರೈತರಿಂದ ಆಕ್ರೋಶ

July 3, 2024
10:42 AM

ಮಂಡ್ಯದ ಬೇಬಿ ಬೆಟ್ಟದಲ್ಲಿ ಸದ್ದಿಲ್ಲದೇ ಟ್ರಯಲ್ ಬ್ಲಾಸ್ಟ್‌ಗೆ ಸಿದ್ಧತೆ ನಡೆಸಿದೆ. ಪ್ರಾಯೋಗಿಕ ಪರೀಕ್ಷೆಗೆ ಮುಂದಿನ ವಾರವೇ ವಿಜ್ಞಾನಿಗಳನ್ನು ಕರೆಸಲು ಮುಂದಾಗಿದೆ ಎಂಬ ಮಾಹಿತಿ ರೈತರನ್ನು ಕೆರಳಿಸಿದೆ. ರೈತರು ಗರಂ ಆಗಿದ್ದು, ಪ್ರತಿಭಟನೆ ನಡೆಸಿದ್ದಾರೆ. ಶಾಸಕ ದರ್ಶನ್ ಪುಟ್ಟಣ್ಣಯ್ಯ, ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಸೇರಿದಂತೆ ಹಲವು ರೈತ ಮುಖಂಡರು, ಕಾರ್ಯಕರ್ತರು ಕೆಆರ್‌ಎಸ್‌ (KRS) ಬಳಿ ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ ರೈತರು ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಜಿಲ್ಲೆಯ ಶಾಸಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. `ಟ್ರಯಲ್ ಬ್ಲಾಸ್ಟ್ ಬೇಡ ಬೇಡ’ ಎಂದು ಘೋಷಣೆ ಕೂಗಿದ್ದಾರೆ.

ಬಳಿಕ ಮಾತನಾಡಿದ ಪ್ರತಿಭಟನಾನಿರತ ರೈತರು, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂ ಬಳಿಯ ಬೇಬಿ ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆಯಿಂದ ಕೆಆರ್‌ಎಸ್ ಡ್ಯಾಂಗೆ ಅಪಾಯ ಇದೆ. ಡ್ಯಾಂ ಸುರಕ್ಷತೆ ದೃಷ್ಟಿಯಿಂದ ಸದ್ಯ ಗಣಿಗಾರಿಕೆ ನಿಷೇಧಿಸಲಾಗಿದೆ. ಈಗ ಮತ್ತೆ ಸರ್ಕಾರವೇ ಗಣಿಗಾರಿಕೆಗೆ ಅನುಮತಿ ನೀಡಲು ಮುಂದಾಗಿದೆ. ಅದಕ್ಕಾಗಿ ಟ್ರಯಲ್ ಬ್ಲಾಸ್ಟ್ ನಡೆಸಲು ಸಿದ್ಧತೆ ಮಾಡಿಕೊಂಡಿದೆ. ಟ್ರಯಲ್ ಬ್ಲಾಸ್ಟ್ ಮಾಡಿ ಡ್ಯಾಂಗೆ ಯಾವುದೇ ಅಪಾಯವಿಲ್ಲ ಅಂತ ವರದಿ ತರಿಸಿಕೊಳ್ಳಲು ಹುನ್ನಾರ ನಡೆಸಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಕೆಆರ್‌ಎಸ್ ಡ್ಯಾಮ್ ಮುಖ್ಯದ್ವಾರ, ನೀರಾವರಿ ನಿಯಮದ ಕಚೇರಿ ಬಳಿ 100ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror