ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ, ಪರ್ವತ ಮಾಲಾ ಪರಿಯೋಜನೆಗೆ ಅನುಮೋದನೆ ನೀಡಲಾಗಿದ್ದು, ಕೇದಾರನಾಥ ಸೇರಿದಂತೆ ಪ್ರಮುಖ ಯಾತ್ರಾ ಸ್ಥಳಗಳಿಗೆ ರೋಪ್ ವೇ ಸೌಲಭ್ಯ ಕಲ್ಪಿಸುವ ಯೋಜನೆ ಸಾಕಾರಗೊಳ್ಳಲಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ಪವಿತ್ರ ಚಾರ್ ಧಾಮ್ ಯಾತ್ರೆಯ ಮಹತ್ವದ ಸ್ಥಳವಾಗಿರುವ ಕೇದಾರನಾಥಕ್ಕೆ ಸೋನಪ್ರಯಾಗದಿಂದ 12.9 ಕಿಲೋಮೀಟರ್ ದೂರದ ರೋಪ್ ವೇ ನಿರ್ಮಾಣ ಮಾಡಲಾಗುವುದು. 4 ಸಾವಿರದ 81 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸೌಲಭ್ಯದಿಂದ ಯಾತ್ರಾರ್ಥಿಗಳಿಗೆ ಅನುಕೂಲವಾಗಲಿದ್ದು, 9 ಗಂಟೆಗಳ ಪ್ರಯಾಣದ ಅವಧಿ ಕೇವಲ 36 ನಿಮಿಷಗಳಿಗೆ ಇಳಿಕೆಯಾಗಲಿದೆ ಎಂದು ಹೇಳಿದರು. ಜೊತೆಗೆ, ಹೇಮಕುಂಡ ಸಾಹಿಬ್ ರೋಪ್ ವೇ ಯೋಜನೆಗೂ ಅನುಮತಿ ದೊರೆತಿದ್ದು, 2 ಸಾವಿರದ 730 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆ ಕಾರ್ಯರೂಪಕ್ಕೆ ಬರಲಿದೆ. ವ್ಯಾಲಿ ಆಫ್ ಫ್ಲಾವರ್ಸ್ ಗೆ ಭೇಟಿ ನೀಡುವ ಪ್ರವಾಸಿಗಳಿಗೂ ಇದರಿಂದ ಅನುಕೂಲವಾಗಲಿದೆ ಎಂದು ತಿಳಿಸಿದರು.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…