ರಬ್ಬರ್‌ ಬೆಲೆ ಕುಸಿತ | ತೋಟಗಾರಿಕೆ ಸಚಿವರಿಗೆ ಮನವಿ | ಕೇರಳ ಮಾದರಿಯಲ್ಲಿ ಬೆಂಬಲ ಬೆಲೆ ಘೋಷಿಸುವಂತೆ ಒತ್ತಾಯ |

January 10, 2023
9:05 PM

ರಬ್ಬರ್ ಬೆಲೆ ಕುಸಿತ ಹಾಗೂ ಇತರ ಸಮಸ್ಯೆಗಳ ಬಗ್ಗೆ ನಿಯೋಗವು ಬೆಂಗಳೂರಿನಲ್ಲಿ ತೋಟಗಾರಿಕೆ ಸಚಿವ ಮುನಿರತ್ನ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಕೇರಳ ಮಾದರಿಯಲ್ಲಿ ಕರ್ನಾಟಕದಲ್ಲೂ ಬೆಂಬಲ ಬೆಲೆ ಘೋಷಿಸುವಂತೆ ಮನವಿಸಲಾಯಿತು.

Advertisement

ಉಜಿರೆ ರಬ್ಬರ್ ಸೊಸೈಟಿ ಹಾಗೂ  ಕರ್ನಾಟಕ ಸೀರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಶನ್ ಹಾಗೂ ಶಾಸಕ ಹರೀಶ್‌ ಪೂಂಜಾ ನೇತೃತ್ವದ ನಿಯೋಗವು ಸಚಿವರನ್ನು ಭೇಟಿಯಾಯಿತು. ಈ ಸಂದರ್ಭ ರಬ್ಬರ್ ಕೃಷಿಕರ ಸಮಸ್ಯೆಯನ್ನು ಸಚಿವರಿಗೆ ಮನವರಿಕೆ ಮಾಡಲಾಯಿತು. ಅಲ್ಲದೆ ಕೇರಳ ಮಾದರಿಯಲ್ಲಿ ಕರ್ನಾಟಕದಲ್ಲೂ ಬೆಂಬಲ ಬೆಲೆ ಘೋಷಿಸುವಂತೆ ಮನವಿಸಲಾಯಿತು.

ಈ ವೇಳೆ ಪ್ರತಿಕ್ರಿಯಿಸಿದ ಸಚಿವರು ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ನಿಯೋಗದಲ್ಲಿ ರಬ್ಬರ್ ಸೊಸೈಟಿ ಅಧ್ಯಕ್ಷ ಶ್ರೀಧರ್ ಜಿ‌ ಭಿಡೆ, ಉಪಾಧ್ಯಕ್ಷ ಅನಂತ್ ಭಟ್ ಮಚ್ಚಿಮಲೆ,  ಕರ್ನಾಟಕ ಸೀರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಶನ್ ನಿರ್ದೇಶಕ ಫಾ. ಶಾಜಿ ಮ್ಯಾಥ್ಯು , ಅಧ್ಯಕ್ಷ ಬಿಟ್ಟಿ ಬಿ ನೆಡುನಿಲಂ, ಪ್ರಧಾನ ಕಾರ್ಯದರ್ಶಿ ಸೆಬಾಸ್ಟಿಯನ್ ಎಂ.ಜೆ,‌ ಪಿಆರ್‌ಒ ಸೆಬಾಸ್ಟಿಯನ್ ಪಿ ಸಿ, , ಸಿಇಒ ರಾಜು ಶೆಟ್ಟಿ, ನಿರ್ದೇಶಕ ಎಚ್ ಪದ್ಮ ಗೌಡ ಮೊದಲಾದವರು ಉಪಸ್ಥಿತರಿದ್ದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಅವಧಿ ವಿಸ್ತರಣೆ
May 2, 2025
8:22 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 02-05-2025 | ಕೆಲವು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ | ಮೇ 6ರಿಂದ ಹೆಚ್ಚಾಗುವ ನಿರೀಕ್ಷೆ|
May 2, 2025
2:14 PM
by: ಸಾಯಿಶೇಖರ್ ಕರಿಕಳ
ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿ | ಮೃತಪಟ್ಟ ಕುಟುಂಬಗಳಿಗೆ  ಶೃಂಗೇರಿ ಮಠದಿಂದ 2 ಲಕ್ಷ ಪರಿಹಾರ
May 2, 2025
7:13 AM
by: The Rural Mirror ಸುದ್ದಿಜಾಲ
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆ ಸಾಧ್ಯತೆ
May 2, 2025
6:58 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group