ಸಚಿವರನ್ನು ಸಾಮಾಜಿಕ ಜಾಲತಾಣದಲ್ಲಿ ತರಾಟೆಗೆ ತೆಗೆದುಕೊಂಡ ಆರ್‌ಎಸ್‌ಎಸ್‌ ಪ್ರಮುಖರು | ನೀವು ಸರಿಯಾಗುವುದು ಯಾವಾಗ ಎಂದು ಪ್ರಶ್ನಿಸಿದರು…! |

September 21, 2022
2:32 PM

ತೀರಾ ವಿಷಾದದಿಂದ ಸಚಿವ ಅಂಗಾರ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಆರ್‌ಎಸ್‌ಎಸ್‌ (RSS) ಪ್ರಚಾರಕರೊಬ್ಬರು ತರಾಟೆಗೆ ತೆಗೆದುಕೊಂಡಿರುವುದು ಕಂಡುಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಪ್ರಚಾರಕರೊಬ್ಬರು ಬಹಿರಂಗವಾಗಿಯೇ ತರಾಟೆಗೆ ತೆಗೆದುಕೊಂಡಿರುವುದು ಈಗ ಚರ್ಚೆಯ ವಿಷಯವಾಗಿದೆ.

ಭಾರತ ಸರ್ಕಾರದ ಭೂವಿಜ್ಞಾನ ಮಂತ್ರಾಲಯ ಹಾಗೂ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ ಪಣಂಬೂರು ಕಡಲ ತೀರದಲ್ಲಿ ನಡೆದ ಕಡಲ ತೀರ ಸ್ವಚ್ಚತಾ ಅಭಿಯಾನ ಮತ್ತು ಸ್ವಚ್ಛ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯಿತು.  ಈ ಕಾರ್ಯಕ್ರಮಕ್ಕೆ ಸಂಬಂಧಿಸಿ ಹಾಗೂ ಅಭಿವೃದ್ಧಿ ಕಾರ್ಯದ ಬಗ್ಗೆ ಮಾತುಕತೆ ನಡೆದಿತ್ತು ಎನ್ನಲಾಗಿದೆ. ಕೇಂದ್ರ ಸರ್ಕಾರ ಹಲವು ಕಾರ್ಯಕ್ರಮ ನಡೆಸುತ್ತಿದೆ. ಹಾಗಿದ್ದರೂ ನದಿ ಸ್ವಚ್ಛತೆ , ಕಡಲ ತೀರದ ಸ್ವಚ್ಛತೆಯ ಕಡೆಗೆ ಗಮನಹರಿಸಬೇಕಿತ್ತು. ಈ ಪೇಸ್‌ ಬುಕ್  ಪೋಸ್ಟ್‌ ನಲ್ಲಿ    ಬಹಿರಂಗವಾಗಿಯೇ ಆರ್‌ಎಸ್‌ಎಸ್‌ ಪ್ರಚಾರಕ ಜಯರಾಮ ಬೊಳ್ಳಾಜೆ ಎಂಬವರು ಸಚಿವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಎರಡು ಪೋಸ್ಟ್‌ಗಳಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯೆ ಮಾಡಿದ್ದಾರೆ.

ಇದಾದ ಬಳಿಕ  ಪ್ರಧಾನಿಗಳ 72 ನೇ ಜನ್ಮದಿನಾಚರಣೆಗೆ ಸಂಬಂಧಿಸಿದ ಮತ್ತೊಂದು ಪೇಸ್‌ ಬುಕ್‌ ಪೋಸ್ಟ್‌ನಲ್ಲಿಯೂ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ ಆರ್‌ ಎಸ್‌ ಎಸ್‌ ಪ್ರಮುಖರಾದ ಜಯರಾಮ ಬೊಳ್ಳಾಜೆ.

