ಭಾರತವು ಸಾಕಷ್ಟು ದೇಶೀಯ ಟಯರ್ ಉತ್ಪಾದನಾ ಸಾಮರ್ಥ್ಯವನ್ನು ಹೊಂದಿದೆ. ಹೀಗಾಗಿ ಮುಕ್ತ ವ್ಯಾಪಾರ ಒಪ್ಪಂದಗಳ ಮೂಲಕ ಟಯರ್ ಹಾಗೂ ರಬ್ಬರ್ ಆಮದು ಮಾಡಬಾರದು ಎಂದು ಅಟೋಮೋಟಿವ್ ಟಯರ್ ತಯಾರಕರ ಸಂಘ (ATMA) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.
ದೇಶದ 10 ಲಕ್ಷಕ್ಕೂ ಹೆಚ್ಚು ರಬ್ಬರ್ ಬೆಳೆಗಾರರು ರಬ್ಬರ್ ನಂಬಿ ಬದುಕು ಸಾಗಿಸುತ್ತಿದ್ದಾರೆ. ದೇಶೀಯ ರಬ್ಬರ್‌ನ ಉತ್ಪಾದನೆಯ ಶೇಕಡಾ 70 ಕ್ಕಿಂತ ಹೆಚ್ಚು ಟಯರ್ ಉದ್ಯಮದಲ್ಲಿ ಬಳಸಲಾಗುತ್ತಿದೆ. ಹೀಗಾಗಿ ಟಯರ್ ಉದ್ಯಮವನ್ನು ಕೂಡಾ ರಕ್ಷಣೆ ಮಾಡಬೇಕಿದೆ, ರಬ್ಬರ್ ಆಮದು ತಡೆಯಬೇಕಿದೆ ಎಂದು ಟಯರ್ ತಯಾರಕರ ಸಂಘ ಹೇಳಿದೆ.
ದೇಶೀಯ ರಬ್ಬರ್ ಹಾಗೂ ಟಯರ್ ಉತ್ಪಾದನೆಯನ್ನು ಉತ್ತೇಜಿಸುವ ಮೂಲಕ ಮತ್ತು ತಾಂತ್ರಿಕ ಪ್ರಗತಿಯನ್ನು ಹೆಚ್ಚಿಸುವ ಮೂಲಕ, ಉದ್ಯೋಗವನ್ನು ಸೃಷ್ಟಿಸುವ, ಸುಸ್ಥಿರತೆಯನ್ನು ಉತ್ತೇಜಿಸುವ ಮತ್ತು ಆರ್ಥಿಕ ಬೆಳವಣಿಗೆಯನ್ನು ವೃದ್ಧಿ ಮಾಡಬಹುದು ಹಾಗೂ ಭಾರತವು ಟಯರ್ ಉದ್ಯಮದಲ್ಲಿ ಪ್ರಮುಖ ಸ್ಥಾನ ಪಡೆಯಲು ಸಾಧ್ಯವಿದೆ ಎಂದು ATMA ಹೇಳಿದೆ.
ಅಲ್ಲಲ್ಲಿ ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ೨…
ಹಲಸಿನ ಕಾಯಿ ಪೂರಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಕಾಯಿ 1/2 ಕಪ್, ಗೋಧಿ ಹುಡಿ.1…
ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು…
ನೈಸರ್ಗಿಕ ರಬ್ಬರ್ ಮತ್ತು ಅದರ ಉತ್ಪನ್ನಗಳು ಅರಣ್ಯನಾಶ ಮುಕ್ತ ನಿಯಮಗಳಿಗಾಗಿ ಯುರೋಪಿಯನ್ ಒಕ್ಕೂಟ…
ಮುನ್ಸೂಚನೆಯಂತೆ ಮೇ 1 ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.