Advertisement
ಸುದ್ದಿಗಳು

ಸಮರ್ಪಣೆಯ ಗುಣದ ಕಾರಣಕ್ಕಾಗಿ ಸಂಘದ ಸ್ವಯಂಸೇವಕರು ಸಮಾಜದಲ್ಲಿ ಧನಾತ್ಮಕವಾಗಿ ಗುರುತಿಸಿಕೊಂಡಿದ್ದಾರೆ – ದಾ ಮ ರವೀಂದ್ರ

Share

ಸಮಾಜದ ಅಭಿವೃದ್ಧಿಗಾಗಿ ಹಿಂದೆ ಸಮಯ ಕೊಟ್ಟವರು, ಜೀವನವನ್ನು ಮುಡಿಪಾಗಿಟ್ಟವರು ಸಂಘದ ಈಗಿನ ಉನ್ನತಿಯನ್ನು ಕಾಣದೆಯೇ ಮರೆಯಾಗಿದ್ದಾರೆ. ಅವರ ಪರಿಶ್ರಮದಿಂದ ಸಂಘ ಬೆಳೆದಿದೆ. ಈಗ ಸಂಘದ ಸ್ವಯಂಸೇವಕನ ನಡವಳಿಕೆ ಮತ್ತು ವ್ಯವಹಾರದಿಂದ ಸ್ವಯಂಸೇವಕತ್ವ ಹೊರ ಜಗತ್ತಿಗೆ ಪರಿಚಯವಾಗಬೇಕು ಎಂಬ ಸಂಘದ ಧ್ಯೇಯಕ್ಕೆ ಸ್ವಯಂಸೇವಕರು ಕಾರ್ಯಪ್ರವೃತ್ತರಾಗಬೇಕು.  ಸಂಘದ ಸ್ವಯಂಸೇವಕರೂ ತಮ್ಮ ಸಮರ್ಪಣೆಯ ಗುಣದ ಕಾರಣಕ್ಕಾಗಿ ಸಮಾಜದಲ್ಲಿ ಧನಾತ್ಮಕವಾಗಿ ಗುರುತಿಸಿಕೊಂಡಿದ್ದಾರೆ. ಈಗ  ಸಮಾಜವನ್ನು ವಿಸ್ತಾರವಾಗಿ ನೋಡಿದಾಗ ಸಂಘ ಕಾರ್ಯದ ಅನಿವಾರ್ಯತೆ ಅರಿವಾಗುತ್ತದೆ ಎಂದು ರಾಷ್ಟ್ರೀಯ ಸ್ವಯಂಸ್ವೇವಕ ಸಂಘದ ಹಿರಿಯ ಪ್ರಚಾರಕ ದಾ.ಮ.ರವೀಂದ್ರ ಹೇಳಿದರು.

Advertisement
Advertisement
Advertisement

ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪುತ್ತೂರು ಜಿಲ್ಲೆಯ ನೂತನ ಕಾರ್ಯಾಲಯದ ಭೂಮಿ ಪೂಜನಾ ಕಾರ್ಯಕ್ರಮ ಮತ್ತು ವಿಜಯದಶಮಿ ಉತ್ಸವದಲ್ಲಿ ಪಾಲ್ಗೊಂಡು ಮಾತನಾಡಿದರು. ಸಂಘ ಸ್ಥಾಪನೆಯಾಗಿ ನೂರು ವರ್ಷಗಳನ್ನು ಪೂರೈಸುತ್ತಿರುವ ಈ ಸಂದರ್ಭದಲ್ಲಿ ಸಂಘ ಪ್ರಾರಂಭವಾಗಿದ್ಯಾಕೆ? ಸಂಘ ಎಷ್ಟು ಜನರನ್ನು ತಲುಪಿದೆ? ಎಂಬಿತ್ಯಾದಿ ಪ್ರಶ್ನೆ ಇಂದು ಹಲವರಲ್ಲಿದೆ. ಯಾವುದೇ ಅನುಕೂಲಗಳಿಲ್ಲದೆ, ವಿದೇಶಿಗರ ಆಳ್ವಿಕೆಯ ಸಂದರ್ಭದಲ್ಲಿ, ವಿರೋಧವಿದ್ದಾಗ ಸಂಘಕಾರ್ಯವನ್ನು ಸಂಘದ ಸಂಸ್ಥಾಪಕ ಪ.ಪೂ.ಡಾಕ್ಟರ್ ಕೇಶವ ಬಲಿರಾಮ ಹೆಡಗೇವಾರರು ಪ್ರಾರಂಭ ಮಾಡಿದರು ಎಂದ ಅವರು ಸಂಘಸ್ಥಾನದಲ್ಲಿ ದೊರೆತ ಸಂಸ್ಕಾರವನ್ನು ನಮ್ಮ ಜೀವನದಲ್ಲಿ ನಾವು ಎಷ್ಟು ಅಳವಡಿಸಿಕೊಂಡಿದ್ದೇವೆ ಎನ್ನುವುದರ ಕುರಿತು ಗಮನವಹಿಸಿದಾಗಲೇ ಸಂಘದ ಸಾಮರ್ಥ್ಯ  ಅರಿವಾಗುತ್ತದೆ. ಹೆಸರು, ಕೀರ್ತಿ, ಪ್ರಸಿದ್ಧಿ, ಸ್ಥಾನಮಾನ, ಅಧಿಕಾರ, ಹಣವನ್ನು ಬಯಸದೆ ಸ್ವಯಂಸೇವಕ ಕಾರ್ಯನಿರತನಾಗಬೇಕು. ಸಂಘದ ಸ್ವಯಂಸೇವಕನನ್ನು ಅರ್ಥ ಮಾಡಿಕೊಂಡರೆ ಸಂಘವನ್ನು ಅರ್ಥ ಮಾಡಿಕೊಂಡಂತೆ. ಆದ್ದರಿಂದ ಕೇವಲ ಹೊರ ರೂಪದ ಸ್ವಯಂಸೇವಕರಾಗದೆ ಅಂತಃರಂಗದ ಸ್ವಯಂಸೇವಕರಾಗಬೇಕು ಎಂದರು.

