ಆಮಂತ್ರಣದ ನೆಪದಲ್ಲಿ ಮನೆಗೆ ನುಗ್ಗಿ ದರೋಡೆ | ಚಿನ್ನಾಭರಣ ದೋಚಿದ ಕಳ್ಳರು |

October 27, 2022
12:48 PM

ಮದುವೆ ಆಮಂತ್ರಣ ಪತ್ರ ಕೊಡುವ ನೆಪದಲ್ಲಿ ಮನೆಗೆ ನುಗ್ಗಿದ ಕಳ್ಳರು ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಚಾಂಡ್ರಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಾಂಡ್ರಹಳ್ಳಿ ಗ್ರಾಮದ ನಾರಾಯಣಸ್ವಾಮಿ ಅವರ ಮನೆಯಲ್ಲಿ ಈ ಘಟನೆ ನಡೆದಿದೆ.

ಕಂದಾಯ ಇಲಾಖೆಯಿಂದ  ನಿವೃತ್ತರಾಗಿದ್ದ ನಾರಾಯಣಸ್ವಾಮಿ ಅವರು, ಚಾಂಡ್ರಹಳ್ಳಿ ಗ್ರಾಮದಲ್ಲಿ ವಾಸವಾಗಿದ್ದರು. ಅಪರಿಚಿತ ವ್ಯಕ್ತಿಗಳು ಮದುವೆ ಆಮಂತ್ರಣ ಪತ್ರ ಕೊಡುವ ನೆಪದಲ್ಲಿ ಬಂದು ಮನೆಯಲ್ಲಿದ್ದ ಹಣ, ಚಿನ್ನ, ಬೆಳ್ಳಿ ದೋಚಿ ಪರಾರಿಯಾಗಿದ್ದಾರೆ. ರಾತ್ರಿ ಊಟ ಮಾಡಿ ಮಲಗಿದ್ದ ಸಮಯಕ್ಕೆ ಸುಮಾರು 10 ಗಂಟೆ ವೇಳೆಗೆ ಐದು ಜನರ ಅಪರಿಚಿತರ ಗುಂಪು ಬಾಗಿಲು ತಟ್ಟಿದ್ದರು. ಯಾರು ಎಂದು ಕೇಳಿದಾಗ ಶ್ರೀನಿವಾಸಪುರದಿಂದ ಮದುವೆ ಕಾರ್ಡ್ ಕೊಡಲು ಬಂದಿದ್ದೇವೆ ಎಂದು ಹೇಳಿದ್ದಾರೆ. ನಾರಾಯಣಸ್ವಾಮಿ ಅವರು ಬಾಗಿಲು ತೆರೆದಾಗ  ದುಷ್ಕರ್ಮಿಗಳು ವೃದ್ಧ ದಂಪತಿ ಮೇಲೆ ಮುಗಿಬಿದ್ದು ಮನೆಯ ಸೋಪಾಗೆ ಅವರನ್ನು ಕಟ್ಟಿಹಾಕಿ. ಮನೆಯಲ್ಲಿದ್ದ 150 ಗ್ರಾಂ ಚಿನ್ನ, 250 ಗ್ರಾಂ ಬೆಳ್ಳಿ, ಹನ್ನೊಂದು ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ. ಈ ಬಗ್ಗೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹೊಸರುಚಿ | ಗುಜ್ಜೆ ಶೇಂಗಾ ಪಲ್ಯ
March 15, 2025
7:00 AM
by: ದಿವ್ಯ ಮಹೇಶ್
ಕೇರಳದಲ್ಲಿ ಹೀಟ್‌ ವೇವ್‌ ಎಲರ್ಟ್‌ | 10 ಜಿಲ್ಲೆಗಳಿಗೆ ಎಲ್ಲೋ ಎಲರ್ಟ್‌ |
March 14, 2025
11:36 PM
by: ದ ರೂರಲ್ ಮಿರರ್.ಕಾಂ
ಮೆಣಸಿನಕಾಯಿ ಬೆಲೆ ಕುಸಿತ | ಒಣ ಮೆಣಸಿನಕಾಯಿ ಖರೀದಿಸುವಂತೆ ಬಸವರಾಜ ಬೊಮ್ಮಾಯಿ ಪತ್ರ
March 14, 2025
11:03 PM
by: The Rural Mirror ಸುದ್ದಿಜಾಲ
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆ ಏರಿಕೆ ಮಾಡಲು ಸರ್ಕಾರ ಚಿಂತನೆ
March 14, 2025
10:57 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror