ಮದುವೆ ಆಮಂತ್ರಣ ಪತ್ರ ಕೊಡುವ ನೆಪದಲ್ಲಿ ಮನೆಗೆ ನುಗ್ಗಿದ ಕಳ್ಳರು ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಚಾಂಡ್ರಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಾಂಡ್ರಹಳ್ಳಿ ಗ್ರಾಮದ ನಾರಾಯಣಸ್ವಾಮಿ ಅವರ ಮನೆಯಲ್ಲಿ ಈ ಘಟನೆ ನಡೆದಿದೆ.
ಕಂದಾಯ ಇಲಾಖೆಯಿಂದ ನಿವೃತ್ತರಾಗಿದ್ದ ನಾರಾಯಣಸ್ವಾಮಿ ಅವರು, ಚಾಂಡ್ರಹಳ್ಳಿ ಗ್ರಾಮದಲ್ಲಿ ವಾಸವಾಗಿದ್ದರು. ಅಪರಿಚಿತ ವ್ಯಕ್ತಿಗಳು ಮದುವೆ ಆಮಂತ್ರಣ ಪತ್ರ ಕೊಡುವ ನೆಪದಲ್ಲಿ ಬಂದು ಮನೆಯಲ್ಲಿದ್ದ ಹಣ, ಚಿನ್ನ, ಬೆಳ್ಳಿ ದೋಚಿ ಪರಾರಿಯಾಗಿದ್ದಾರೆ. ರಾತ್ರಿ ಊಟ ಮಾಡಿ ಮಲಗಿದ್ದ ಸಮಯಕ್ಕೆ ಸುಮಾರು 10 ಗಂಟೆ ವೇಳೆಗೆ ಐದು ಜನರ ಅಪರಿಚಿತರ ಗುಂಪು ಬಾಗಿಲು ತಟ್ಟಿದ್ದರು. ಯಾರು ಎಂದು ಕೇಳಿದಾಗ ಶ್ರೀನಿವಾಸಪುರದಿಂದ ಮದುವೆ ಕಾರ್ಡ್ ಕೊಡಲು ಬಂದಿದ್ದೇವೆ ಎಂದು ಹೇಳಿದ್ದಾರೆ. ನಾರಾಯಣಸ್ವಾಮಿ ಅವರು ಬಾಗಿಲು ತೆರೆದಾಗ ದುಷ್ಕರ್ಮಿಗಳು ವೃದ್ಧ ದಂಪತಿ ಮೇಲೆ ಮುಗಿಬಿದ್ದು ಮನೆಯ ಸೋಪಾಗೆ ಅವರನ್ನು ಕಟ್ಟಿಹಾಕಿ. ಮನೆಯಲ್ಲಿದ್ದ 150 ಗ್ರಾಂ ಚಿನ್ನ, 250 ಗ್ರಾಂ ಬೆಳ್ಳಿ, ಹನ್ನೊಂದು ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ. ಈ ಬಗ್ಗೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…