ಸಂಕಷ್ಟದಲ್ಲಿರುವ ರಬ್ಬರ್ ಬೆಳೆಗಾರರನ್ನು ರಕ್ಷಣೆ ಮಾಡಲು ರಬ್ಬರಿಗೆ ಬೆಂಬಲ ಬೆಲೆಯನ್ನು ಈ ಬಜೆಟ್ ನಲ್ಲಿ ಘೋಷಿಸುವಂತೆ ಮುಖ್ಯಮಂತ್ರಿಯವರಿಗೆ ಕ್ಯಾಂಪ್ಕೋ ಮನವಿ ಮಾಡಿದೆ.
ಇದೇ ವೇಳೆ ಅಡಿಕೆ ತೋಟವನ್ನು ಬಾಧಿಸುತ್ತಿರುವ ಹಳದಿ ಎಲೆ ಮತ್ತು ಎಲೆ ಚುಕ್ಕಿ ರೋಗಕ್ಕೆ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ಖಾಸಗಿ ವಿಜ್ಞಾನಿಗಳ ಸಹಭಾಗಿತ್ವದಲ್ಲಿ ಸಂಶೋಧನೆ ಮಾಡಲು ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನಕ್ಕೆ 10 ಕೋಟಿ ರೂಪಾಯಿ ಅನುದಾನ ನೀಡಲು ಮನವಿ ಮಾಡಿದೆ. ಮುಖ್ಯಮಂತ್ರಿಯವರಿಂದ ಸಕರಾತ್ಮಕ ಸ್ಪಂದನೆ ದೊರಕಿದ್ದು ರಬ್ಬರಿಗೆ ಬೆಂಬಲ ಬೆಲೆ ಮತ್ತು ಸಂಶೋಧನಾ ಕೇಂದ್ರಕ್ಕೆ ಅನುದಾನ ಬಿಡುಗಡೆಯಾಗುವ ಬಗ್ಗೆ ಕ್ಯಾಂಪ್ಕೊ ಆಡಳಿತ ಮಂಡಳಿ ನಿರೀಕ್ಷೆಯಲ್ಲಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎ.ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel