ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ- NCDCಗೆ ಮುಂದಿನ ನಾಲ್ಕು ವರ್ಷಗಳಿಗಾಗಿ ಸಚಿವ ಸಂಪುಟ 2 ಸಾವಿರ ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಿರುವುದಕ್ಕೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಪ್ರಧಾನಿ ಅವರ ‘ಸಹಕಾರದಿಂದ ಸಮೃದ್ಧಿ’ ಎಂಬ ಮಂತ್ರಕ್ಕೆ ಅನುಗುಣವಾಗಿ ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮವು ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಇದು ಸಹಕಾರಿಗಳಿಗೆ ಹೊಸ ಯೋಜನೆಗಳನ್ನು ಆರಂಭಿಸಲು, ಘಟಕಗಳನ್ನು ವಿಸ್ತರಿಸಲು ಮತ್ತು ಸಾಲಗಳನ್ನು ನೀಡಲು ಸಹಾಯ ಮಾಡಲಿದೆ ಎಂದು ಹೇಳಿದ್ದಾರೆ. ಕೇಂದ್ರ ಸಂಪುಟದ ನಿರ್ಧಾರದಿಂದ ಸಹಕಾರಿ ಸಂಘಗಳೊಂದಿಗೆ ಸಂಬಂಧ ಹೊಂದಿರುವ ಕೋಟ್ಯಂತರ ಸದಸ್ಯರಿಗೆ ಪ್ರಯೋಜನವಾಗಲಿದೆ. ಮಹಿಳೆಯರು ಸ್ವಾವಲಂಬಿಗಳಾಗಲಿದ್ದಾರೆ ಮತ್ತು ಯುವಕರಿಗೆ ಉದ್ಯೋಗಾವಕಾಶಗಳು ದೊರೆಯಲಿವೆ. ದೇಶಾದ್ಯಂತ ಇರುವ ಸಹಕಾರಿ ವಲಯದ ಪರವಾಗಿ ಈ ಕಲ್ಯಾಣದ ನಿರ್ಧಾರಕ್ಕಾಗಿ ತಾವು ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಅಮಿತ್ ಶಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.
ಮಳೆ ಕೊರತೆ ಮತ್ತು ಜಲವಿದ್ಯುತ್ ಉತ್ಪಾದನೆ ಕುಸಿತದ ಹಿನ್ನೆಲೆಯಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ನೀಡುತ್ತಿದ್ದ…
ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವ ಅಕ್ಟೋಬರ್…
ಪಿಎಂ-ಕುಸುಮ್ ಯೋಜನೆಯಡಿ ರೈತರ ನೀರಾವರಿ ಪಂಪ್‌ಗಳಿಗೆ ಸೌರಶಕ್ತಿ ಅಳವಡಿಸುವ ಮೂಲಕ ಡೀಸೆಲ್ ಅವಲಂಬನೆ…
ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಡಬಲ್ ಡೆಕ್ಕರ್ ಸ್ಲೀಪರ್ ಬಸ್‌ಗೆ ಬೆಂಕಿ ಹೊತ್ತಿಕೊಂಡು…
ಕರ್ನಾಟಕದ 111 ತಾಲೂಕುಗಳ ವ್ಯಾಪ್ತಿಯ 531 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು,…
ಹವಾಮಾನ ಬದಲಾವಣೆಯಿಂದ ಪಶ್ಚಿಮ ಘಟ್ಟದ ನೀಲಗಿರಿ ಜೀವಗೋಳದಲ್ಲಿನ ಕಾಡು ಪರಿಸರ ವ್ಯವಸ್ಥೆಗಳು ಅಸ್ಥಿರವಾಗುವ…