Advertisement

ಸುಳ್ಯವು ಬಿಜೆಪಿ ಹಾಗೂ ಆರ್‌ ಎಸ್‌ ಎಸ್ ಪ್ರಯೋಗ ಶಾಲೆಯಾಗಿದೆ.‌ ಕಳೆದ ಹಲವು ಸಮಯಗಳಿಂದ ವಿವಿಧ ಪ್ರಯತ್ನಗಳು ಇಲ್ಲಿಯೇ ನಡೆದು ರಾಜ್ಯದವರೆಗೆ ವಿಸ್ತರಿಸಲಾಗಿದ್ದು. ಎಲ್‌ ಕೆ ಅಡ್ವಾನಿ ಅವರಿಂದಲೂ ಬಿಜೆಪಿಗೆ ಸುಳ್ಯವು ದಕ್ಷಿಣ ಭಾರತದ ಹೆಬ್ಬಾಗಿಲು ಎಂದೇ ಕರೆಯಲಾಗಿತ್ತು. ಅಂತಹ ಪ್ರಯೋಗ ಶಾಲೆಯಲ್ಲಿ ಇದೀಗ ಸಚಿವರ ಕಾರ್ಯಕ್ಷಮತೆಯ ಬಗ್ಗೆ ಆರ್‌ ಎಸ್‌ ಎಸ್‌ ಪ್ರಮುಖರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿಯೇ ಪ್ರತಿಕ್ರಿಯೆ ನೀಡಿರುವುದು  ಸುಳ್ಯದ ಈಗಿನ ವಾಸ್ತವ ಸ್ಥಿತಿಯ ಕೈಗನ್ನಡಿ ಎಂಬುದು  ಈಗ ಚರ್ಚೆಯಾಗುತ್ತಿದೆ. ಸುಳ್ಯದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳು ನಡೆಯಲು ಬಾಕಿ ಇದೆ. ಗ್ರಾಮೀಣ ಭಾಗಗಳಿಗೆ ಹಲವು ಸೇತುವೆಗಳ ರಚನೆ ಇನ್ನೂ ನೆನೆಗುದಿಗೆ ಬಿದ್ದಿದೆ, ರಸ್ತೆಗಳ ಅವ್ಯವಸ್ಥೆ ಸೇರಿದಂತೆ ಮೂಲಭೂತ ಸಮಸ್ಯೆಗಳೇ ಆಗಾಗ ಚರ್ಚೆಯಾಗುತ್ತಿದೆ. ಇದೀಗ ಕೇಂದ್ರ ಸರ್ಕಾರದ ಯೋಜನೆಯೊಂದರ ಅನುಷ್ಟಾನ ಹಾಗೂ ಕಾರ್ಯಯೋಜನೆಯ ಬಗ್ಗೆ ಆರ್‌ ಎಸ್‌ ಎಸ್‌ ಪ್ರಚಾರಕರ ಮಾತುಗಳು ತೀರಾ ವಿಷಾದಿಂದ ಕೂಡಿತ್ತು ಹಾಗೂ ಖಡಕ್‌ ಆಗಿಯೇ ಪ್ರತಿಕ್ರಿಯೆ ಮಾಡಿದ್ದಾರೆ.

 

 

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದ ಕರಾವಳಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ
September 18, 2025
9:25 PM
by: The Rural Mirror ಸುದ್ದಿಜಾಲ
ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ತ್ವರಿತವಾಗಿ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಮುಖ್ಯ ಆಯುಕ್ತ ಮಹೇಶ್ವರ ರಾವ್ ಸೂಚನೆ
September 18, 2025
9:11 PM
by: The Rural Mirror ಸುದ್ದಿಜಾಲ
ಮಳೆ ಹಾನಿ ಬೆಳೆನಷ್ಟ ಪರಿಹಾರ ಹೆಚ್ಚಿಸುವವಂತೆ ರೈತರ ನಿಯೋಗದಿಂದ ಮುಖ್ಯಮಂತ್ರಿಗಳಿಗೆ ಒತ್ತಾಯ
September 18, 2025
9:06 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 18-09-2025 | ಮುಂಗಾರು ದುರ್ಬಲ – ಅಲ್ಲಲ್ಲಿ ಗುಡುಗು ಮಳೆ | ಸೆ.19 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸೂಚನೆ
September 18, 2025
1:38 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group