ಮಂಡ್ಯದ ಬೇಬಿ ಬೆಟ್ಟದಲ್ಲಿ ಸದ್ದಿಲ್ಲದೇ ಟ್ರಯಲ್ ಬ್ಲಾಸ್ಟ್‌ಗೆ ಸಿದ್ಧತೆ ನಡೆಸಿದೆ. ಪ್ರಾಯೋಗಿಕ ಪರೀಕ್ಷೆಗೆ ಮುಂದಿನ ವಾರವೇ ವಿಜ್ಞಾನಿಗಳನ್ನು ಕರೆಸಲು ಮುಂದಾಗಿದೆ ಎಂಬ ಮಾಹಿತಿ ರೈತರನ್ನು ಕೆರಳಿಸಿದೆ. ರೈತರು ಗರಂ ಆಗಿದ್ದು, ಪ್ರತಿಭಟನೆ ನಡೆಸಿದ್ದಾರೆ. ಶಾಸಕ ದರ್ಶನ್ ಪುಟ್ಟಣ್ಣಯ್ಯ, ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಸೇರಿದಂತೆ ಹಲವು ರೈತ ಮುಖಂಡರು, ಕಾರ್ಯಕರ್ತರು ಕೆಆರ್‌ಎಸ್ (KRS) ಬಳಿ ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ ರೈತರು ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಜಿಲ್ಲೆಯ ಶಾಸಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. `ಟ್ರಯಲ್ ಬ್ಲಾಸ್ಟ್ ಬೇಡ ಬೇಡ’ ಎಂದು ಘೋಷಣೆ ಕೂಗಿದ್ದಾರೆ.
ಬಳಿಕ ಮಾತನಾಡಿದ ಪ್ರತಿಭಟನಾನಿರತ ರೈತರು, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂ ಬಳಿಯ ಬೇಬಿ ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆಯಿಂದ ಕೆಆರ್‌ಎಸ್ ಡ್ಯಾಂಗೆ ಅಪಾಯ ಇದೆ. ಡ್ಯಾಂ ಸುರಕ್ಷತೆ ದೃಷ್ಟಿಯಿಂದ ಸದ್ಯ ಗಣಿಗಾರಿಕೆ ನಿಷೇಧಿಸಲಾಗಿದೆ. ಈಗ ಮತ್ತೆ ಸರ್ಕಾರವೇ ಗಣಿಗಾರಿಕೆಗೆ ಅನುಮತಿ ನೀಡಲು ಮುಂದಾಗಿದೆ. ಅದಕ್ಕಾಗಿ ಟ್ರಯಲ್ ಬ್ಲಾಸ್ಟ್ ನಡೆಸಲು ಸಿದ್ಧತೆ ಮಾಡಿಕೊಂಡಿದೆ. ಟ್ರಯಲ್ ಬ್ಲಾಸ್ಟ್ ಮಾಡಿ ಡ್ಯಾಂಗೆ ಯಾವುದೇ ಅಪಾಯವಿಲ್ಲ ಅಂತ ವರದಿ ತರಿಸಿಕೊಳ್ಳಲು ಹುನ್ನಾರ ನಡೆಸಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಕೆಆರ್‌ಎಸ್ ಡ್ಯಾಮ್ ಮುಖ್ಯದ್ವಾರ, ನೀರಾವರಿ ನಿಯಮದ ಕಚೇರಿ ಬಳಿ 100ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…