Advertisement

ನೂತನ ಕಾರ್ಯಾಲಯದ ಭೂಮಿಪೂಜನ ಕಾರ್ಯಕ್ರಮದಲ್ಲಿ ಅಖಿಲ ಭಾರತೀಯ ಕುಟುಂಬ ಪ್ರಬೋಧನ್ ಟೋಳಿ ಸದಸ್ಯ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಮಾತನಾಡಿ ರಾಷ್ಟ್ರಕ್ಕೆ ಅಧರ್ಮಿಗಳ ದಾಳಿಗಳಾದಾಗ ಅದನ್ನು ಎದುರಿಸಲು ದೇವಿ ಅನೇಕ ಅವತಾರಗಳನ್ನು ತಳೆದಳು ಎಂಬ ನಂಬಿಕೆ ನಮ್ಮಲ್ಲಿದೆ. ಸಂಘಟನೆ ಇದ್ದರೆ ಏನು ಬೇಕಾದರೂ ಸಾಧಿಸಬಹುದು ಎನ್ನುವುದನ್ನು ಇದು ತಿಳಿಸುತ್ತದೆ. ಇದನ್ನು ಮನಗಂಡ ಪ.ಪೂ. ಡಾ.ಕೇಶವ ಬಲಿರಾಮ ಹೆಡಗೇವಾರರು ಈ ರಾಷ್ಟ್ರದ ಸತ್ ಶಕ್ತಿಗಳೊಂದಾಗಿ, ಇಲ್ಲಿನ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಕಾಣುವಂತಾಗಬೇಕು ಎಂದು ಕನಸುಕಂಡರು ಎಂದರು.

Advertisement

ಕಾರ್ಯಕ್ರಮದಲ್ಲಿ ಹಿರಿಯ ಪ್ರಚಾರಕ ಸೀತಾರಾಮ ಕೆದಿಲಾಯ, ಪ್ರಾಂತ ಸಂಘಚಾಲಕ ಡಾ.ವಾಮನ್ ಶೆಣೈ, ಪ್ರಾಂತ ಕಾರ್ಯಕಾರಿಣಿ ಆಮಂತ್ರಿತ ಸದಸ್ಯ ಡಾ.ಕಲ್ಲಡ್ಕ ಪ್ರಭಾಕರ ಭಟ್, ಹೊಸದಿಗಂತ ಪತ್ರಿಕೆಯ ನಿರ್ವಾಹಕ ನಿರ್ದೇಶಕ ಪ್ರಕಾಶ್ ಪಿ.ಎಸ್, ದಕ್ಷಿಣ ಪ್ರಾಂತದ ಸಹ ಪ್ರಾಂತ ಪ್ರಚಾರಕ ನಂದೀಶ್, ಪ್ರಾಂತ ಸಹ ಸೇವಾಪ್ರಮುಖ್ ನ.ಸೀತಾರಾಮ, ಪ್ರಾಂತ ಗೋಸೇವಾ ಪ್ರಮುಖ್ ಪ್ರವೀಣ್ ಸರಳಾಯ, ಸಚಿವ ಎಸ್.ಅಂಗಾರ, ಪುತ್ತೂರಿನ ಶಾಸಕ ಸಂಜೀವ ಮಠಂದೂರು, ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ಮತ್ತು ಸಂಘದ  ಕಾರ್ಯಕರ್ತರು ಭಾಗಿಯಾಗಿದ್ದರು. ವಿಜಯದಶಮಿಯ ಪ್ರಯುಕ್ತ  ಪಥಸಂಚಲನ ಜರುಗಿತು.

ಭೂಮಿ ಪೂಜೆಗೆ ಪುತ್ತೂರಿನ ಪವಿತ್ರ ನದಿಗಳ ಜಲ ಮತ್ತು ಹಲವು ದೇವಸ್ಥಾನಗಳ ತೀರ್ಥ ಸಮರ್ಪಣೆ ನಡೆಯಿತು.  ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ವಿ.ಎಸ್.ಭಟ್ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಬೆಳೆಗಾರರು ಏಕೆ ಜಾಗ್ರತರಾಗಬೇಕಿದೆ..?

ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…

21 hours ago

ಮೊಗ್ರದಲ್ಲಿ ಕಾಲಾವಧಿ ನೇಮ

https://youtu.be/YgcAfgYUbGQ?si=vp1TmN5dQYAkVPBy

1 day ago

ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ

ಸಿರಿಧಾನ್ಯಗಳ  ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು  ಕೃಷಿ ಇಲಾಖೆ  “ಸಿರಿಧಾನ್ಯ ಓಟ…

3 days ago

ಬೆಂಗಳೂರಿನಲ್ಲಿ ತುಂತುರು ಮಳೆ | ರಾಜ್ಯಾದ್ಯಂತ ಮುಂದಿನ ಐದು ದಿನ ಮಳೆ ಸಾಧ್ಯತೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…

3 days ago

ಹವಾಮಾನ ವರದಿ | 19.01.2025 | ಇಂದು ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಕೃಷಿಕರೇ ಇರಲಿ ಎಚ್ಚರ |

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…

4 days ago