ರಸ್ತೆ ಗುಂಡಿಗಳಿಂದ ಅಪಘಾತವಾದರೆ ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಹೈಕೋರ್ಟ್ ಎಚ್ಚರಿಸಿದೆ. ಬೀದರ್ ಜಿಲ್ಲೆಯ ರಸ್ತೆ ಅವ್ಯವಸ್ಥೆಗೆ ಸಂಬಂಧಿಸಿ ಸಾಮಾಜಿಕ ಕಾರ್ಯಕರ್ತ ಗುರುನಾಥ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತ್ತು.
ಬೀದರ್ ಜಿಲ್ಲೆಯ ಹಲವು ರಸ್ತೆಗಳು ಅವ್ಯವಸ್ಥೆಯಿಂದ ಕೂಡಿತ್ತು. ಹೀಗಿದ್ದರೂ ಇಲಾಖೆಗಳ, ಅಧಿಕಾರಿಗಳ, ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಬೇಸತ್ತು ಸಾಮಾಜಿಕ ಕಾರ್ಯಕರ್ತ ಗುರುನಾಥ ಅವರು 2019 ರಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ, ಸಮಗ್ರ ಮಾಹಿತಿ ಕೇಳಿದ್ದರು, ಇದಕ್ಕೆ ಮಳೆಯಿಂದಾಗಿ ರಸ್ತೆ ದುರಸ್ತಿ ಸಾಧ್ಯವಾಗಿಲ್ಲ ಎಂಬ ಸರಕಾರಿ ವಕೀಲರ ವಾದವನ್ನು ಹಾಗೂ ಸಮಜಾಯಿಷಿಕೆಗೆ ಅಸಮಾಧಾನದ ವ್ಯಕ್ತ ಪಡಿಸಿದ ನ್ಯಾಯಪೀಠವು, 2019 ರಲ್ಲಿ ಈ ಅರ್ಜಿ ಸಲ್ಲಿಸಿದ್ದಾಗಿತ್ತು, ಈಗಲೂ ರಸ್ತೆ ದುರಸ್ತಿಯಾಗದೇ ಇರಲು ಏನು ಕಾರಣ ಎಂದು ಪ್ರಶ್ನಿಸಿ 2021 ರಲ್ಲಿ ಕೂಡಾ 4 ವಾರಗಳ ಕಾಲಾವಕಾಶ ಕೇಳಿ ರಸ್ತೆ ದುರಸ್ತಿ ಮಾಡುವ ಭರವಸೆ ನೀಡಲಾಗಿತ್ತು. ಈಗ ಮತ್ತೆ ಕಾಲಾವಕಾಶ ಹಾಗೂ ಸಮಜಾಯಿಷಿಕೆಗೆ ಏಕೆ ಎಂದು ನ್ಯಾಯಪೀಠವು ಪ್ರಶ್ನಿಸಿತ್ತು. ಇದು ನಿಜಕ್ಕೂ ಬೇಸರದ ಸಂಗತಿ ಎಂದು ನ್ಯಾಯಪೀಠ ಗರಂಗೊಂಡಿತ್ತು.
ಅಧಿಕಾರಿಗಳು ಸರಕಾರದ ಮಾತು ಕೇಳುತ್ತಿಲ್ಲ ಎಂದೆನಿಸುತ್ತದೆ, ಮಳೆಯು ನೆಪ ಮಾತ್ರಾ. ನೆಪಗಳ ಬದಲಾಗಿ ಕೆಲಸ ಆಗಬೇಕಾಗಿದೆ, ರಸ್ತೆ ಇಂದಿನ ಅವಶ್ಯಕತೆಗಳಲ್ಲಿ ಒಂದಾಗಿದೆ. ಹೀಗಾಗಿ ನ್ಯಾಯಾಲಯಕ್ಕೆ ಹೇಗೆ ಕೆಲಸ ಮಾಡಿಸಬೇಕು ಎಂದು ಗೊತ್ತಿದೆ, ಸಂಬಂಧಪಟ್ಟವರ ವೇತನ ತಡೆಹಿಡಿದರೆ ತಿಳಿಯುತ್ತದೆ ಎಂದು ಖಾರವಾಗಿ ಹೇಳಿದ ನ್ಯಾಯಪೀಠ, ಮುಂದೆ ಜಿಲ್ಲೆಯಲ್ಲಿ ರಸ್ತೆ ಅಪಘಾತಗಳು ಸಂಭವಿಸಿದರೆ ಅದಕ್ಕೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು , ಹೀಗಾಗಿ ಜಿಲ್ಲೆಯ ರಸ್ತೆಗಳನ್ನು ಗುಂಡಿಗಳನ್ನು ತಕ್ಷಣವೇ ದುರಸ್ತಿ ಮಾಡದೇ ಇದ್ದರೆ ಕ್ರಮ ಖಚಿತ. ಮುಂದಿನ ವಿಚಾರಣೆ ವೇಳೆ ಕೆಲಸ ಮಾಡದೇ ಇದ್ದರೆ ಲೋಕೋಪಯೋಗಿ ಇಲಾಖೆ ಪ್ರಧಾನ ಕಾರ್ಯದರ್ಶಿ, ಮುಖ್ಯ ಇಂಜಿನಿಯರ್ ಸೇರಿದಂತೆ ಎಲ್ಲಾ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ನಿರ್ದೇಶಿಸಿದ ನ್ಯಾಯಪೀಠ ಜನವರಿ 22 ಕ್ಕೆ ವಿಚಾರಣೆ ಮುಂದೂಡಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…