#APMC | ಇಂದು ಸಚಿವ ಸಂಪುಟ ಸಭೆಯಲ್ಲಿ ಏನೇನು ನಿರ್ಧಾರಗಳಾಯ್ತು..? | ಎಪಿಎಂಸಿಗಳಿಗೆ ಮೂಲಸೌಕರ್ಯ ಒದಗಿಸಲು 130 ಕೋಟಿ ರೂ ಮೀಸಲು |

July 27, 2023
9:43 PM
ಸಚಿವ ಸಂಪುಟದಲ್ಲಿ 15 ವಿಷಯಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಮೊಟ್ಟೆ ನೀಡುವ ವಿಚಾರ, ಕಲ್ಲು ಗಣಿಗಾರಿಕೆ, 67 ಕೈದಿಗಳ ಬಿಡುಗಡೆಗೆ ಒಪ್ಪಿಗೆ

ಸಹಕಾರ ಇಲಾಖೆ ಅಡಿಯಲ್ಲಿ ಎಪಿಎಂಸಿಗಳಿಗೆ ರಸ್ತೆ ನಿರ್ಮಾಣ ಮಾಡಲು, ಮೂಲಭೂತ ಸೌಲಭ್ಯ ಒದಗಿಸಿಕೊಡಲು 130.40 ಕೋಟಿ ಮಂಜೂರು ಮಾಡುವ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ ಎಂದು ಸಚಿವ ಎಚ್ ಕೆ ಪಾಟೀಲ್  ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ  ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಅವರು ಮಾಹಿತಿ ನೀಡಿದರು.

Advertisement

ಸಚಿವ ಸಂಪುಟದಲ್ಲಿ 15 ವಿಷಯಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಮೊಟ್ಟೆ ನೀಡುವ ವಿಚಾರಕ್ಕೆ ಸಂಬಂಧಿಸಿ ಚರ್ಚೆ ನಡೆದಿದ್ದು, ವಿಭಾಗವಾರು ಮೊಟ್ಟೆ ಖರೀದಿಸಿ ವಿತರಿಸುವ ನಿರ್ಣಯ ಕೈಗೊಳ್ಳಲಾಗಿದೆ. 297 ಕೋಟಿ ರೂಪಾಯಿ ಅನುದಾನ ಕೊಡಲಾಗಿದೆ. ಮಾರುಕಟ್ಟೆ ದರ ಮೀರದಂತೆ ಕೊಂಡುಕೊಳ್ಳಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಹಿಂದುಳಿದ ಆಯೋಗದ ಸಲಹೆಯಂತೆ ಹಾಗೂ ನ್ಯಾಯಾಲಯದ ಸಲಹೆಯಂತೆ ಹಿಂದುಳಿದ ವರ್ಗದ ಜಾತಿ ಪಟ್ಟಿಯ 3ಎ ಯಲ್ಲಿ ಇರುವ ಕೊಡಗರು ಎಂಬುದರ ಬದಲಾಗಿ ಕೊಡವ / ಕೊಡವರು ಅಂತ ಬದಲಾವಣೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು. ರಾಷ್ಟ್ರೀಯ ಉದ್ಯಾನವನ, ವನ್ಯಜೀವಿ ಧಾಮಗಳ ಸುತ್ತಮುತ್ತಲಿನ ಪ್ರದೇಶ ಪರಿಸರ ಸೂಕ್ಷ ವಲಯವೆಂದು ಘೋಷಣೆ ಮಾಡಲು ಅಧ್ಯಯನಕ್ಕೆ ಸಚಿವ ಸಂಪುಟ ಉಪ ಸಮಿತಿಯ ರಚನೆಗೆ ಹಸಿರು ನಿಶಾನೆ ತೋರಲಾಗಿದೆ.

67 ಕೈದಿಗಳ ಬಿಡುಗಡೆಗೆ ಒಪ್ಪಿಗೆ : ಸನ್ನಡತೆ ಆಧಾರದಲ್ಲಿ 67 ಕೈದಿಗಳ ಬಿಡುಗಡೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಭಾರತ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಸನ್ನಡೆತೆಯ ಆಧಾರದಲ್ಲಿ 67 ಕೈದಿಗಳ ಬಿಡುಗಡೆಗೆ ನಿರ್ಣಯ ಕೈಗೊಳ್ಳಲಾಗಿದೆ. ಸ್ವಾತಂತ್ರ್ಯ ದಿನಾಚರಣೆಯಂದು ಕೈದಿಗಳ ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದರು. ಬೆಂಗಳೂರು ಸೆಂಟ್ರಲ್ ಜೈಲ್​​ನಿಂದ 24, ಮೈಸೂರಿನಲ್ಲಿ 8, ಬೆಳಗಾವಿ 2, ಕಲಬುರ್ಗಿ 5, ಶಿವಮೊಗ್ಗ 6, ಬಳ್ಳಾರಿ 8, ಧಾರವಾಡ 2 ಮಂದಿ ಕೈದಿಗಳ ಬಿಡುಗಡೆಗೆ ನಿರ್ಣಯ ಕೈಗೊಳ್ಳಲಾಗಿದೆ.
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ
May 12, 2025
10:14 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ
May 12, 2025
2:17 PM
by: ಸಾಯಿಶೇಖರ್ ಕರಿಕಳ
ಕೃಷಿ ಅಕಾಡೆಮಿ ರಚನೆ – ಮುಳಿಯ ಕೃಷಿ ಗೋಷ್ಟಿಯಲ್ಲಿ ಕೇಶವ ಪ್ರಸಾದ್ ಮುಳಿಯ |
May 12, 2025
11:31 AM
by: ದ ರೂರಲ್ ಮಿರರ್.ಕಾಂ
ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ | ಏನು ಮಾಡ್ಬೇಕು? |
May 12, 2025
7:32 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group